ರಾಜ್ಯ

ರಾಜ್ಯದಲ್ಲಿ ಮುಂದುವರೆದ ಕೊರೋನಾ ಏರಿಳಿತ: ಬೆಂಗಳೂರಿನಲ್ಲಿ 193 ಸೇರಿ 371 ಪ್ರಕರಣ ಪತ್ತೆ; 7 ಸಾವು!

Vishwanath S

ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಪ್ರಕರಣಗಳ ಸಂಖ್ಯೆಯಲ್ಲಿ ಏರಿಳಿತ ಮುಂದುವರೆದಿದ್ದು ಕಳೆದ 24 ಗಂಟೆಯಲ್ಲಿ 371 ಕೊರೋನಾ ಪ್ರಕರಣಗಳು ವರದಿಯಾಗಿದೆ. ಇದರೊಂದಿಗೆ ಸೋಂಕಿತರ ಸಂಖ್ಯೆ 29,85,598ಕ್ಕೆ ಏರಿಕೆಯಾಗಿದೆ.

ಮಹಾಮಾರಿಗೆ ಇಂದು 7 ಮಂದಿ ಬಲಿಯಾಗಿದ್ದಾರೆ. ಇದರೊಂದಿಗೆ ಸಾವಿನ ಸಂಖ್ಯೆ 38,002ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಸಚಿವಾಲಯ ಮಾಹಿತಿ ನೀಡಿದೆ. 

ಬೆಂಗಳೂರಿನಲ್ಲಿ ಇಂದು 193 ಮಂದಿಗೆ ಸೋಂಕು ದೃಢಪಟ್ಟಿದ್ದು, ಇದರೊಂದಿಗೆ ನಗರದಲ್ಲಿ ಸೋಂಕಿತರ ಸಂಖ್ಯೆ 12,50,513ಕ್ಕೆ ಏರಿಕೆಯಾಗಿದೆ. ಇಂದು ನಗರದಲ್ಲಿ 4 ಮಂದಿ ಸಾವನ್ನಪ್ಪಿದ್ದಾರೆ.

ರಾಜ್ಯದಲ್ಲಿ ಇಂದು 342 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇದರೊಂದಿಗೆ ಸೋಂಕಿನಿಂದ ಚೇತರಿಸಿಕೊಂಡವರ ಸಂಖ್ಯೆ 29,38,653ಕ್ಕೆ ಏರಿಕೆಯಾಗಿದೆ. ಇನ್ನು 8,914 ಸಕ್ರೀಯ ಪ್ರಕರಣಗಳಿವೆ. 

ರಾಜ್ಯಾದ್ಯಂತ ಇಂದು 1,20,073 ಕೋವಿಡ್ ಟೆಸ್ಟ್ ನಡೆಸಲಾಗಿದ್ದು, 371 ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ಇದರೊಂದಿಗೆ ರಾಜ್ಯದಲ್ಲಿ ಪಾಸಿಟಿವಿಟಿ ದರ ಶೇ. 0.30ಕ್ಕೆ ಇಳಿದಿದೆ.

SCROLL FOR NEXT