ಸಾಂದರ್ಭಿಕ ಚಿತ್ರ 
ರಾಜ್ಯ

ರಾಜ್ಯದಲ್ಲಿ ಕೊರೋನಾ ಏರಿಳಿತ: ನಿನ್ನೆಗಿಂತ ತುಸು ಏರಿಕೆ; 326 ಹೊಸ ಪ್ರಕರಣ, 380 ಚೇತರಿಕೆ, 4 ಸಾವು

ರಾಜ್ಯದಲ್ಲಿ ಕೋವಿಡ್-19 ಏರಿಳಿತ ಮುಂದುವರೆದಿದೆ. ನಿನ್ನೆಗಿಂತ ಇಂದು ತುಸು ಹೆಚ್ಚಿನ ಪ್ರಕರಣಗಳು ವರದಿಯಾಗಿವೆ. ಕಳೆದ 24 ಗಂಟೆಗಳಲ್ಲಿ 326 ಹೊಸ ಪ್ರಕರಣ ಪತ್ತೆಯಾಗಿದೆ.

ಬೆಂಗಳೂರು: ರಾಜ್ಯದಲ್ಲಿ ಕೋವಿಡ್-19 ಏರಿಳಿತ ಮುಂದುವರೆದಿದೆ. ನಿನ್ನೆಗಿಂತ ಇಂದು ತುಸು ಹೆಚ್ಚಿನ ಪ್ರಕರಣಗಳು ವರದಿಯಾಗಿವೆ. ಕಳೆದ 24 ಗಂಟೆಗಳಲ್ಲಿ 326 ಹೊಸ ಪ್ರಕರಣ ಪತ್ತೆಯಾಗಿದೆ. ಇದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 2,98, 3459 ಕ್ಕೆ ಏರಿಕೆಯಾಗಿದೆ. 

380 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.  ಆಸ್ಪತ್ರೆಯಿಂದ ಒಟ್ಟು ಬಿಡುಗಡೆಯಾದವರ ಸಂಖ್ಯೆ 2,93,6039ಕ್ಕೆ ಏರಿಕೆಯಾಗಿದೆ. ರಾಜ್ಯದಲ್ಲಿ ಸದ್ಯ 9, 450 ಸಕ್ರಿಯ ಪ್ರಕರಣಗಳಿರುವುದಾಗಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.

ಸೋಂಕಿನಿಂದ ಇಂದು ನಾಲ್ಕು ಮಂದಿ ಮೃತಪಟ್ಟಿದ್ದು, ಮೃತರ ಒಟ್ಟು ಸಂಖ್ಯೆ 37,941ಕ್ಕೆ ಏರಿಕೆಯಾಗಿದೆ. ಸೋಂಕಿನ  ಪ್ರಮಾಣ ಶೇ. 0.41 ರಷ್ಟಿದ್ದು, ಮರಣ ಪ್ರಮಾಣ ಶೇ 1.22 ರಷ್ಟಿದೆ. ಬೆಂಗಳೂರಿನಲ್ಲಿ 173 ಹೊಸ ಪ್ರಕರಣ ಪತ್ತೆಯಾಗಿದ್ದು, 87 ಸೋಂಕಿತರು ಗುಣಮುಖರಾಗಿ, ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ, ಓರ್ವ ಸೋಂಕಿತ ಮೃತಪಟ್ಟಿದ್ದಾರೆ.

ಬಾಗಲಕೋಟೆ, ಬೀದರ್, ದಾವಣಗೆರೆ, ಗದಗ, ಹಾವೇರಿ, ಕೊಪ್ಪಳ, ರಾಮನಗರ, ವಿಜಯಪುರ ಹಾಗೂ ಯಾದಗಿರಿಯಲ್ಲಿ ಶೂನ್ಯ ಪ್ರಕರಣ ವರದಿಯಾಗಿದೆ.  

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಸತತ 3ನೇ ದಿನ SIR ವಿರುದ್ಧ ಪ್ರತಿಭಟನೆ: ರಾಜ್ ಘಾಟ್ ನತ್ತ ಇಂಡಿಯಾ ಬ್ಲಾಕ್ ಸಂಸದರ ಮೆರವಣಿಗೆ!

ಫ್ರೀಡಂ ಪಾರ್ಕ್‌ನಲ್ಲಿ CJP ಪ್ರತಿಭಟನೆ: ಜ್ಞಾನೇಶ್ ಹೋದರೆ ಅಜ್ಞಾನೇಶ್ ಬರುತ್ತಾನೆ; ಮೊದಲು SIR ರದ್ದುಗೊಳಿಸಿ - ಪ್ರಕಾಶ್ ರಾಜ್

'ನನ್ನ ವಿರುದ್ಧವೇ ಸ್ಟಿಂಗ್ ಆಪರೇಷನ್ ಮಾಡಿ ಟ್ರ್ಯಾಪ್​ ಮಾಡಲು ಯತ್ನ': ಡಿ.ಕೆ ಶಿವಕುಮಾರ್ ಸ್ಫೋಟಕ ಆರೋಪ; Video

Indian Stock Market ಮತ್ತೆ ಭಾರಿ ಕುಸಿತ; ಸೆನ್ಸೆಕ್ಸ್ 1,045 ಅಂಕ ಕುಸಿತ, 10 ಲಕ್ಷ ಕೋಟಿ ರೂ ನಷ್ಟ!

ಶಾಸಕರ ಲೆಟರ್‌ಹೆಡ್'ನಲ್ಲೇ 'ಸತ್ತಿದ್ದಾರೆ' ಎಂದು ಅರ್ಜಿ: ಯತ್ನಾಳ್ ಸೇರಿ ಮೂವರ ವಿರುದ್ಧ FIR ದಾಖಲು