ರಾಜ್ಯ

ಕಲ್ಯಾಣ ಕರ್ನಾಟಕ ಭಾಗಕ್ಕೆ ನೀಡಲಾಗಿದ್ದ ಭರವಸೆಗಳನ್ನು ಸರ್ಕಾರ ಈಡೇರಿಸುತ್ತಿದೆ: ಸಿಎಂ ಬೊಮ್ಮಾಯಿ

Manjula VN

ಕಲಬುರಗಿ: ಬೆಂಗಳೂರಿನಲ್ಲಿ ಡಿಪಿಎಆರ್‌ನೊಂದಿಗೆ ಕೆಲಸ ಮಾಡುತ್ತಿದ್ದ ಆರ್ಟಿಕಲ್ 371 ಜೆ ಅನುಷ್ಠಾನ ಕೋಶವು ಶೀಘ್ರದಲ್ಲೇ ಕಲಬುರಗಿಗೆ ಸ್ಥಳಾಂತರಗೊಳ್ಳಲಿದೆ, ಸರ್ಕಾರವು ಇದಕ್ಕಾಗಿ ಈಗಾಗಲೇ ಆದೇಶ ನೀಡಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಮಂಗಳವಾರ ಹೇಳಿದ್ದಾರೆ. 

ಸಿಂದಗಿ ಮತಕ್ಷೇತ್ರದ ಉಪ ಚುನಾವಣಾ ಪ್ರಚಾರಕ್ಕೆ ತೆರಳಲು ಮಂಗಳವಾರ ಕಲಬುರಗಿಗೆ ಆಗಮಿಸಿದ್ದ ಅವರು, ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದರು.

ಸದನದಲ್ಲಿ ಭರವಸೆ ನೀಡಿದಂತೆ ಕಲ್ಯಾಣ ಕರ್ನಾಟಕ ‍ಪ್ರದೇಶ ಅಭಿವೃದ್ಧಿ ಮಂಡಳಿಗೆ (ಕೆಕೆಆರ್‌ಡಿಬಿ) ಪೂರ್ಣ ಪ್ರಮಾಣದ ಕಾರ್ಯದರ್ಶಿಯನ್ನು ನೇಮಕ ಮಾಡಲಾಗಿದೆ. ಈ ಭಾಗದ ಜನರ ಬೇಡಿಕೆಯಾಗಿದ್ದ 371 (ಜೆ) ಕೋಶ ಸ್ಥಳಾಂತರವೂ ಶೀಘ್ರವೇ ಆಗಲಿದೆ. ಈ ಭಾಗದಲ್ಲಿ ಖಾಲಿ ಹುದ್ದೆಗಳ ನೇಮಕಾತಿಯ ಬಗ್ಗೆ  ಉಪ ಚುನಾವಣೆ ಮುಗಿದ ಬಳಿಕ ಹೇಳಿಕೆ ನೀಡುತ್ತೇನೆ ಎಂದು ಹೇಳಿದ್ದಾರೆ. 

ಕೆಕೆಆರ್‌ಡಿಬಿಗೆ ಈಗ ನೀಡಲಾಗುತ್ತಿರುವ ರೂ.1500 ಕೋಟಿಯ ಜೊತೆಗೆ ಹೆಚ್ಚುವರಿ ರೂ.1500 ಕೋಟಿ ನೀಡಲು ಸರ್ಕಾರ ಉತ್ಸುಕವಾಗಿದೆ. ಅದಕ್ಕೂ ಮೊದಲೇ ಮಂಡಳಿಗೆ ಬಿಡುಗಡೆಯಾಗುವ ಹಣವನ್ನು ಖರ್ಚು ಮಾಡಲೇಬೇಕಿದೆ. ಆ ಬಳಿಕ ನೀಡುವ ಹೆಚ್ಚುವರಿ ಹಣಕ್ಕೆ ಸಮಗ್ರ ಯೋಜನಾ ವರದಿ (ಡಿಪಿಆರ್‌) ತಯಾರಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ತಿಳಿಸಿದರು.

SCROLL FOR NEXT