ಸಂಗ್ರಹ ಚಿತ್ರ 
ರಾಜ್ಯ

ಹುಬ್ಬಳ್ಳಿ: ಮತಾಂತರ ಆರೋಪ, ಪ್ರತಿಭಟನೆ ಬಳಿಕ ಓರ್ವನ ಬಂಧನ

ಕ್ರೈಸ್ತ ಧರ್ಮಕ್ಕೆ ಮತಾಂತರಗೊಳ್ಳುವಂತೆ ಪ್ರಚೋದನೆ ನೀಡಿದ್ದಾನೆಂಬ ಆರೋಪ ಮೇಲೆ ವ್ಯಕ್ತಿಯೋರ್ವನನ್ನು ಹುಬ್ಬಳ್ಳಿ ಪೊಲೀಸರು ಸೋಮವಾರ ಬಂಧನಕ್ಕೊಳಪಡಿಸಿದ್ದಾರೆ.

ಹುಬ್ಬಳ್ಳಿ: ಕ್ರೈಸ್ತ ಧರ್ಮಕ್ಕೆ ಮತಾಂತರಗೊಳ್ಳುವಂತೆ ಪ್ರಚೋದನೆ ನೀಡಿದ್ದಾನೆಂಬ ಆರೋಪ ಮೇಲೆ ವ್ಯಕ್ತಿಯೋರ್ವನನ್ನು ಹುಬ್ಬಳ್ಳಿ ಪೊಲೀಸರು ಸೋಮವಾರ ಬಂಧನಕ್ಕೊಳಪಡಿಸಿದ್ದಾರೆ. 

ಸೋಮು ಅವರಾಧಿ ಎಂಬ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದಾರೆಂದು ತಿಳಿದುಬಂದಿದೆ. ನವನಗರದ ಚರ್ಚ್ ನಲ್ಲಿ ಕ್ರೈಸ್ತ ಧರ್ಮಕ್ಕೆ ಮತಾಂತರ ನಡೆಸಲಾಗಿದೆ ಎಂದು ಆರೋಪಿಸಲಾಗಿತ್ತು. 

ಕ್ರಿಶ್ಚಿಯನ್ ಆಗಿ ಮತಾಂತರಗೊಂಡ ಬಳಿಕ ಸಾಕಷ್ಟು ಹಣ ಗಳಿಸಿರುವುದಾಗಿ ವಿಶ್ವನಾಥ್ ಬೂದೂರ್ ಎಂಬ ವ್ಯಕ್ತಿಗೆ ತಿಳಿಸಿದ್ದ ಸೋಮು, ಮತಾಂತರಗೊಳ್ಳುವಂತೆ ಪ್ರಚೋದಿಸಿದ್ದ. ಬಳಿಕ ವ್ಯಕ್ತಿಯನ್ನು ಭೈರಿದೇವರಕೊಪ್ಪದಲ್ಲಿರುವ ಪ್ರಾರ್ಥನಾ ಮಂದಿರಕ್ಕೆ ಬರುವಂತೆ ತಿಳಿಸಿದ್ದ. ಈ ಬಗ್ಗೆ ಮಾಹಿತಿ ತಿಳಿದ ಹಿಂದೂಪರ ಸಂಘಟನೆಗಳು ಚರ್ಚ್'ಗೆ ತೆರಳಿ ಆಕ್ರೋಶ ವ್ಯಕ್ತಪಡಿಸಿದ್ದರು. ನಂತರ ವಿಶ್ವ ಹಿಂದೂ ಪರಿಷತ್, ಭಜರಂಗದಳ ಹಾಗೂ ಲಿಂಗಾಯತ ಸಮುದಾಯದ ಪ್ರಮುಖರ ನೇತೃತ್ವದಲ್ಲಿ ನವನಗರದ ಬಳಿ ರಸ್ತೆ ತಡೆ ನಡೆದಿತ್ತು.

ಇದಾದ ಬಳಿಕ ತಡರಾತ್ರಿಯ ತನಕ ನವನಗರದ ಎಪಿಎಂಸಿ ಪೊಲೀಸ್ ಠಾಣೆಯ ಮುಂದೆ ಪ್ರತಿಭಟನೆ ಮಾಡಲಾಗಿತ್ತು. ಶಾಸಕ ಅರವಿಂದ ಬೆಲ್ಲದ ಪ್ರತಿಭಟನೆಯಲ್ಲಿ ಭಾಗಿಯಾಗಿದ್ದರು. ಈ ವೇಳೆ ಅವರಾಧಿ ಬಂಧನಕ್ಕೆ ಪಟ್ಟು ಹಿಡಿಯಲಾಗಿತ್ತು. 

ಪೊಲೀಸ್ ಕಮಿಷನರ್ ಲಾಬೂ ರಾಮ್ ಕಾನೂನು ಕ್ರಮದ ಭರವಸೆ ನೀಡಿದ ನಂತರ ಪ್ರತಿಭಟನೆ ವಾಪಸ್ ಪಡೆಯಲಾಗಿತ್ತು. ಬಳಿಕ ಸೋಮು ಅವರಾಧಿಯನ್ನು ಪೊಲೀಸರು ವಶಕ್ಕೆ ಪಡೆದು ತನಿಖೆ ನಡೆಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: ತವರಿನಲ್ಲಿ ಮುಂಬೈ ಗೆ ಮುಖಭಂಗ; RCB ಗೆ 18 ರನ್ ಭರ್ಜರಿ ಗೆಲುವು!

7 ತಿಂಗಳ ಮಗುವಿಗಾಗಿ ಕೆಲಸದ ಸಮಯದ ಹೊಂದಾಣಿಕೆ ಕೋರಿದ ಭಾರತೀಯ ಉದ್ಯೋಗಿ; US ಮ್ಯಾನೇಜರ್ ಪ್ರತಿಕ್ರಿಯೆ ಬಗ್ಗೆ ಜಾಲತಾಣಗಳಲ್ಲಿ ಭಾರಿ ಚರ್ಚೆ!

ಗುರಿ ಇಟ್ಟಿದ್ದು ಜಿಹಾದಿ ಬಂಡುಕೋರರಿಗೆ, ಗುರಿಯಾಗಿದ್ದು ಸ್ಥಳೀಯ ಮಾರ್ಕೆಟ್; 100 ಕ್ಕೂ ಹೆಚ್ಚು ನಾಗರಿಕರ ಮಾರಣಹೋಮ!

IPL 2026: ಮುಂಬೈ ವಿರುದ್ದ ಭರ್ಜರಿ ಬ್ಯಾಟಿಂಗ್; ಬಾಬರ್ ಆಜಂ, ಕ್ರಿಸ್ ಗೇಯ್ಲ್ ದಾಖಲೆ ಮುರಿದ Virat Kohli!

SCROLL FOR NEXT