ರಾಜ್ಯ

ರಾಜ್ಯದಲ್ಲಿ ಭಾರೀ ಮಳೆ: ಮುನ್ನೆಚ್ಚರಿಕೆ ವಹಿಸುವಂತೆ ಅಧಿಕಾರಿಗಳಿಗೆ ಸಚಿವ ಆರ್.ಅಶೋಕ್ ಸೂಚನೆ

Manjula VN

ಬೆಂಗಳೂರು: ಮಳೆ ಪೀಡಿತ ಪ್ರದೇಶಗಳಲ್ಲಿ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳುವಂತೆ ಅಧಿಕಾರಿಗಳಿಗೆ ಕಂದಾಯ ಸಚಿವ ಆರ್.ಅಶೋಕ್ ಅವರು ಗುರುವಾರ ಸೂಚನೆ ನೀಡಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಮುಂದಿನ 4-5 ದಿನಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಗಳಿದ್ದು, ಈ ಹಿನ್ನೆಲೆಯಲ್ಲಿ ಅಗತ್ಯ ಕ್ರಮಗಳ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಹೇಳಿದ್ದಾರೆ.

ಹವಾಮಾನ ವಾತಾವರಣದ ಆಧಾರದ ಮೇಲೆ ಈಗಾಗಲೇ ಜಿಲ್ಲೆಗಳಲ್ಲಿ ಯಲ್ಲೋ ಹಾಗೂ ರೆಡ್ ಅಲರ್ಟ್ ಗಳನ್ನು ಘೋಷಣೆ ಮಾಡಲಾಗಿದೆ. ಎಲ್ಲಾ ಜಿಲ್ಲಾ ಆಯುಕ್ತರೊಂದಿಗೆ ನಿರಂತರ ಸಂಪರ್ಕದಲ್ಲಿರಲಾಗಿದೆ. ಪರಿಸ್ಥಿತಿ ಎದುರಿಸಲು ಜಿಲ್ಲಾ ಆಡಳಿತ ಮಂಡಳಿ ಸಿದ್ಧವಿದೆ. ಕಳೆದ ಎರಡು ದಿನಗಳಿಂದ ಎದುರಾಗಿರುವ ಮಳೆ ಸಂಬಂಧಿದ ಹಾನಿ ಕೂರಿತು ಮೈಸೂರು ಉಪ ಆಯುಕ್ತರಿಂದ ವರದಿ ಪಡೆದುಕೊಳ್ಳಲಾಗುತ್ತಿದೆ ಎಂದು ತಿಳಿಸಿದ್ದಾರೆ.

ಉತ್ತರಾಖಂಡದಲ್ಲಿರುವ ರಾಜ್ಯದ ಜನರು ಸಂಪೂರ್ಣವಾಗಿ ಸುರಕ್ಷಿತರಾಗಿದ್ದಾರೆ. ಅಲ್ಲಿನ ಸರ್ಕಾರ ಕೂಡ ಅವರಿಗೆ ಸಹಕಾರ ನೀಡುತ್ತಿದೆ. ಈ ವರೆಗು 10 ಕುಟುಂಬಗಳ 96 ಮಂದಿಯರನ್ನು ಗುರ್ತಿಸಲಾಗಿದ್ದು, ಸುರಕ್ಷಿತ ಪ್ರದೇಶಗಳಿಗೆ ಸ್ಥಳಾಂತರಿಸಲಾಗಿದೆ. ಅವರ ಸುರಕ್ಷತೆ ಹಾಗೂ ಸುರಕ್ಷಿತದಿಂದ ರಾಜ್ಯಕ್ಕೆ ಕರೆ ತರಲು ಎಲ್ಲಾ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.

ಗಡಿಕೇಶ್ವರ ಭೂಕಂಪನ ಕುರಿತು ಮಾತನಾಡಿ, ಈಗಾಗಲೇ ಸಂಕಷ್ಟಕ್ಕೆ ಸಿಲುಕಿದ್ದ ಕುಟುಂಬಗಳಿಗಾಗಿ ತಾತ್ಕಾಲಿಕ ಶೆಡ್ ಗಳನ್ನು ಸ್ಥಾಪನೆ ಮಾಡಲಾಗಿದೆ. ಈಗಾಗಲೇ ತಜ್ಞರು ಪ್ರಾಥಮಿಕ ವರದಿಯನ್ನುನೀಡಿದ್ದು, ತಿಂಗಳ ಕಾಲ ಪರಿಸ್ಥಿತಿಯನ್ನು ಅವಲೋಕಿಸಲಿದ್ದಾರೆ. ಜಿಲ್ಲಾ ಆಡಳಿತ ಮಂಡಳಿಯೊಂದಿಗೂ ನಿರಂತರ ಸಂಪರ್ಕದಲ್ಲಿದ್ದೇನೆ. ಪರಿಹಾರ ಕಾರ್ಯಗಳಿಗೆ ಅನುದಾನ ಬಿಡುಗಡೆ ಮಾಡಲಾಗಿದೆ ಎಂದು ಹೇಳಿದ್ದಾರೆ.

SCROLL FOR NEXT