ಸಂಗ್ರಹ ಚಿತ್ರ 
ರಾಜ್ಯ

ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿಂದು ವಿಜಯದಶಮಿ: ಪ್ರಮುಖ ಆಕರ್ಷಣೆ ಜಂಬೂ ಸವಾರಿಗೆ ಕ್ಷಣಗಣನೆ

ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ವಿಶ್ವವಿಖ್ಯಾತ ದಸರಾ ಸಂಭ್ರಮ ಮನೆಮಾಡಿದೆ. ವಿಜಯದಶಮಿ ದಿನವಾದ ಶುಕ್ರವಾರ ಜಂಬೂಸವಾರಿ ನಡೆಯಲಿದೆ. ಅಂಬಾರಿ ಹೊರಲಿರುವ ಆನೆ ಅಭಿಮನ್ಯುವಿನ ಎಡ ಹಾಗೂ ಬಲದಲ್ಲಿ ಕುಮ್ಕಿ ಆನೆಗಳಾದ ಕಾವೇರಿ ಹಾಗೂ ಚೈತ್ರಾ ಆನೆಗಳು ಹೆಜ್ಜೆ ಹಾಕಲಿವೆ.

ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ವಿಶ್ವವಿಖ್ಯಾತ ದಸರಾ ಸಂಭ್ರಮ ಮನೆಮಾಡಿದೆ. ವಿಜಯದಶಮಿ ದಿನವಾದ ಶುಕ್ರವಾರ ಜಂಬೂಸವಾರಿ ನಡೆಯಲಿದೆ. ಅಂಬಾರಿ ಹೊರಲಿರುವ ಆನೆ ಅಭಿಮನ್ಯುವಿನ ಎಡ ಹಾಗೂ ಬಲದಲ್ಲಿ ಕುಮ್ಕಿ ಆನೆಗಳಾದ ಕಾವೇರಿ ಹಾಗೂ ಚೈತ್ರಾ ಆನೆಗಳು ಹೆಜ್ಜೆ ಹಾಕಲಿವೆ. ಒಂದು ತಾಸಿನಲ್ಲಿ ಮೆರವಣಿಗೆ ಸಂಪನ್ನಗೊಳ್ಳಲಿದೆ.

ಒಂದು ವಾರದಿಂದ ನಡೆದು ಬಂದಿದ್ದ ಮೈಸೂರು ದಸರಾ ಮಹೋತ್ಸವಕ್ಕೆ ಇಂದು ತೆರೆ ಬೀಳಲಿದೆ. ಕೋವಿಡ್ ಹಿನ್ನೆಲೆಯಲ್ಲಿ ಸತತ ಎರಡನೇ ವರ್ಷವೂ ದಸರಾ ಮೆರವಣಿಗೆಯನ್ನು ಅರಮನೆ ಆವರಣಕ್ಕೆ ಸೀಮಿತಗೊಳಿಸಲಾಗಿದೆ. ಈಗಾಗಲೇ ಜಂಬೂ ಸವಾರಿಗೆ ಭರ್ಜರಿ ತಯಾರಿ ನಡೆಯುತ್ತಿದ್ದು, ಮುಂಜಾನೆ 4.30 ರಿಂದಲೇ ಜಂಬೂ ಸವಾರಿಯಲ್ಲಿ ಪಾಲ್ಗೊಳ್ಳುವ ಆನೆಗಳಿಗೆ ಬಣ್ಣ ಬಳಿಯುವ ಕೆಲಸ ನಡೆಯುತ್ತಿದೆ.

ಮಧ್ಯಾಹ್ನ 2 ಗಂಟೆ ನಂತರ ಅಂಬಾರಿ ಹೊರಲಿರುವ ಅಭಿಮನ್ಯು ಆನೆಗೆ ಗಾದಿ ಕಟ್ಟಿ ಅಂಬಾರಿ ಕಟ್ಟೊ ಕಾರ್ಯ ಆರಂಭವಾಗುತ್ತದೆ.  ಸಂಜೆ 4.30ರ ಸುಮಾರಿಗೆ ಲಲಿತ್‌ಮಹಲ್ ಹೋಟೆಲ್‌ನಿಂದ ಸಿಎಂ ಹಾಗೂ ಸಂಪುಟ ಸದಸ್ಯರು ನೇರವಾಗಿ ಅರಮನೆ ಅಂಗಳಕ್ಕೆ ಬಸ್‌ನಲ್ಲಿ ಬರುತ್ತಾರೆ. ಹಾಗೆಯೇ ಈ ಬಾರಿ ದಸರಾ ಉದ್ಘಾಟನೆ ಮಾಡಿರುವ ಎಸ್‌ಎಂ.ಕೃಷ್ಣ ಕೂಡ ಕಾರ್ಯಕ್ರಮದಲ್ಲಿ ಭಾಗಿಯಾಗಿರಲಿದ್ದಾರೆ.

