ಸಂಗ್ರಹ ಚಿತ್ರ 
ರಾಜ್ಯ

ಅಪಾಯದ ಕೂಪವಾದ ಐಷಾರಾಮಿ ಇಂದಿರಾನಗರದ ರಸ್ತೆಗಳು! 

ರಾಜ್ಯ ರಾಜಧಾನಿ ಬೆಂಗಳೂರಿನ ಐಷಾರಾಮಿ ಪ್ರದೇಶಗಳಲ್ಲಿ ಒಂದು ಎಂದೇ ಕರೆಸಿಕೊಳ್ಳುವ ಇಂದಿರಾನಗರದ ೧೦೦ ಅಡಿ ರಸ್ತೆ ಗುಂಡಿಗಳಿಂದನೇ ತುಂಬಿ ಹೋಗಿದ್ದು, ಅವ್ಯವಸ್ಥೆಯ ಆಗರವಾಗಿದೆ.

ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನ ಐಷಾರಾಮಿ ಪ್ರದೇಶಗಳಲ್ಲಿ ಒಂದು ಎಂದೇ ಕರೆಸಿಕೊಳ್ಳುವ ಇಂದಿರಾನಗರದ 100 ಅಡಿ ರಸ್ತೆ ಗುಂಡಿಗಳಿಂದನೇ ತುಂಬಿ ಹೋಗಿದ್ದು, ಅವ್ಯವಸ್ಥೆಯ ಆಗರವಾಗಿದೆ.  

ಇಂದಿರಾನಗರ ನೂರು (100) ಅಡಿ ರಸ್ತೆ, ಬೆಂಗಳೂರಿನ ಹಳೆ ವಿಮಾನ ನಿಲ್ದಾಣ ರಸ್ತೆ ಜೊತೆ ಹಳೆ ಮದ್ರಾಸ್ ರಸ್ತೆ ಸಂಪರ್ಕಿಸುತ್ತದೆ. ಒಂದು ಕೊನೆಯಲ್ಲಿ ಮಧ್ಯಂತರ ವರ್ತುಲ ರಸ್ತೆ ಫ್ಲೈಓವರ್ ಜಂಕ್ಷನ್ (ದೊಮ್ಮಲೂರು ಜಂ‍ಕ್ಷನ್), ಮತ್ತೊಂದು ಕೊನೆಯಲ್ಲಿ ಹಳೆ ವಿಮಾನ ನಿಲ್ದಾಣ ರಸ್ತೆ ಇದೆ. ಕಳೆದ ಕೆಲವು ವರ್ಷಗಳಿಂದ 100 ಅಡಿ ರಸ್ತೆ ಬೆಂಗಳೂರು ವಾಣಿಜ್ಯಿಕವಾಗಿ ಪ್ರಮುಖ ಉನ್ನತ ರಸ್ತೆಗಳ ಆಗಿ ಮಾರ್ಪಟ್ಟಿದೆ.

ರಸ್ತೆಯ ಕೆಟ್ಟ ಪರಿಸ್ಥಿತಿ ಬಗ್ಗೆ ಸಾರ್ವಜನಿಕರು ಕೂ ಮಾಡಿದ್ದೂ, ದಿನ ಬೆಳಿಗ್ಗೆ ಈ ರಸ್ತೆಯಲ್ಲಿ ಕಚೇರಿಗೆ ಹೋಗುವುದೆಂದರೆ ಯಮ ಯಾತನೆ ಎಂದು ತಮ್ಮ ಅಭಿಪ್ರಾಯಗಳನ್ನು ವ್ಯಕ್ತಪಡಿಸಿದ್ದಾರೆ. 

