ಸಾಂದರ್ಭಿಕ ಚಿತ್ರ 
ರಾಜ್ಯ

ರಾಜ್ಯದಲ್ಲಿ ಕೊರೋನಾ ಇಳಿಮುಖ: ಬೆಂಗಳೂರಿನಲ್ಲಿ 83 ಸೇರಿ 214 ಕೇಸ್ ಪತ್ತೆ; 12 ಜಿಲ್ಲೆಗಳಲ್ಲಿ 'ಶೂನ್ಯ' ಪ್ರಕರಣ!

ರಾಜ್ಯದಲ್ಲಿ ಕೊರೋನಾ ಪ್ರಕರಣಗಳ ಸಂಖ್ಯೆಯಲ್ಲಿ ಇಂದು ಇಳಿಕೆಯಾಗಿದ್ದು ಕಳೆದ 24 ಗಂಟೆಯಲ್ಲಿ 214 ಕೊರೋನಾ ಪ್ರಕರಣಗಳು ವರದಿಯಾಗಿದೆ. ಇದರೊಂದಿಗೆ ಸೋಂಕಿತರ ಸಂಖ್ಯೆ 29,83,673ಕ್ಕೆ ಏರಿಕೆಯಾಗಿದೆ.

ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಪ್ರಕರಣಗಳ ಸಂಖ್ಯೆಯಲ್ಲಿ ಇಂದು ಇಳಿಕೆಯಾಗಿದ್ದು ಕಳೆದ 24 ಗಂಟೆಯಲ್ಲಿ 214 ಕೊರೋನಾ ಪ್ರಕರಣಗಳು ವರದಿಯಾಗಿದೆ. ಇದರೊಂದಿಗೆ ಸೋಂಕಿತರ ಸಂಖ್ಯೆ 29,83,673ಕ್ಕೆ ಏರಿಕೆಯಾಗಿದೆ.

ಮಹಾಮಾರಿಗೆ ಇಂದು 12 ಮಂದಿ ಬಲಿಯಾಗಿದ್ದಾರೆ. ಇದರೊಂದಿಗೆ ಸಾವಿನ ಸಂಖ್ಯೆ 37,953ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಸಚಿವಾಲಯ ಮಾಹಿತಿ ನೀಡಿದೆ. 

ಬೆಂಗಳೂರಿನಲ್ಲಿ ಇಂದು 83 ಮಂದಿಗೆ ಸೋಂಕು ದೃಢಪಟ್ಟಿದ್ದು, ಇದರೊಂದಿಗೆ ನಗರದಲ್ಲಿ ಸೋಂಕಿತರ ಸಂಖ್ಯೆ 12,49,501ಕ್ಕೆ ಏರಿಕೆಯಾಗಿದೆ. ಇಂದು ನಗರದಲ್ಲಿ 4 ಮಂದಿ ಸಾವನ್ನಪ್ಪಿದ್ದಾರೆ.

ರಾಜ್ಯದಲ್ಲಿ ಇಂದು 488 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇದರೊಂದಿಗೆ ಸೋಂಕಿನಿಂದ ಚೇತರಿಸಿಕೊಂಡವರ ಸಂಖ್ಯೆ 29,36,527ಕ್ಕೆ ಏರಿಕೆಯಾಗಿದೆ. ಇನ್ನು 9,164 ಸಕ್ರೀಯ ಪ್ರಕರಣಗಳಿವೆ. 

ರಾಜ್ಯಾದ್ಯಂತ ಇಂದು 77,901 ಕೋವಿಡ್ ಟೆಸ್ಟ್ ನಡೆಸಲಾಗಿದ್ದು, 214 ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ಇದರೊಂದಿಗೆ ರಾಜ್ಯದಲ್ಲಿ ಪಾಸಿಟಿವಿಟಿ ದರ ಶೇ. 0.27ಕ್ಕೆ ಇಳಿದಿದೆ.

ರಾಜ್ಯದ 12 ಜಿಲ್ಲೆಗಳಲ್ಲಿ ಶೂನ್ಯ ಪ್ರಕರಣಗಳು ವರದಿಯಾಗಿದೆ. ಬಾಗಲಕೋಟೆ, ಬೆಳಗಾವಿ, ಚಿಕ್ಕಬಳ್ಳಾಪುರ, ದಾವಣಗೆರೆ, ಧಾರವಾಡ, ಗದಗ, ಹಾವೇರಿ, ಕೊಪ್ಪಳ, ರಾಯಚೂರು, ರಾಮನಗರ, ವಿಜಯಪುರ ಮತ್ತು ಯಾದಗಿರಿಯಲ್ಲಿ ಯಾವುದೇ ಪ್ರಕರಣ ವರದಿಯಾಗಿಲ್ಲ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ದೆಹಲಿಯಲ್ಲಿ ಹೈಡ್ರಾಮಾ: ವಿಮಾನ ನಿಲ್ದಾಣದಲ್ಲಿ ಬಂಧನಕ್ಕೊಳಗಾಗಿದ್ದ CJP ನಾಯಕರಾದ ದೀಪ್ಕೆ, ರಾಂಕಾ, ದಾಸ್ ಕೊನೆಗೂ ಬಿಡುಗಡೆ..!

Riyadh ವಿಮಾನ ನಿಲ್ದಾಣದ ಮೇಲೆ ಕ್ಷಿಪಣಿ ದಾಳಿ: 12 ಮಂದಿ ಸಾವು, 300ಕ್ಕೂ ಹೆಚ್ಚು ಜನರಿಗೆ ಗಾಯ

Operation Sindoor ನಮ್ಮ ಆತ್ಮರಕ್ಷಣೆಯ ಕ್ರಮ, ಪರಮಾಣು ಬೆದರಿಕೆಗೆ ಎಂದಿಗೂ ಮಣಿಯಲ್ಲ: 3 'ಲಕ್ಷ್ಮಣ ರೇಖೆ' ಎಳೆದು ಪಾಕ್'ಗೆ ಭಾರತ ಖಡಕ್ ಎಚ್ಚರಿಕೆ..!

ದೆಹಲಿಯಲ್ಲಿ ನಾಯಕರ ಬಂಧನ, ಮೆಟ್ರೋ ಸ್ಥಗಿತ ಕುರಿತ ನ್ಯಾಯಾಂಗ ನಿಂದನೆ: ಭಾನುವಾರವೂ 'ಸುಪ್ರೀಂ' ವಿಶೇಷ ಪೀಠದಿಂದ ವಿಚಾರಣೆ!

CJP ಪ್ರತಿಭಟನೆಗೆ ದೇಶವಿರೋಧಿ ಶಕ್ತಿಗಳ ಸಾಥ್‌: ಭಾರತದ ವರ್ಚಸ್ಸಿಗೆ ಮಸಿ ಬಳಿಯುವ ಪ್ರಯತ್ನ..!