ಮಂಡ್ಯದಲ್ಲಿ ಜಮೀನಿಗೆ ನುಗ್ಗಿದ ನೀರು 
ರಾಜ್ಯ

ಮಂಡ್ಯ: ವರುಣನ ಆರ್ಭಟಕ್ಕೆ ಜನಜೀವನ ತತ್ತರ, 400 ಕ್ಕೂ ಹೆಚ್ಚು ಮನೆಗಳಿಗೆ ನುಗ್ಗಿದ ನೀರು, ಅಪಾರ ಬೆಳೆ ಹಾನಿ

ಮಂಡ್ಯದಲ್ಲಿ ಸುರಿದ ಭಾರೀ ಮಳೆಯಿಂದ ಜನಜೀವನ ಅಸ್ತವ್ಯಸ್ತವಾಗಿದೆ, ಹಲವು ಮನೆಗಳಿಗೆ ನೀರು ನುಗ್ಗಿ ಅಪಾರ ಪ್ರಮಾಣದ ಬೆಳೆ  ಹಾನಿಗೊಳಗಾಗಿದೆ. 

ಮಂಡ್ಯ:  ಮಂಡ್ಯದಲ್ಲಿ ಸುರಿದ ಭಾರೀ ಮಳೆಯಿಂದ ಜನಜೀವನ ಅಸ್ತವ್ಯಸ್ತವಾಗಿದೆ, ಹಲವು ಮನೆಗಳಿಗೆ ನೀರು ನುಗ್ಗಿ ಅಪಾರ ಪ್ರಮಾಣದ ಬೆಳೆ ಹಾನಿಗೊಳಗಾಗಿದೆ. 

ಮಳೆ ಅಬ್ಬರಕ್ಕೆ ವಿದ್ಯುತ್ ಕಡಿತಗೊಂಡಿದೆ. ಹೀಗಾಗಿ, ಮನೆಯೊಳಗೆ ನುಗ್ಗಿ ಬರುತ್ತಿದ್ದ ಮಳೆ ನೀರನ್ನು ನಿವಾಸಿಗಳಿಗೆ ತಡೆಯಲಾಗಲಿಲ್ಲ. ಹೀಗಾಗಿ, ಮನೆಯೊಳಗಿನ ದವಸ-ಧಾನ್ಯಗಳು, ಬಟ್ಟೆ-ಬರೆ, ಹಾಸಿಗೆ, ಬೆಡ್‌ಶೀಟ್‌ ಹೀಗೆ ಅಗತ್ಯ ವಸ್ತುಗಳನ್ನು ಸಂರಕ್ಷಿಸಿಕೊಳ್ಳಲಾಗದೇ ಇಡೀ ರಾತ್ರಿ ನರಕಯಾತನೆ ಅನುಭವಿಸಿದ್ದಾರೆ.

ಮಳೆಯಿಂದ ಚರಂಡಿ, ಒಳಚರಂಡಿ ನೀರೆಲ್ಲವೂ ಮನೆಗಳಿಗೆ ನುಗ್ಗಿದೆ. ಮನೆಯ ಸುತ್ತ, ಹೊರಗೆ, ಎಲ್ಲೆಂದರಲ್ಲಿ ನೀರು ನಿಂತಿದೆ. ನೀರು ಹರಿದುಹೋಗುವುದಕ್ಕೆ ಸರಿಯಾದ ವ್ಯವಸ್ಥೆಗಳಿಲ್ಲ. ಒಳಚರಂಡಿ ಸಂಪೂರ್ಣವಾಗಿ ಅವ್ಯವಸ್ಥೆಯಿಂದ ಕೂಡಿದೆ. ಇದರಿಂದಾಗಿ ಮಳೆ ನೀರು ಸರಾಗವಾಗಿ ಹರಿದು ಹೋಗಲು ಜಾಗವಿಲ್ಲದೇ, ನಿಂತಲ್ಲೇ ನಿಲ್ಲುವಂತಾಗಿದೆ. ಸಂಚಾರ ಸಂಪೂರ್ಣ ಅಸ್ತವ್ಯಸ್ತಗೊಂಡಿತ್ತು. 