'ಐಟಿ ಕಂಪೆನಿಗಳೇ ಸಾಲು ಸಾಲು ಚಕ್ಕಳ ಮಕ್ಕಳ ಹಾಕಿ ಕೂತಂತಿರುವ ಇಂದಿರಾನಗರದ ರೋಡು ಮೈಕೈ ತೂತು ಮಾಡಿಕೊಂಡು ಸೊರಗಿ ಸತ್ತು ಹೋಗಿದೆ.. ಅದರ ಅವಸ್ಥೆ ನೋಡಿದರೆ ಆ ರೋಡಿಗೆ ಜನ್ಮವಿತ್ತವರ ಮುಖ ನೋಡ್ಬೇಕಲ್ಲ ಅನ್ಸತ್ತೆ, ಅದನ್ನ ಏನಾದ್ರು ಮಾಡ್ರಿ ರೀ ಶ್ರೀಮಾನ್ ಬೆಂಗಳೂರನವ್ರೆ! ಪಾಪ ಕೆಂಪೇಗೌಡ್ರು!' ಎಂದು ಸುನಿಲ್ ಎನ್ನುವವರು ಕೂ ಮಾಡಿದ್ದಾರೆ. 

'ಇಂದಿರಾ ನಗರದ 100 ಅಡಿ ವರ್ತುಲ ರಸ್ತೆಯಲ್ಲಿ ಸಾಗುವುದು ಜೀವ ಪಣಕ್ಕಿಟ್ಟು ನಡೆಸುವ ಯಾವುದೇ ಸಾಹಸಮಯ ಪ್ರದರ್ಶನ ನೀಡುವ ಸ್ಟಂಟ್ ಗಳಿಗೆ ಹೋಲಿಸಿದರೆ ಅದಕ್ಕಿಂತ ಕಡಿಮೆ ಅನುಭವನ್ನಂತೂ ನೀಡಲಾರದು. ನೀವೂ ಈ ಮಾರ್ಗದಲ್ಲಿ ಸಂಚರಿಸಿದ್ದರೆ ನಿಮ್ಮ ಅನಿಸಿಕೆ ಏನು?' ಎಂದು ನರೇಶ್ ಕೂ ಮಾಡಿದ್ದಾರೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ದೆಹಲಿ ಸಭೆ ಬಳಿಕ ಬೆಂಗಳೂರಿನಲ್ಲಿ ಶಕ್ತಿ ಪ್ರದರ್ಶನಕ್ಕೆ ಸಿದ್ದರಾಮಯ್ಯ ಸಜ್ಜು: ಬೆಂಬಲಿಗರ ಜೊತೆ ಮಹತ್ವದ ಸಭೆ, ಹೆಚ್ಚಿದ ಕುತೂಹಲ

ಹೈಕಮಾಂಡ್ ಸೂಚನೆಗೆ ಮಣಿದ ಸಿದ್ದರಾಮಯ್ಯ: ಮುಖ್ಯಮಂತ್ರಿ ಸ್ಥಾನ ತ್ಯಜಿಸಲು ಸಮ್ಮತಿ; ಕಾಂಗ್ರೆಸ್ ಪವರ್ ಶಿಫ್ಟ್‌ಗೆ ಕೌಂಟ್‌ಡೌನ್ ಶುರು, ಡಿಕೆಶಿಗೆ ಸಿಎಂ ಪಟ್ಟ..?

ಬೆಂಗಳೂರಿಗೂ ಎಂಟ್ರಿ ಕೊಟ್ಟಿತೇ ಮಹಾಮಾರಿ ಎಬೋಲಾ? ಆಫ್ರಿಕಾದಿಂದ ಬಂದ ಮಹಿಳೆಯಲ್ಲಿ ಸೋಂಕಿನ ಲಕ್ಷಣ ಪತ್ತೆ, ಆರೋಗ್ಯ ಇಲಾಖೆ ಹೈ ಅಲರ್ಟ್

CMRL ಹಣ ಅಕ್ರಮ ವರ್ಗಾವಣೆ ಪ್ರಕರಣ: ಕೇರಳ ಮಾಜಿ ಸಿಎಂ ಪಿಣರಾಯಿ ವಿಜಯನ್ ನಿವಾಸದ ಮೇಲೆ ED ದಾಳಿ..!

IPL 2026: ಗುಜರಾತ್ ವಿರುದ್ಧ ಭರ್ಜರಿ ಗೆಲುವು; ಸತತ 2ನೇ ಬಾರಿ ಫೈನಲ್ಸ್ ಪ್ರವೇಶಿಸಿದ RCB

SCROLL FOR NEXT