ಅಪಘಾತಕ್ಕೀಡಾಗಿರುವ ಬಸ್ ಹಾಗೂ ಟಾಟಾ ಏಸ್ ವಾಹನಗಳು 
ರಾಜ್ಯ

ತುಮಕೂರಿನಲ್ಲಿ ಭೀಕರ ರಸ್ತೆ ಅಪಘಾತ: ಖಾಸಗಿ ಬಸ್-ಟಾಟಾ ಏಸ್ ಡಿಕ್ಕಿ, ನಾಲ್ವರ ದುರ್ಮರಣ 

ತುಮಕೂರಿನ ಹೊರ ವಲಯದ ಗುಬ್ಬಿ ರಸ್ತೆಯ ಸಿದ್ಧಾರ್ಥ ನಗರದ ಸಮೀಪ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಖಾಸಗಿ ಬಸ್ ಹಾಗೂ ಟಾಟಾ ಏಸ್ ವಾಹನದ ನಡುವೆ ಡಿಕ್ಕಿ ಸಂಭವಿಸಿದ ಪರಿಣಾಮ ನಾಲ್ವರು ದುರ್ಮರಣವನ್ನಪ್ಪಿರುವ ಘಟನೆ ಭಾನುವಾರ ನಡೆದಿದೆ. 

ತುಮಕೂರು: ತುಮಕೂರಿನ ಹೊರ ವಲಯದ ಗುಬ್ಬಿ ರಸ್ತೆಯ ಸಿದ್ಧಾರ್ಥ ನಗರದ ಸಮೀಪ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಖಾಸಗಿ ಬಸ್ ಹಾಗೂ ಟಾಟಾ ಏಸ್ ವಾಹನದ ನಡುವೆ ಡಿಕ್ಕಿ ಸಂಭವಿಸಿದ ಪರಿಣಾಮ ನಾಲ್ವರು ದುರ್ಮರಣವನ್ನಪ್ಪಿರುವ ಘಟನೆ ಭಾನುವಾರ ನಡೆದಿದೆ. 

ಹಾಸನದಿಂದ ಅರಸೀಕೆರೆ ಕಡೆಗೆ ಹೋಗುತ್ತಿದ್ದ ಖಾಸಗಿ ಬಸ್ ಮತ್ತು ತುಮಕೂರಿನಿಂದ ಹೂ ಕೊಂಡೊಯ್ಯುತ್ತಿದ್ದ ರೈತರಿದ್ದ ಗೂಡ್ಸ್ ವಾಹನದ ನಡುವೆ ಇಂದು ಮುಂಜಾನೆ 5.30ರ ವೇಳೆಗೆ ಅಪಘಾತ ಸಂಭವಿಸಿದೆ. 

ಘಟನೆಯಲ್ಲಿ ನಾಲ್ವರು ಸಾವನ್ನಪ್ಪಿದ್ದು, ಓರ್ವ ವ್ಯಕ್ತಿಗೆ ಗಂಭೀರವಾಗಿ ಗಾಯಗೊಂಡಿದೆ. ಅಪಘಾತ ಸಂಭವಿಸುತ್ತಿದ್ದಂತೆ ಸ್ಥಳೀಯ ಜನರು ನೆರವಿಗೆ ಧಾವಿಸಿದ್ದು, ಗಾಯಾಳುವನ್ನು ಆಸ್ಪತ್ರೆಗೆ ದಾಳಿಸಿದ್ದಾರೆ. ಬಳಿಕ ಬಸ್‌ನಲ್ಲಿ ಇದ್ದ ಪ್ರಯಾಣಿಕರು ತುಮಕೂರು ಬಸ್ ನಿಲ್ದಾಣಕ್ಕೆ ತೆರಳಲು ನೆರವಾಗಿದ್ದಾರೆ. ಈ ಸಂಬಂಧ ತುಮಕೂರು ಗ್ರಾಮಾಂತರ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ನ್ಯಾಯಾಂಗದಲ್ಲಿ ಭ್ರಷ್ಟಾಚಾರದ ಪಾಠ: ಕೇಂದ್ರ ಕ್ಷಮೆಯಾಚಿಸುತ್ತಿದ್ದಂತೆ NCERT ಪಠ್ಯ ಪುಸ್ತಕ ಬ್ಯಾನ್, ಪ್ರತಿಗಳನ್ನು ವಶಕ್ಕೆ ಪಡೆಯಲು ಸುಪ್ರೀಂ ಸೂಚನೆ

T20 World Cup 2026: ವೆಸ್ಟ್ ಇಂಡೀಸ್ ವಿರುದ್ಧ ದಕ್ಷಿಣ ಆಫ್ರಿಕಾಕ್ಕೆ ಭರ್ಜರಿ ಜಯ; ಈ ಗೆಲುವಿಗಾಗಿ ಪರಿತಪಿಸುತ್ತಿತ್ತು ಭಾರತ!

ಕನ್ನಡ ಸಿನಿಮಾ ನಿರ್ದೇಶಕನ ಅಪಹರಿಸಿ, ಹಲ್ಲೆ: ನಟಿ ಸೇರಿದಂತೆ 11 ಜನರ ಬಂಧನ

ಉರ್ದು ಭಾಷೆಯಲ್ಲಿ ಸರ್ಕಾರದ ಜಾಹೀರಾತು: ಸಿಎಂ ಸಿದ್ದರಾಮಯ್ಯ ಸಮರ್ಥನೆ ಹೇಗಿದೆ ಗೊತ್ತಾ?

ಬಿಕಿನಿ ಧರಿಸಿರುವ ಮಹಿಳೆಯರ ಜೊತೆಗೆ ಸ್ಟೀಫನ್ ಹಾಕಿಂಗ್! Epstein ಫೈಲ್ಸ್ ನಲ್ಲಿ ಪೋಟೋ ಬಿಡುಗಡೆ

SCROLL FOR NEXT