ಸಾದರ್ಭಿಕ ಚಿತ್ರ 
ರಾಜ್ಯ

ಬೆಂಗಳೂರು: ಮದ್ಯಪಾನ ಮಾಡಿ ಪೊಲೀಸರಿಗೆ ಕಾರು ಗುದ್ದಿಸಿದ ಚಾಲಕ

ಅತೀವೇಗವಾಗಿ ಬರುತ್ತಿದ್ದ ವಾಹನವನ್ನು ತಡೆಯಲು ಯತ್ನಿಸಿದ ಪೊಲೀಸಿಗೆ ಗುದ್ದಿರುವ ದುರ್ಘಟನೆ ನಗರದಲ್ಲಿ ನಡೆದಿದೆ.

ಬೆಂಗಳೂರು: ಅತೀವೇಗವಾಗಿ ಬರುತ್ತಿದ್ದ ವಾಹನವನ್ನು ತಡೆಯಲು ಯತ್ನಿಸಿದ ಪೊಲೀಸಿಗೆ ಗುದ್ದಿರುವ ದುರ್ಘಟನೆ ನಗರದಲ್ಲಿ ನಡೆದಿದೆ.

ಮುಂಜಾನೆ ಯಮಲೂರು ಬಳಿ ದುರ್ಘಟನೆ ನಡೆದಿದೆ. ಹಳೇ ವಿಮಾನ ನಿಲ್ದಾಣ ಸಂಚಾರಿ ಪೊಲೀಸರು ಕರ್ತವ್ಯದಲ್ಲಿದ್ದರು. ಮುಖ್ಯಪೇದೆ ಮುಬಾರಕ್ ಆಲಿ ಅವರು ಕಾರೊಂದು ಅತೀವೇಗವಾಗಿ ಬರುತ್ತಿದ್ದನ್ನು ಗಮನಿಸಿದ್ದಾರೆ. 

ವಾಹನ ನಿಲ್ಲಿಸುವಂತೆ ಕೈ ಅಡ್ಡ ಹಾಕಿದ್ದಾರೆ. ಆಗ ಚಾಲಕ ವಾಹನ ನಿಧಾನ ಮಾಡಿದ್ದಾನೆ. ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾನೆ. ಮುಬಾರಕ್ ಆಲಿ ಅವರು ಕಾರು ಮುಂಭಾಗ ನಿಂತು ಇಳಿಯಲು ಸೂಚಿಸಿದ್ದಾರೆ. ಸೂಚನೆ ಪಾಲಿಸದ ಚಾಲಕ ಆಲಿ ಅವರಿಗೆ ಕಾರು ಗುದ್ದಿಸಿದ್ದಾನೆ. ಪರಾರಿಯಾಗಲು ಯತ್ನಿಸಿಸುವಾಗ ರಸ್ತೆಬದಿ ಗೋಡೆಗೆ ಗುದ್ದಿಸಿದ್ದಾನೆ. ಕೂಡಲೇ ಪೊಲೀಸರು ಆತನನ್ನು ವಶಕ್ಕೆ ತೆಗೆದುಕೊಂಡಿದ್ದಾರೆ. ಪರೀಕ್ಷಿಸಿದಾಗ ಮದ್ಯಪಾನ ಮಾಡಿರುವುದು ತಿಳಿದಿದೆ.

ಚಾಲಕ ರಾಮಾಂಜಲು ಮತ್ತು ಆತ ಚಲಾಯಿಸುತ್ತಿದ್ದ ಕ್ರೇಟಾ ಕಾರನ್ನು ಪೊಲೀಸರು ವಶಕ್ಕೆ ತೆಗೆದುಕೊಂಡಿದ್ದಾರೆ. ಆಲಿ ಅವರ ಎಡಗಾಲು ಮಂಡಿ, ಮೊಣಕಾಲಿಗೆ ಗಾಯವಾಗಿದೆ.  ಅವರನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಲಾಗಿದೆ. ಚಾಲಕನ ವಿರುದ್ಧ ಪ್ರಕರಣ ದಾಖಲಾಗಿದೆ. ಪೊಲೀಸರ ಕರ್ತವ್ಯಕ್ಕೆ ಅಡ್ಡಿ, ಕೊಲೆಯತ್ನ ಮೊಕದ್ದಮೆಗಳನ್ನು ಹೂಡಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಮತಗಳ್ಳತನ' ನಡೆದಿರುವುದನ್ನು ಅಧ್ಯಕ್ಷೆ ದ್ರೌಪದಿ ಮುರ್ಮು ನಿರಾಕರಿಸಲಿಲ್ಲ, ನನಗೆ ಆಶ್ಚರ್ಯವಾಯಿತು: ರಾಹುಲ್ ಗಾಂಧಿ

ಬೆಂಗಳೂರು: ನಮ್ಮ ಮೆಟ್ರೋದಲ್ಲಿ Alt News ಸಹ ಸ್ಥಾಪಕ ಮೊಹಮ್ಮದ್ ಜುಬೈರ್ ಗೆ ಹಿಗ್ಗಾಮುಗ್ಗ ಥಳಿತ?, Video Viral

19ನೇ ಓವರ್‌ನಲ್ಲೇ 250 ರನ್ ಚೇಸ್: ಟಿ20 ಕ್ರಿಕೆಟ್‌ನಲ್ಲಿ ಭಾರತವನ್ನು ಸೋಲಿಸಿ ದಾಖಲೆ ಬರೆದ ವಿಂಡೀಸ್

CJP Protest: ಭಾರತದ ಯುವಕರು ದೆಹಲಿಗೆ ತಲುಪುವುದನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ: ಚಿರಾಗ್ ಪಾಸ್ವಾನ್

24 ಗಂಟೆ ಇಂಟರ್ನೆಟ್ ಕಟ್, 57 ಮೆಟ್ರೋ ನಿಲ್ದಾಣ ಬಂದ್: ಸಿಜೆಪಿ ಪ್ರತಿಭಟನೆಗೂ ಮುನ್ನ ದೆಹಲಿ ಹೈ ಅಲರ್ಟ್