ಅರಮನೆಯಲ್ಲಿ ಮುಂಜಾನೆ 4.40ರಿಂದ ಹೋಮ ಆರಂಭವಾಗಿದ್ದು, ಹೋಮಕ್ಕೆ ಯದುವೀರ್‌ರಿಂದ ಪೂರ್ಣಾವುತಿ ನೀಡಿದ್ದು, 5.45ಕ್ಕೆ  ಆನೆ ಕುದುರೆ ಹಸುಗಳ ಆಗಮನವಾಗಿದೆ. 6.13 ರಿಂದ 6.32ರವರೆಗೆ ಪೂಜಾ ವಿಧಿ ವಿಧಾನಗಳು ಸಾಗಿದ್ದು, ನಂತರ ಖಾಸಾ ಆಯುಧಗಳಿಗೆ ಯದುವೀರ್ ರಿಂದ ಉತ್ತರ ಪೂಜೆ ಮಾಡಿದ್ದು, ಉತ್ತರ ಪೂಜೆ ನಂತರ ಶಮಿ ಪೂಜೆ ನೆರವೇರಿಸಲಿದ್ದಾರೆ.  ನಂತರ ಚಾಮುಂಡಿ ದೇವಿ ವಿಗ್ರಹ ಕನ್ನಡಿ ತೊಟ್ಟಿಯಿಂದ ಚಾಮುಂಡಿ ತೊಟ್ಟಿಗೆ ರವಾನೆಯಾಗಲಿದ್ದು,, ಅದರ ನಂತರ ದೇವಾಲಯದಿಂದ ಪಟ್ಟದ ಕತ್ತಿ ಭುವನೇಶ್ವರಿ ದೇವಾಲಯಕ್ಕೆ ಕಳುಹಿಸಲಾಗುತ್ತದೆ.

ಶ್ರೀ ಚಾಮುಂಡೇಶ್ವರಿ ದೇವಿಯ ಉತ್ಸವ ಮೂರ್ತಿಯನ್ನು ಈ ಬಾರಿ ಚಾಮುಂಡಿಬೆಟ್ಟದಿಂದ ಮೆರವಣಿಗೆ ಮೂಲಕ ಅರಮನೆಗೆ ತರಲಾಗುತ್ತಿದೆ. ಇಂದು ಬೆಳಗ್ಗೆ 8:00 ಗಂಟೆಗೆ ಸಹಕಾರ ಮತ್ತು ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ಅವರು ಉತ್ಸವ ಮೂರ್ತಿಗೆ ಪೂಜೆ ಸಲ್ಲಿಸಿ, ಮೆರವಣಿಗೆಗೆ ಚಾಲನೆ ನೀಡಲಿದ್ದಾರೆ. 

ಉತ್ಸವ ಮೂರ್ತಿ ತರುವ ಅಲಂಕೃತ ವಾಹನದೊಂದಿಗೆ ನಾದಸ್ವರ ತಂಡ, ಪೊಲೀಸ್ ಬ್ಯಾಂಡ್, ಅಶ್ವದಳ, ಭಜನಾ ತಂಡ, ವೇದಘೋಷ, ಚಂಡೆ, ನವದುರ್ಗೆಯರು ಸಾಗುವರು. ತಾವರಕಟ್ಟೆ, ಇಟ್ಟಿಗೆಗೂಡು, ಹಾರ್ಡಿಂಚ್ ವೃತ್ತದ ಮೂಲಕ ಅರಮನೆ ಪ್ರವೇಶಿಸಲಾಗುತ್ತದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT