ಮುರುಘಾ ಶ್ರೀಗಳ ಜೊತೆ ಯಡಿಯೂರಪ್ಪ ಮತ್ತು ಬೊಮ್ಮಾಯಿ 
ರಾಜ್ಯ

ಬಸವರಾಜ ಬೊಮ್ಮಾಯಿ ಅದೃಷ್ಟದ ಸಿಎಂ, ಬಿಎಸ್​ವೈ ಅನುಭವಿ ಮುಖ್ಯಮಂತ್ರಿ: ಮುರುಘಾ ಶ್ರೀಗಳು

ಕೆಲವು ಸಂತರ ಜೀವಿತಾವಧಿ ಕಡಿಮೆ ಇದ್ದರೂ ಅವರು ಮಹತ್ವದ ಸಾಧನೆಗಳನ್ನು ಮಾಡಿ ಸಮಾಜಕ್ಕೆ ಮಾರ್ಗದರ್ಶನ ಮಾಡಿದ್ದಾರೆ ಎಂದು ಮುರುಘಾ ಮಠದ ಮಠಾಧೀಶ ಡಾ.ಶಿವಮೂರ್ತಿ ಮುರುಘಾ ಶರಣರು ಹೇಳಿದ್ದಾರೆ.

ಚಿತ್ರದುರ್ಗ: ಕೆಲವು ಸಂತರ ಜೀವಿತಾವಧಿ ಕಡಿಮೆ ಇದ್ದರೂ ಅವರು ಮಹತ್ವದ ಸಾಧನೆಗಳನ್ನು ಮಾಡಿ ಸಮಾಜಕ್ಕೆ ಮಾರ್ಗದರ್ಶನ ಮಾಡಿದ್ದಾರೆ ಎಂದು ಮುರುಘಾ ಮಠದ ಮಠಾಧೀಶ ಡಾ.ಶಿವಮೂರ್ತಿ ಮುರುಘಾ ಶರಣರು ಹೇಳಿದ್ದಾರೆ.

ಶರಣ ಸಂಸ್ಕೃತಿ ಉತ್ಸವದ ಸಮಾರೋಪ ಹಾಗೂ ಮುರುಘಾ ಶ್ರೀಗಳ ಪೀಠಾರೋಹಣದ ತೃತೀಯ ದಶಮಾನೋತ್ಸವ ಕಾರ್ಯಕ್ರಮದಲ್ಲಿ ಮಾತನಾಡಿದ ಶ್ರೀಗಳು, ಕಡಿಮೆ ಸಮಯದಲ್ಲಿ ಹೆಚ್ಚು ಸಾಧನೆ ಮಾಡಿದವರಲ್ಲಿ ಸ್ವಾಮಿ ವಿವೇಕಾನಂದ ಅಂತವರಲ್ಲಿ ಒಬ್ಬರು, ಇಡೀ ವಿಶ್ವವೇ ಅವರನ್ನು ಮೆಚ್ಚುತ್ತದೆ, 12 ನೇ ಶತಮಾನದ ಸಮಾಜ ಸುಧಾರಕ ಬಸವಣ್ಣ ಸಮಾಜಕ್ಕೆ ಮಾರ್ಗದರ್ಶನ ಮಾಡಲು ವಚನಗಳನ್ನು ಬರೆದರು ಮತ್ತು ಸಮಾನತೆಯ ಸಮಾಜವನ್ನು ನಿರ್ಮಿಸಲು ಚಳುವಳಿಯನ್ನು ಆರಂಭಿಸಿದರು ಎಂದು ಹೇಳಿದರು.

ಬಸವರಾಜ ಬೊಮ್ಮಾಯಿ ಅವರನ್ನು ಅದೃಷ್ಟವಂತ ಸಿಎಂ ಮತ್ತು ಬಿಎಸ್ ಯಡಿಯೂರಪ್ಪ ಅನುಭವಿ ಮುಖ್ಯಮಂತ್ರಿ ಎಂದು ಸ್ವಾಮೀಜಿ ಬಣ್ಣಿಸಿದರು. ಬೊಮ್ಮಾಯಿ ಅವರ ಅದೃಷ್ಟ ಮತ್ತು ಯಡಿಯೂರಪ್ಪನವರ ಅನುಭವ ಚಿತ್ರದುರ್ಗ ಜಿಲ್ಲೆಯನ್ನು ಅಭಿವೃದ್ಧಿಯ ಪಥದಲ್ಲಿ ಕೊಂಡೊಯ್ಯಲಿ ಎಂದು ಆಶಿಸಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Karnataka CM News LIVE Updates | ಸಿದ್ದರಾಮಯ್ಯ ಬ್ರೇಕ್ ಫಾಸ್ಟ್ ಮೀಟಿಂಗ್; ದಿಢೀರ್ ಮುಂಬೈಗೆ ತೆರಳಿದ ರಾಜ್ಯಪಾಲ ಗೆಹ್ಲೋಟ್, ಇಂದು ರಾಜೀನಾಮೆ ಅನುಮಾನ..!

ಮಧ್ಯಪ್ರಾಚ್ಯದಲ್ಲಿ ಮತ್ತೆ ಯುದ್ಧದ ಕಾರ್ಮೋಡ: 4 ಇರಾನ್ ಡ್ರೋನ್‌ಗಳನ್ನು ಹೊಡೆದುರುಳಿಸಿದ ಅಮೆರಿಕಾ, ಹೋರ್ಮುಜ್‌ನಲ್ಲಿ ಉದ್ವಿಗ್ನತೆ ತೀವ್ರ..!

ಕ್ಲೈಮ್ಯಾಕ್ಸ್‌ ಹಂತಕ್ಕೆ ಕುರ್ಚಿ ಕದನ: ಸಿಎಂ ಸ್ಥಾನಕ್ಕೆ ಡಿಕೆ ಶಿವಕುಮಾರ್ ಹೆಸರು ಫೈನಲ್?, ಮೇ 31ಕ್ಕೆ ಪ್ರಮಾಣವಚನ ಸಾಧ್ಯತೆ

ಸಿದ್ದು ನಿರ್ಗಮನದ ಬಳಿಕ ಅಸಮಾಧಾನ ತಣಿಸಲು ಕಾಂಗ್ರೆಸ್ ಮಾಸ್ಟರ್‌ಪ್ಲ್ಯಾನ್: 4 DCM ಹುದ್ದೆ ಸೃಷ್ಟಿಗೆ ಚಿಂತನೆ, ಜಮೀರ್, ಪ್ರಿಯಾಂಕ್ ಖರ್ಗೆ, ಎಂಬಿ ಪಾಟೀಲ್ ಹೆಸರು ಫೈನಲ್?

ಸಿಎಂ ಕುರ್ಚಿ ಕದನ: ಸಿದ್ದರಾಮಯ್ಯ ಮನೆ ಮುಂದೆ ಬೆಂಬಲಿಗರ ಶಕ್ತಿ ಪ್ರದರ್ಶನ, ರಾಜೀನಾಮೆ ನೀಡದಂತೆ ಆಗ್ರಹ..!

SCROLL FOR NEXT