ಸಾಂದರ್ಭಿಕ ಚಿತ್ರ 
ರಾಜ್ಯ

ಬೆಂಗಳೂರು: ಜೈಲಿನಿಂದ ಹೊರಬಂದಿದ್ದ ಕುಖ್ಯಾತ ರೌಡಿಯ ಬರ್ಬರ ಹತ್ಯೆ

ಸಿಲಿಕಾನ್ ಸಿಟಿಯಲ್ಲಿ ಕುಖ್ಯಾತ ರೌಡಿಯೋರ್ವನ ಗುಂಪೊಂದು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿರುವ ದಾರುಣ ಘಟನೆ ಭಾನುವಾರ ರಾತ್ರಿ ನಡೆದಿದೆ.

ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಕುಖ್ಯಾತ ರೌಡಿಯೋರ್ವನ ಗುಂಪೊಂದು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿರುವ ದಾರುಣ ಘಟನೆ ಭಾನುವಾರ ರಾತ್ರಿ ನಡೆದಿದೆ.

ಜೆ.ಸಿ.ಆನಂದ್ (36) ಕೊಲೆಯಾದ ರೌಡಿ. ಪೀಣ್ಯ ಪೊಲೀಸ್ ಠಾಣೆ ವ್ಯಾಪ್ತಿಯ ನೆಲಗದರಹಳ್ಳಿಯಲ್ಲಿ ನಿನ್ನೆ ರಾತ್ರಿ ಈ ದುರ್ಘಟನೆ ನಡೆದಿದೆ. ಬೈಕುಗಳಲ್ಲಿ ಬಂದ ಐದಾರು ಮಂದಿ ಗುಂಪು ಮಾರಕಾಸ್ತ್ರಗಳಿಂದ ದಾಳಿ ಮಾಡಿದ್ದಾರೆ. ಕೊಲೆ ಮಾಡಿದ ನಂತರ ಪರಾರಿಯಾಗಿದ್ದಾರೆ.

ಕಳೆದ ಮೂರು ದಿನಗಳಿಂದಷ್ಟೇ ಜೆ.ಸಿ.ಆನಂದ್ ಜೈಲಿನಿಂದ ಬಿಡುಗಡೆಯಾಗಿ ಹೊರಗೆ ಬಂದಿದ್ದರು. ನಿನ್ನೆ ರಾತ್ರಿ 8 ಗಂಟೆಯ ಸುಮಾರು ಬೈಕ್ ನಲ್ಲಿ ಬಂದು ಐದಾರು ಜನ ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆಗೈದು ಪರಾರಿಯಾಗಿದ್ದಾರೆ. 

ಈ ಘಟನೆ ಪೀಣ್ಯ ಪೊಲೀಸ್ ಠಾಣಾ ವ್ಯಾಪ್ತಿಯ ನೆಲಗದರನಹಳ್ಳಿಯ ಶಿವಪುರ ಬಳಿ ನಡೆದಿದೆ. ಇನ್ನು ಸ್ಥಳಕ್ಕೆ ಪೀಣ್ಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ರೇಣುಕಾಸ್ವಾಮಿ ಕೊಲೆ ಪ್ರಕರಣ: ನಟ ದರ್ಶನ್‌, ಪವಿತ್ರಾ ಗೌಡಗೆ ಬಿಗ್ ಶಾಕ್: ಪ್ರದೋಷ್‌ ಮಾಫಿ ಸಾಕ್ಷಿಗೆ ಕೋರ್ಟ್‌ ಅಸ್ತು

ರಾಮ ಮಂದಿರ ಟ್ರಸ್ಟ್‌ CEO ಹುದ್ದೆಗೆ ಬರೋಬ್ಬರಿ 5,200 ಅರ್ಜಿ; ಸಂದರ್ಶನಕ್ಕೆ ಕೇವಲ 20 ಅಭ್ಯರ್ಥಿಗಳು ಆಯ್ಕೆ!

17 ದಿನಗಳಿಂದ ಸಂಸತ್ತಿನ ಎರಡೂ ಸದನಗಳು ಸ್ತಬ್ಧ; ನಮ್ಮ ಬೇಡಿಕೆಗಳಿಗೆ ಹೆದರಿ PM ಮೋದಿ, ಅಮಿತ್ ಶಾ ಸದನಕ್ಕೆ ಬರುತ್ತಿಲ್ಲ: ಖರ್ಗೆ

Video: ಬಿಡದಿ ಟೌನ್‌ಶಿಪ್ ಪಿಸುಮಾತು ವಿವಾದ: ಮಧು ಬಂಗಾರಪ್ಪ ಜೊತೆಗಿನ ಮಾತುಕತೆ ಬಗ್ಗೆ ಬಿ.ವೈ. ವಿಜಯೇಂದ್ರ ಸ್ಪಷ್ಟನೆ

'ಬೇಡ ಬ್ರೋ': ಬೆಂಗಳೂರು ಪೊಲೀಸರ ಭರ್ಜರಿ ಬೇಟೆ; 55.8 ಕೋಟಿ ರೂ. ಮೌಲ್ಯದ ಡ್ರಗ್ಸ್ ಜಪ್ತಿ, 39 ಡ್ರಗ್ ಪೆಡ್ಲರ್‌ಗಳ ಬಂಧನ!