ಸಾಂದರ್ಭಿಕ ಚಿತ್ರ 
ರಾಜ್ಯ

ಬೆಂಗಳೂರಿನಲ್ಲಿ ಭೀಕರ ಅಪಘಾತ: ಟಿಪ್ಪರ್ ಹರಿದು ತಾಯಿ, ಮಗು ಸಾವು

ಸಿಲಿಕಾನ್ ಸಿಟಿಯಲ್ಲಿ ವಾಹನವೊಂದು ಡಿಕ್ಕಿ ಹೊಡೆದ ಪರಿಣಾಮ ತಾಯಿ ಮತ್ತು ಮಗು ಸ್ಥಳದಲ್ಲೇ ಸಾವನ್ನಪ್ಪಿರುವ ದುರ್ಘಟನೆ ಸೋಮವಾರ ನಡೆದಿದೆ.

ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ವಾಹನವೊಂದು ಡಿಕ್ಕಿ ಹೊಡೆದ ಪರಿಣಾಮ ತಾಯಿ ಮತ್ತು ಮಗು ಸ್ಥಳದಲ್ಲೇ ಸಾವನ್ನಪ್ಪಿರುವ ದುರ್ಘಟನೆ ಸೋಮವಾರ ನಡೆದಿದೆ.

ಇಂದು ಬೆಳಗ್ಗೆ ಈ ಭೀಕರ ಅಪಘಾತ ಸಂಭವಿಸಿದ್ದು, ಪತಿ, ಪತ್ನಿ ತಮ್ಮ ಮಗುವಿನೊಂದಿಗೆ ದ್ವಿಚಕ್ರ ವಾಹನದಲ್ಲಿ ಕೆ,ಆರ್.ಪುರಂನಿಂದ ಧರ್ಮಪುರಿಗೆ ಹೊರಟ್ಟಿದ್ದರು. ಮಾರತಹಳ್ಳಿಯ ವರ್ತಲ ರಸ್ತೆಯಲ್ಲಿ ಹಿಂದಿನಿಂದ ಬಂದ ಟಿಪ್ಪರ್ ಲಾರಿ ಡಿಕ್ಕಿ ಹೊಡೆದಿದೆ. ಅದರ ರಭಸಕ್ಕೆ ತಾಯಿ ಮಗು ಬಲಕ್ಕೆ ಬಿದ್ದಿದ್ದಾರೆ. ಅವರ ಮೇಲೆಯೇ ಲಾರಿ ಹರಿದಿದೆ. ತಾಯಿ ಮಗು ಸ್ಥಳದಲ್ಲಿಯೇ ಸಾವಿಗೀಡಾಗಿದ್ದಾರೆ.

ಲಾರಿ ಡಿಕ್ಕಿ ಹೊಡೆದಾಗ ಬಲಕ್ಕೆ ಬಿದ್ದ ಗಂಡ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಆದರೆ ಹೆಂಡತಿ-ಮಗುವಿನ ತಲೆ ಅಪ್ಪಚ್ಚಿ ಆಗಿರೋದನ್ನು ನೋಡಿ ಅಘಾತಕ್ಕೊಳಗಾಗಿದ್ದರು. ಏನು ಮಾಡಬೇಕೆಂದು ತೋಚದೆ ಹೆಂಡತಿ-ಮಗುವಿನ ಶವವನ್ನು ಅಪ್ಪಿ ರೋದಿಸುತ್ತಿದ್ದರು.

ಈ ವೇಳೆ ಸ್ಥಳೀಯರ್ಯಾರು ಸಹಾಯಕ್ಕೆ ಧಾವಿಸಿಲ್ಲ. ಅಪಘಾತದ ಭೀಕರತೆ ಕಂಡು ಸ್ಥಳೀಯರು ದೂರವೇ ಉಳಿದಿದ್ದಾರೆ. ರಸ್ತೆ ಮಧ್ಯೆ ಘಟನೆ ನಡೆದಿದ್ದು ವಾಹನಗಳು ಶವಗಳ ಅಕ್ಕಪಕ್ಕದಲ್ಲೇ ಚಲಿಸುತ್ತಿದ್ದವು.

ಅಪಘಾತವಾದ ನಂತರ ಲಾರಿ ಚಾಲಕ ವಾಹನವನ್ನು ಸ್ಥಳದಲ್ಲಿಯೇ ಬಿಟ್ಟು ಪರಾರಿಯಾಗಿದ್ದಾರೆ. ಸಂಚಾರಿ ಪೊಲೀಸರು ಮೃತದೇಹಗಳನ್ನು ಬೌರಿಂಗ್ ಆಸ್ಪತ್ರೆಗೆ ಶಿಫ್ಟ್ ಮಾಡಿದ್ದಾರೆ. ಪೋಸ್ಟ್ ಮಾರ್ಟಂ ಸ್ಥಳದಲ್ಲಿ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿತ್ತು. ಎಚ್ ಎ ಎಲ್ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಗಾಗಿ ಹುಡುಕಾಟ ನಡೆದಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಮಹಾರಾಷ್ಟ್ರ: ಭಿವಂಡಿಯಲ್ಲಿ ವಸತಿ ಕಟ್ಟಡ ಕುಸಿದು 6 ಸಾವು; ಅವಶೇಷಗಳ ಅಡಿಯಲ್ಲಿ 7 ಮಂದಿ ಸಿಲುಕಿರುವ ಶಂಕೆ

Iranಗೆ ಬೆಂಬಲ ಆರೋಪ: ಭಾರತದ ಕಂಪನಿ ಸೇರಿ 6 ಸಂಸ್ಥೆಗಳ ವಿರುದ್ಧ ಅಮೆರಿಕಾ ಕಠಿಣ ಕ್ರಮ, China-Russia ಸಂಸ್ಥೆಗಳೂ Black listಗೆ..!

ಸಚಿವ ಸಂಪುಟ ವಿಸ್ತರಣೆಗೆ ಹೈಕಮಾಂಡ್ ಗ್ರೀನ್ ಸಿಗ್ನಲ್: ಸೋಮವಾರ ಸಂಜೆ ಪ್ರಮಾಣವಚನ ಸಾಧ್ಯತೆ, 18 ಸಚಿವರ ಸೇರ್ಪಡೆ ನಿರೀಕ್ಷೆ..!

ಪ್ರಶ್ನೆಪತ್ರಿಗೆ ಲೀಕ್ ದಂಧೆಗೆ ಬಿತ್ತು ಬ್ರೇಕ್: 'ಮಕ್ಕಳ ಭವಿಷ್ಯದ ಜೊತೆ ಆಟವಾಡುವವರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ': ಸೆಲ್ಫೀ ವಿಡಿಯೋ ಮೂಲಕ ಪ್ರಧಾನಿ ಮೋದಿ ಖಡಕ್ ಎಚ್ಚರಿಕೆ..!

ಅಂತ್ಯದತ್ತ ಸಾಗಿದ ಇಸ್ರೇಲ್-ಹಮಾಸ್ ಯುದ್ಧ: 14 ದಿನಗಳಲ್ಲಿ ಶಸ್ತ್ರಾಸ್ತ್ರ ಹಸ್ತಾಂತರಕ್ಕೆ ಹಮಾಸ್ ಒಪ್ಪಿಗೆ, ಶಾಂತಿ ಒಪ್ಪಂದ ಘೋಷಿಸಿದ ಟ್ರಂಪ್..!