ಮಳೆ ಬಂದಾಗಲೆಲ್ಲ ನಮ್ಮ ಬದುಕು ಬೀದಿಗೆ ಬರುತ್ತಿದ್ದರೂ ಯಾರೋಬ್ಬರು ನಮ್ಮ ಗೋಳನ್ನು ಕೇಳುತ್ತಿಲ್ಲ ಎಂದು ಇಲ್ಲಿನ ನಿವಾಸಿಯೊಬ್ಬರು ಅಳಲು ವ್ಯಕ್ತಪಡಿಸಿದರು. ಮಳೆ ಜೊತೆಯಲ್ಲಿ, ಬೀಡಿ ಕಾಲೋನಿ ಸಾಂಕ್ರಾಮಿಕ ರೋಗಗಳ ಸಂತಾನೋತ್ಪತ್ತಿ ತಾಣವಾಗಿ ಮಾರ್ಪಟ್ಟಿದೆ ಎಂದು ನಿವಾಸಿ ನಸ್ರೀನ್ ಹೇಳಿದರು. 

ಶ್ರೀರಂಗಪಟ್ಟಣದಲ್ಲಿ, ದೊಡ್ಡಪಾಳ್ಯ, ಎಂ ಶೆಟ್ಟಹಳ್ಳಿ, ಚನ್ನಗಿರಿಕೊಪ್ಪಲ್, ಮಂಡ್ಯ ಕೊಪ್ಪಳದಲ್ಲಿ ಬುಧವಾರ ರಾತ್ರಿ ಸುರಿದ ಮಳೆಗೆ 13 ಕ್ಕೂ ಹೆಚ್ಚು ಮನೆಗಳು ಕುಸಿದು 100 ಎಕರೆಗೂ ಹೆಚ್ಚು ಬೆಳೆ ಹಾನಿಯಾಗಿದೆ. ಹಲವೆಡೆ ಬೃಹತ್ ಮರಗಳು ಧರೆಗುರುಳಿದ್ದು, ಮನೆಗಳ ಗೋಡೆಗಳು ಕುಸಿದಿವೆ. ಶ್ರೀರಂಗಪಟ್ಟಣ ತಾಲೂಕಿನಲ್ಲಿ  75 ಮಿಮೀ ಮಳೆಯಾಗಿದ್ದು, ಎಂ ಶೆಟ್ಟಹಳ್ಳಿಯಲ್ಲಿ 94 ಮಿಮೀ ಮಳೆಯಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಾದ್ಯಂತ ಭಾರೀ ಮಳೆ: ಪ್ರವಾಹ, ಭೂಕುಸಿತದಿಂದ ಮೂವರು ಸಾವು; ಕೊಚ್ಚಿ ಹೋದ ಸೇತುವೆ; Video

Indian Navyಗೆ ಮತ್ತಷ್ಟು ಬಲ: INS Udaygiri, INS Himgiri ಯುದ್ಧನೌಕೆಗಳು ಸೇರ್ಪಡೆ!

ಬಿಹಾರ: ಇನ್ನು 40-50 ವರ್ಷ ಅಧಿಕಾರದಲ್ಲಿ ಇರ್ತೀವಿ ಅಂತಾ ಅಮಿತ್ ಶಾ ಗೆ ಹೇಗೆ ಗೊತ್ತು? ರಾಹುಲ್ ಗಾಂಧಿ

ಭ್ರಷ್ಟಾಚಾರ ಪ್ರಕರಣ: ಬಂಧಿತ ಶ್ರೀಲಂಕಾ ಮಾಜಿ ಅಧ್ಯಕ್ಷ ವಿಕ್ರಮಸಿಂಘೆಗೆ ಜಾಮೀನು

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ-ಭಗವಂತನ ಸಂಬಂಧ ಇದೆ; RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿ.ಕೆ ಶಿವಕುಮಾರ್; Video

SCROLL FOR NEXT