ರಾಜ್ಯ

ರಾಜ್ಯದಲ್ಲಿ ಕೊರೋನಾ ಇಳಿಕೆ: 310 ಹೊಸ ಸೋಂಕಿತರು ಪತ್ತೆ; 347 ಗುಣಮುಖ, 6 ಸಾವು; ಏಳು ಜಿಲ್ಲೆಗಳಲ್ಲಿ ಶೂನ್ಯ ಪ್ರಕರಣ

Nagaraja AB

ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಇಳಿಕೆ ಮುಂದುವರೆದಿದೆ. ಕಳೆದ 24 ಗಂಟೆಗಳಲ್ಲಿ ರಾಜ್ಯದಲ್ಲಿ 310 ಹೊಸ ಪ್ರಕರಣ ಪತ್ತೆಯಾಗಿದೆ. ಇದರೊಂದಿಗೆ ಸೋಂಕಿತರ ಒಟ್ಟು ಸಂಖ್ಯೆ 29,82,399ಕ್ಕೆ ಏರಿಕೆಯಾಗಿದೆ.

347 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದು, ಒಟ್ಟಾರೇ ಗುಣಮುಖರಾದವರ ಸಂಖ್ಯೆ 29,34,870ಕ್ಕೆ ಏರಿಕೆಯಾಗಿದೆ. ರಾಜ್ಯದಲ್ಲಿ ಸದ್ಯ 9,578 ಸಕ್ರಿಯ ಪ್ರಕರಣಗಳಿರುವುದಾಗಿ ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.

ಸೋಂಕಿನಿಂದ ಇಂದು ಆರು ಮಂದಿ ಸಾವನ್ನಪ್ಪಿದ್ದು, ಒಟ್ಟಾರೇ ಮೃತರ ಸಂಖ್ಯೆ 37,922 ಆಗಿದೆ. ರಾಜ್ಯದಲ್ಲಿ ಸೋಂಕಿನ ಪ್ರಮಾಣ ಶೇ.0.26 ರಷ್ಟಿದ್ದು, ಮರಣ ಪ್ರಮಾಣ ಶೇ. 1.93ರಷ್ಟಿದೆ. ಬೆಂಗಳೂರಿನಲ್ಲಿ 148 ಹೊಸ ಪ್ರಕರಣ ಪತ್ತೆಯಾಗಿದ್ದು, 82 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಇಬ್ಬರು ಸೋಂಕಿತರು ಮೃತಪಟ್ಟಿದ್ದಾರೆ.

ಬಾಗಲಕೋಟೆ, ಗದಗ್, ಕಲಬುರಗಿ, ಕೊಪ್ಪಳ, ರಾಮನಗರ, ವಿಜಯಪುರ, ಯಾದಗಿರಿ ಜಿಲ್ಲೆಗಳಲ್ಲಿ ಶೂನ್ಯ ಪ್ರಕರಣ ವರದಿಯಾಗಿದೆ. ಬೆಂಗಳೂರು ನಗರ ಹೊರತುಪಡಿಸಿದರೆ, ಉಳಿದ ಎಲ್ಲಾ ಕಡೆ ಹೊಸ ಪ್ರಕರಣಗಳ ಸಂಖ್ಯೆ ಎರಡಕ್ಕಿಂತ ದಾಟಿಲ್ಲ.

SCROLL FOR NEXT