ಚಾಮುಂಡೇಶ್ವರಿ ದೇವಿಯ ಉತ್ಸವ ಮೂರ್ತಿ 
ರಾಜ್ಯ

ಇದೇ ಮೊದಲ ಬಾರಿಗೆ ಚಾಮುಂಡಿ ಬೆಟ್ಟದಿಂದ ಅರಮನೆಗೆ ಅಂಬಾರಿ ಉತ್ಸವ ಮೂರ್ತಿ

ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಕೇಂದ್ರ ಬಿಂದು ಜಂಬೂ ಸವಾರಿ ಮೆರವಣಿಗೆಯಲ್ಲಿ ಚಿನ್ನದ ಅಂಬಾರಿಯಲ್ಲಿ ವಿರಾಜಮಾನವಾಗಿ ಸಾಗುವ ಚಾಮುಂಡೇಶ್ವರಿ ದೇವಿಯ ಉತ್ಸವ ಮೂರ್ತಿಯನ್ನು ಇದೇ ಮೊದಲ ಬಾರಿಗೆ ಚಾಮುಂಡಿ ಬೆಟ್ಟದಿಂದ ಅಲಂಕೃತ ವಾಹನದಲ್ಲಿ ವಿವಿಧ ಕಲಾತಂಡಗಳ ಜೊತೆಗೆ ಮೆರವಣಿಗೆ ಮೂಲಕ ಅರಮನೆಗೆ ತರಲಾಗುತ್ತಿದೆ.

ಮೈಸೂರು: ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಕೇಂದ್ರ ಬಿಂದು ಜಂಬೂ ಸವಾರಿ ಮೆರವಣಿಗೆಯಲ್ಲಿ ಚಿನ್ನದ ಅಂಬಾರಿಯಲ್ಲಿ ವಿರಾಜಮಾನವಾಗಿ ಸಾಗುವ ಚಾಮುಂಡೇಶ್ವರಿ ದೇವಿಯ ಉತ್ಸವ ಮೂರ್ತಿಯನ್ನು ಇದೇ ಮೊದಲ ಬಾರಿಗೆ ಚಾಮುಂಡಿ ಬೆಟ್ಟದಿಂದ ಅಲಂಕೃತ ವಾಹನದಲ್ಲಿ ವಿವಿಧ ಕಲಾತಂಡಗಳ ಜೊತೆಗೆ ಮೆರವಣಿಗೆ ಮೂಲಕ ಅರಮನೆಗೆ ತರಲಾಗುತ್ತಿದೆ.

ವಿಜಯದಶಮಿ ದಿನವಾದ ಶುಕ್ರವಾರ ಬೆಳಗ್ಗೆ 8 ಗಂಟೆಗೆ ಸಹಕಾರ ಮತ್ತು ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಸ್. ಟಿ, ಸೋಮಶೇಖರ್ ಚಾಮುಂಡೇಶ್ವರಿ ಉತ್ಸವ ಮೂರ್ತಿಗೆ ಪೂಜೆ ಸಲ್ಲಿಸಿ, ಮೆರವಣಿಗೆಗೆ ಚಾಲನೆ ನೀಡುವರು.

ಚಾಮುಂಡೇಶ್ವರಿ ಉತ್ಸವ ಮೂರ್ತಿ ತರುವ ಅಲಂಕೃತ ವಾಹನದೊಂದಿಗೆ ನಾದಸ್ವರ ತಂಡ, ಪೊಲೀಸ್ ಬ್ಯಾಂಡ್, ಅಶ್ವದಳ, ಭಜನಾ ತಂಡ, ವೇದ ಘೋಷ, ಚಂಡೆ, ನವದುರ್ಗೆಯರು ಸಾಗುವರು. ತಾವರಕಟ್ಟೆ, ಇಟ್ಟಿಗೆಗೂಡು, ಹಾರ್ಡೀಂಜ್ ವೃತ್ತದ ಮೂಲಕ ಅರಮನೆ ಪ್ರವೇಶಿಸಲಾಗುತ್ತದೆ. 

ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ. ಸೋಮಶೇಖರ್ ಅವರೊಂದಿಗೆ ಸಂಸದರಾದ ಪ್ರತಾಪ್ ಸಿಂಹ, ಶಾಸಕ ಜಿ.ಟಿ. ದೇವೇಗೌಡ, ಎಸ್.ಎ. ರಾಮದಾಸ್ ಮತ್ತಿತರರ ಗಣ್ಯರು ಚಾಮುಂಡೇಶ್ವರಿಗೆ ಪೂಜೆ ಸಲ್ಲಿಸಿ ಮೆರವಣಿಗೆಗೆ ಚಾಲನೆ ನೀಡುವರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಿಮ್ಮ ಭಾಷಣ ನಾಚಿಕೆಯಿಲ್ಲದೆ ಸಮರ್ಥನೆ ಮಾಡಿಕೊಂಡಂತೆ ಇತ್ತು': 1947ರ ಐನ್ ಸ್ಟೈನ್ ನೆಹರೂಗೆ ಬರೆದ ಪತ್ರ ಉಲ್ಲೇಖಿಸಿ Modi ಟೀಕಿಸಿದ ಕಾಂಗ್ರೆಸ್

ರಿಯಲ್ ಲೈಫ್‌ನಲ್ಲೂ ಒಂದಾದ ರೀಲ್ ಜೋಡಿ: ತೆಲುಗು ಸಂಪ್ರದಾಯದಂತೆ ರಶ್ಮಿಕಾ–ವಿಜಯ್ ವಿವಾಹ, ಸಂಜೆ ಕೊಡವ ಸಂಪ್ರದಾಯದಲ್ಲಿ ಮತ್ತೊಂದು ಸಮಾರಂಭ

ಅಮ್ಮಾ....ಐ ಲವ್ ಯೂ ಸೋ ಮಚ್: ಕುವೈತ್ ನಲ್ಲಿದ್ದ ತಾಯಿಗೆ ಕೊನೆಯ ಸಂದೇಶ ಕಳಿಸಿ ಯೂಟ್ಯೂಬರ್ ಆತ್ಮಹತ್ಯೆ

ಇನ್ನೂ ನನಸಾಗಿಲ್ಲ ದಶಕಗಳ ಕನಸು: ಹಾಸನ ವಿಮಾನ ನಿಲ್ದಾಣಕ್ಕೆ ಸಿಗದ ರೆಕ್ಕೆ, ಯೋಜನೆಗೆ ಅಡ್ಡಿಯಾಗಿದೆ ಸಂಪನ್ಮೂಲ-ರಾಜಕೀಯ ಇಚ್ಛಾಶಕ್ತಿ ಕೊರತೆ..!

ಮಂಗಳೂರಿನಲ್ಲಿ ಮತ್ತೊಂದು ನೈತಿಕ ಪೊಲೀಸ್‌ಗಿರಿ: ಅಪ್ರಾಪ್ತ ವಿದ್ಯಾರ್ಥಿಗಳ ಮೇಲೆ ಹಲ್ಲೆ, ಜಾತಿ ನಿಂದನೆ ತಂದೆ-ಮಗನ ವಿರುದ್ಧ ಪ್ರಕರಣ ದಾಖಲು

SCROLL FOR NEXT