ಸಾಂದರ್ಭಿಕ ಚಿತ್ರ 
ರಾಜ್ಯ

ಸಂಪೂರ್ಣ ಆನ್‌ಲೈನ್ ತರಗತಿ ಮುಂದುವರಿಕೆಗೆ ಖಾಸಗಿ ಶಾಲೆಗಳ ಒಲವು

"ನಮಗೆ ಕೈ ತೊಳೆಯಲು ಹೇಳಿದ್ದರಿಂದ ನಾನು ನನ್ನ ಮನೆಯಿಂದ ನೀರಿನ ಬಾಟಲಿಯನ್ನು ತಂದಿದ್ದೇನೆ" ಎಂದು ಬೆಂಗಳೂರಿನ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಯೊಬ್ಬರು ಸೋಮವಾರ ಹೇಳಿದ್ದಾರೆ.

ಬೆಂಗಳೂರು: "ನಮಗೆ ಕೈ ತೊಳೆಯಲು ಹೇಳಿದ್ದರಿಂದ ನಾನು ನನ್ನ ಮನೆಯಿಂದ ನೀರಿನ ಬಾಟಲಿಯನ್ನು ತಂದಿದ್ದೇನೆ" ಎಂದು ಬೆಂಗಳೂರಿನ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಯೊಬ್ಬರು ಸೋಮವಾರ ಹೇಳಿದ್ದಾರೆ.

ರಾಜ್ಯ ಸರ್ಕಾರವು ಆಗಸ್ಟ್ 21 ರಂದು ಹಂತಹಂತವಾಗಿ ಶಾಲೆಗಳನ್ನು ಪುನರಾರಂಭಿಸಿದ್ದು, ಎರಡು ತಿಂಗಳ ನಂತರ ರಾಜ್ಯಾದ್ಯಂತ ಒಂದರಿಂದ ಐದನೇ ತರಗತಿಗಳಿಗೆ ಶಾಲೆಯನ್ನು ಆರಂಭಿಸಲಾಗಿದೆ. ಇದರೊಂದಿಗೆ ಒಂದರಿಂದ 12 ತರಗತಿಗಳು ಆಫ್‌ಲೈನ್ ಮೋಡ್‌ನಲ್ಲಿವೆ.

ಶಾಲೆಗಳ ಪುನರಾರಂಭದ ಬಗ್ಗೆ ಪ್ರತಿಕ್ರಿಯಿಸಿದ ದಕ್ಷಿಣ ಕನ್ನಡದ ಸರ್ಕಾರಿ ಶಾಲೆಯ ವಿದ್ಯಾರ್ಥಿಗಳ ಗುಂಪು ಹರ್ಷೋದ್ಗಾರ ವ್ಯಕ್ತಪಡಿಸಿದೆ. ಶಾಲೆಗಳ ಒಳಗೆ ಮತ್ತು ಹೊರಗೆ, ರಸ್ತೆಗಳಲ್ಲಿ ಮತ್ತು ಬಸ್‌ಗಳಲ್ಲಿ ವಿದ್ಯಾರ್ಥಿಗಳು ಯಾವುದೇ ಸಾಮಾಜಿಕ ಅಂತರ ಕಾಯ್ದುಕೊಳ್ಳದಿರುವುದು ಸಾಮಾನ್ಯವಾಗಿತ್ತು. ಆದರೆ ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಕಾರ್ಯದರ್ಶಿ ಚಂದ್ರಶೇಖರ ನುಗ್ಲಿ ಅವರು ಮಾತ್ರ ಯಾವುದೇ ಕೋವಿಡ್ ನಿಯಮಗಳ ಉಲ್ಲಂಘನೆಯಾಗಿಲ್ಲ ಎಂದಿದ್ದಾರೆ.

