ರಾಜ್ಯ

ವಿದ್ಯಾರ್ಥಿಗಳು ಐಡಿ ಕಾರ್ಡ್, ಶುಲ್ಕ ರಸೀದಿ ತೋರಿಸಿ ಬಿಎಂಟಿಸಿ ಸಾಮಾನ್ಯ ಬಸ್ ಗಳಲ್ಲಿ ಪ್ರಯಾಣಿಸಲು ಅವಕಾಶ

Nagaraja AB

ಬೆಂಗಳೂರು: 2021-22ನೇ ಶೈಕ್ಷಣಿಕ ಸಾಲಿನ ಶಾಲಾ, ಕಾಲೇಜುಗಳು ಪ್ರಾರಂಭವಾಗಿದ್ದು, ಬಿಎಂಟಿಸಿಯ ಸಾಮಾನ್ಯ ಸೇವೆಗಳಲ್ಲಿ ಶಾಲಾ, ಕಾಲೇಜಿನ  ರಸೀದಿ ಶುಲ್ಕ  ಅಥವಾ ಶಾಲಾ, ಕಾಲೇಜಿನ ಗುರುತಿನ ಚೀಟಿಯೊಂದಿಗೆ ಪ್ರಯಾಣಿಸಲು ಅವಕಾಶ ಕಲ್ಪಿಸಲಾಗಿದೆ.

1 ರಿಂದ 10ನೇ ತರಗತಿ, ಪಿಯುಸಿ, ಐಟಿಐ, ಡಿಪ್ಲೋಮಾ, ವೃತ್ತಿಪರ, ಪದವಿ, ಸ್ನಾತಕೋತ್ತರ, ತಾಂತ್ರಿಕ ಮತ್ತು ವೈದ್ಯಕೀಯ ಕಾಲೇಜು, ಸಂಜೆ ಕಾಲೇಜು ಹಾಗೂ ಪಿಹೆಚ್ ಡಿ ವಿದ್ಯಾರ್ಥಿಗಳು ಪ್ರಸಕ್ತ ಸಾಲಿನ ಶಾಲಾ , ಕಾಲೇಜಿನ ಶುಲ್ಕ ರಸೀದಿ ಅಥವಾ ಶಾಲಾ ಕಾಲೇಜಿನ ಗುರುತಿನ ಚೀಟಿಯೊಂದಿಗೆ ನವೆಂಬರ್ 30 ರವರೆಗೆ ಬಿಎಂಟಿಸಿ ಸಾಮಾನ್ಯ ಸೇವೆಗಳಲ್ಲಿ ಪ್ರಯಾಣಿಸಲು ಅವಕಾಶ ನೀಡಲಾಗಿದೆ.

ದ್ವಿತೀಯ ಪಿಯುಸಿ ಹಾಗೂ ದ್ವಿತೀಯ ವರ್ಷದ ಪದವಿ, ಸ್ನಾತಕೋತ್ತರ ಪದವಿಯಲ್ಲಿ ವ್ಯಾಸಂಗ ಮಾಡುತ್ತಿರುವವರಿಗೆ ಹಳೆಯ ಪಾಸು ಕಡ್ಡಾಯವಾಗಿದೆ ಎಂದು  ಬಿಎಂಟಿಸಿ ಹೇಳಿದೆ. 

SCROLL FOR NEXT