ಸಂಗ್ರಹ ಚಿತ್ರ 
ರಾಜ್ಯ

ಶಿವಮೊಗ್ಗದಲ್ಲಿ ಮಲೇರಿಯಾ, ಡೆಂಗ್ಯೂ ಪ್ರಕರಣಗಳ ಗಣನೀಯ ಇಳಿಕೆ!

ಶಿವಮೊಗ್ಗ ಜಿಲ್ಲೆಯಲ್ಲಿ ಡೆಂಗ್ಯೂ ಹಾಗೂ ಮಲೇರಿಯಾ ಪ್ರಕರಣಗಳಲ್ಲಿ ಗಣನೀಯ ಪ್ರಮಾಣದಲ್ಲಿ ಇಳಿಕೆಯಾಗಿರುವುದು ಕಂಡು ಬಂದಿದೆ.

ಶಿವಮೊಗ್ಗ: ಶಿವಮೊಗ್ಗ ಜಿಲ್ಲೆಯಲ್ಲಿ ಡೆಂಗ್ಯೂ ಹಾಗೂ ಮಲೇರಿಯಾ ಪ್ರಕರಣಗಳಲ್ಲಿ ಗಣನೀಯ ಪ್ರಮಾಣದಲ್ಲಿ ಇಳಿಕೆಯಾಗಿರುವುದು ಕಂಡು ಬಂದಿದೆ.

ಕಳೆದ ವರ್ಷಕ್ಕೆ ಹೋಲಿಕೆ ಮಾಡಿದರೆ, ಪ್ರಸಕ್ತ ಸಾಲಿನಲ್ಲಿ ಜಿಲ್ಲೆಯಲ್ಲಿ ಡೆಂಗ್ಯೂ ಹಾಗೂ ಮಲೇರಿಯಾ ಪ್ರಕರಣಗಳು ಇಳಿಕೆಯಾಗಿದೆ. ಮಳೆಗಾಲ ಆರಂಭವಾಗುತ್ತಿದ್ದಂತೆಯೇ ಸೊಳ್ಳೆಗಳಿಂದ ಹರಡುವ ವೈರಲ್ ರೋಗಗಳು ಹೆಚ್ಚಾಗುತ್ತವೆ ಎಂದು ಆರೋಗ್ಯ ಇಲಾಖೆಯ ಅಧಿಕಾರಿಗಳು ಹೇಳಿದ್ದಾರೆ.

ನಿರಂತರವಾಗಿ ಭಾರೀ ಮಳೆಯಾಗುವ ಪ್ರದೇಶಗಳಲ್ಲಿ ಈ ರೋಗಗಳ ಸಂಖ್ಯೆ ಹೆಚ್ಚಾಗುತ್ತದೆ. ರೋಗ ಕುರಿತಂತೆ ಅಧಿಕಾರಿಗಳು ಮನೆ ಮನೆಗಳಿಗೆ ತೆರಳಿ ಜಾಗೃತಿ ಕಾರ್ಯಕ್ರಮಗಳನ್ನು ನಡೆಸುತ್ತಿರುವುದು ಹಾಗೂ ಔಷಧಿಗಳ ಸಿಂಪಡಿಸುತ್ತಿರುವುದರಿಂದ ಪ್ರಸಕ್ತ ಸಾಲಿನಲ್ಲಿ ರೋಗಗಳ ಸಂಖ್ಯೆ ಕಡಿಮೆಯಾಗಿದೆ ಎಂದು ತಿಳಿಸಿದ್ದಾರೆ.

ಶಿವಮೊಗ್ಗದ ರೋಗ ನಿಯಂತ್ರಣ ಕಾರ್ಯಕ್ರಮ ಕಚೇರಿ ಮಾಹಿತಿ ನೀಡಿರುವ ಪ್ರಕಾರ, 2020 ರಲ್ಲಿ ಶಿವಮೊಗ್ಗ ಜಿಲ್ಲೆಯಲ್ಲಿ ಐದು ಮಲೇರಿಯಾ ಪ್ರಕರಣಗಳು, 235 ಡೆಂಗ್ಯೂ ಮತ್ತು 127 ಚಿಕೂನ್ ಗುನ್ಯಾ ಪ್ರಕರಣಗಳು ವರದಿಯಾಗಿದ್ದವು. 2021 ರಲ್ಲಿ (ಸೆಪ್ಟೆಂಬರ್ 30 ರವರೆಗೆ), ಎರಡು ಮಲೇರಿಯಾ ಪ್ರಕರಣಗಳು, 260 ಡೆಂಗ್ಯೂ ಮತ್ತು 132 ಚಿಕೂನ್ ಗುನ್ಯಾ ಪ್ರಕರಣಗಳು ವರದಿಯಾಗಿವೆ ಎಂದು ಮಾಹಿತಿ ನೀಡಿದೆ.

2019 ರಲ್ಲಿ, 16 ಮಲೇರಿಯಾ ಪ್ರಕರಣಗಳು, 696 ಡೆಂಗ್ಯೂ ಪ್ರಕರಣಗಳು ಮತ್ತು 526 ಚಿಕೂನ್‌ಗುನ್ಯಾ ಪ್ರಕರಣಗಳು ವರದಿಯಾಗಿದ್ದ ಎಂದು ತಿಳಿಸಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

'ಸದನದಲ್ಲಿ ಹುಲಿ, ಹೈಕಮಾಂಡ್‌ ಮುಂದೆ ಇಲಿ'.. 'ಅಧಿಕಾರದಲ್ಲಿ ಉಳಿಯಲು DK Shivakumar ಕ್ಷಮೆಯಾಚನೆ': BJP-JDS ಟೀಕಾ ಪ್ರಹಾರ!

ಸಂಭಾಲ್ ದೇವಸ್ಥಾನದಿಂದ ಸಾಯಿಬಾಬಾ ವಿಗ್ರಹಕ್ಕೆ ಗೇಟ್ ಪಾಸ್! ಗಂಗಾ ನದಿಯಲ್ಲಿ ವಿಸರ್ಜನೆ!

RSS ಅನ್ನು ಯಾರೂ "ಸಮರ್ಥಿಸಿಕೊಳ್ಳಬಾರದು": ಡಿಕೆಶಿ ಕ್ಷಮೆಯಾಚನೆ ಸ್ವಾಗತಿಸಿದ ಬಿ.ಕೆ ಹರಿಪ್ರಸಾದ್

SCROLL FOR NEXT