ಸಾಂದರ್ಭಿಕ ಚಿತ್ರ 
ರಾಜ್ಯ

ಬೆಂಗಳೂರು: ಭೀಕರ ಅಪಘಾತ; ಅದೃಷ್ಟವಶಾತ್ ಪ್ರಯಾಣಿಕರು ಪಾರು

ಮಹಾನಗರದ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ರಸ್ತೆಯಲ್ಲಿ ಅತೀವೇಗವಾಗಿ ಚಲಿಸುತ್ತಿದ್ದ ಕಾರು ಅಪಘಾತಕ್ಕೀಡಾಗಿದೆ. ಅದೃಷ್ಟವಶಾತ್ ಸಾವು ಸಂಭವಿಸಿಲ್ಲ.

ಬೆಂಗಳೂರು: ಮಹಾನಗರದ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ರಸ್ತೆಯಲ್ಲಿ ಅತೀವೇಗವಾಗಿ ಚಲಿಸುತ್ತಿದ್ದ ಕಾರು ಅಪಘಾತಕ್ಕೀಡಾಗಿದೆ. ಅದೃಷ್ಟವಶಾತ್ ಸಾವು ಸಂಭವಿಸಿಲ್ಲ.

ಇಂದು ಬೆಳಗ್ಗೆ ದುರ್ಘಟನೆ ನಡೆದಿದೆ. ವಿಮಾನ ನಿಲ್ದಾಣ ರಸ್ತೆಯ ಕಾಡಿಗೇನಹಳ್ಳಿ ಗೇಟ್ ಬಳಿ ಅತೀ ವೇಗದಿಂದ ಬಂದ ಕಾರು ನಿಯಂತ್ರಣ ತಪ್ಪಿ ಪಲ್ಟಿ ಹೊಡೆದಿದೆ. ರಸ್ತೆ ವಿಭಜಕ್ಕೆ ಡಿಕ್ಕಿ ಹೊಡೆದು ಸನಿಹದ ಮೋರಿಯೊಳಗೆ ಬಿದ್ದು ಸಿಲುಕಿಕೊಂಡಿದೆ. ಇದರಿಂದ ಕಾರು ಸಂಪೂರ್ಣ ನಜ್ಜುಗುಜ್ಜಾಗಿದೆ. ಆದರೆ ಪವಾಡ ಸದೃಶ ರೀತಿಯಲ್ಲಿ ಕಾರಿನಲ್ಲಿದ್ದ ಯುವಕ ಯುವತಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಸುದ್ದಿ ತಿಳಿದ ಕೂಡಲೇ ಚಿಕ್ಕಜಾಲ ಸಂಚಾರಿ ಪೊಲೀಸರು ಸ್ಥಳಕ್ಕೆ ಧಾವಿಸಿದರು. ಪ್ರಕರಣ ದಾಖಲಾಗಿದೆ. ಇತ್ತೀಚಿಗೆ ಮಹಾನಗರದ ವ್ಯಾಪ್ತಿಯಲ್ಲಿ ಐಷಾರಾಮಿ ಕಾರುಗಳನ್ನು ಮದ್ಯಪಾನ ಮಾಡಿ ಮೋಜಿನಿಂದ ಅತೀವೇಗವಾಗಿ ಚಲಾಯಿಸಿ ಅಪಘಾತಕ್ಕೆ ಕಾರಣವಾಗುತ್ತಿರುವ ಪ್ರಕರಣಗಳು ಹೆಚ್ಚಾಗುತ್ತಿವೆ. ಈ ಪ್ರಕರಣದಲ್ಲಿ ಕಾರು ಚಲಾಯಿಸುತ್ತಿದ್ದವರು ಅತೀವೇಗವಾಗಿ ಕಾರು ಚಲಾಯಿಸಿ ನಿಯಂತ್ರಣ ಕಳೆದುಕೊಳ್ಳಲು ಕಾರಣವೇನು ಎಂಬುದನ್ನು ತಿಳಿಯಲು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ನ್ಯಾಯಾಂಗದಲ್ಲಿ ಭ್ರಷ್ಟಾಚಾರದ ಪಾಠ: ಕೇಂದ್ರ ಕ್ಷಮೆಯಾಚಿಸುತ್ತಿದ್ದಂತೆ NCERT ಪಠ್ಯ ಪುಸ್ತಕ ಬ್ಯಾನ್, ಪ್ರತಿಗಳನ್ನು ವಶಕ್ಕೆ ಪಡೆಯಲು ಸುಪ್ರೀಂ ಸೂಚನೆ

'The Kerala Story 2: Goes Beyond' ಬಿಡುಗಡೆಗೆ ಕೇರಳ ಹೈಕೋರ್ಟ್ ತಡೆ

ಅಪ್ರಾಪ್ತ ಬಾಲಕಿಯೊಂದಿಗೆ ಅನುಚಿತ ವರ್ತನೆ: ಪೋಕ್ಸೋ ಕೇಸ್ ದಾಖಲಾಗುತ್ತಿದಂತೆ ಮಲ್ಲಿಕಾರ್ಜುನ ಮುತ್ಯಾ video ರಿಲೀಸ್!

ನೀವು ಪಡೆದ IMF ಬೇಲ್ಔಟ್‌ಗಿಂತ 2 ಪಟ್ಟು ಹೆಚ್ಚು; ಜಾಗಬಿಟ್ಟು ಹೋಗುವುದೇ ಪಾಕ್​ಗಿರುವ ಒಂದೇ ಆಯ್ಕೆ: ವಿಶ್ವಸಂಸ್ಥೆಯಲ್ಲಿ ಭಾರತ ವಾಗ್ದಾಳಿ!

'ನಿಮ್ಮ ಭಾಷಣ ನಾಚಿಕೆಯಿಲ್ಲದೆ ಸಮರ್ಥನೆ ಮಾಡಿಕೊಂಡಂತೆ ಇತ್ತು': ಐನ್ ಸ್ಟೈನ್ ನೆಹರೂಗೆ ಬರೆದ ಪತ್ರ ಉಲ್ಲೇಖಿಸಿ Modi ಟೀಕಿಸಿದ ಕಾಂಗ್ರೆಸ್

SCROLL FOR NEXT