ಆದರೆ ಖಾಸಗಿ ಶಾಲೆಗಳು ಮಾತ್ರ ಈ ವಿಚಾರದಲ್ಲಿ ಭಿನ್ನಾಭಿಪ್ರಾಯ ಹೊಂದಿದ್ದು, ಕೆಲವು ಖಾಸಗಿ ಶಾಲೆಗಳು ಕಿರಿಯ ವಿದ್ಯಾರ್ಥಿಗಳಿಗೆ ಆಫ್‌ಲೈನ್ ತರಗತಿಗಳನ್ನು ಮುಂದೂಡಲು ನಿರ್ಧರಿಸಿದ್ದರೆ, ಇತರರು ತರಗತಿಗಳನ್ನು ಆರಂಭಿಸಿದ್ದಾರೆ. 

ಕರ್ನಾಟಕದ ಪ್ರಾಥಮಿಕ ಮತ್ತು ಪ್ರೌಢಶಾಲೆಗಳ ಅಸೋಸಿಯೇಟೆಡ್ ಮ್ಯಾನೇಜ್‌ಮೆಂಟ್‌ ಪ್ರಧಾನ ಕಾರ್ಯದರ್ಶಿ ಶಶಿಕುಮಾರ್, ಹಲವಾರು ಶಾಲೆಗಳು ಆಫ್ ಲೈನ್ ತರಗತಿ ಆರಂಭಿಸಿವೆ. ಆದರೆ ಸರ್ಕಾರಿ ಮತ್ತು ಖಾಸಗಿ ಶಾಲೆಗಳಲ್ಲಿ ಸಾಮಾಜಿಕ ಅಂತರವನ್ನು ಕಾಯ್ದುಕೊಳ್ಳುವುದು ಒಂದು ಸವಾಲಾಗಿದೆ ಎಂದು ಅವರು ಒಪ್ಪಿಕೊಂಡರು. ಎರಡನೆಯದು ಕೆಲವು ನಿರ್ಬಂಧಗಳು ಮತ್ತು ಮೂಲಸೌಕರ್ಯಗಳನ್ನು ಖಚಿತಪಡಿಸಿಕೊಳ್ಳಬೇಕು ಎಂದಿದ್ದಾರೆ.

ಹೆಚ್ಚಿನ ಖಾಸಗಿ ಶಾಲೆಗಳು ಸಂಪೂರ್ಣವಾಗಿ ಆನ್‌ಲೈನ್ ಮೋಡ್‌ಗೆ ಹಿಂತಿರುಗಲು ಯೋಚಿಸುತ್ತಿವೆ ಮತ್ತು ಪೋಷಕರು ಸಹ ಆನ್ ಲೈನ್ ಗೆ ಒತ್ತಾಯಿಸುತ್ತಿದ್ದಾರೆ. ಸೀಮಿತ ಸಂಖ್ಯೆಯ ಶಿಕ್ಷಕರನ್ನು ಪರಿಗಣಿಸಿ ಆಫ್ ಲೈನ್ ತರಗತಿ ಆರಂಭಿಸಿರುವುದು ಅಪ್ರಾಯೋಗಿಕ ಎಂದು ಸ್ವತಂತ್ರ ಸಿಬಿಎಸ್ ಇ ಶಾಲೆಗಳ ಸಂಘದ ಪ್ರಧಾನ ಕಾರ್ಯದರ್ಶಿ ಮನ್ಸೂರ್ ಅಲಿ ಖಾನ್ ಅವರು ಹೇಳಿದ್ದಾರೆ.

"ಖಾಸಗಿ ಶಾಲೆಗಳಲ್ಲಿ ಕೇವಲ ಶೇ. 20 ರಷ್ಟು ವಿದ್ಯಾರ್ಥಿಗಳು ಆಫ್‌ಲೈನ್ ತರಗತಿಗಳನ್ನು ಆರಿಸಿಕೊಳ್ಳುತ್ತಿದ್ದಾರೆ. ಆಫ್ ಲೈನ್ ಗೆ ಕನಿಷ್ಠ ಶೇ. 75 ರಷ್ಟು ಹಾಜರಾತಿ ಇಲ್ಲದಿದ್ದರೆ, ಶಾಲೆಗಳು ಆನ್‌ಲೈನ್ ತರಗತಿಗಳೊಂದಿಗೆ ಮುಂದುವರಿಯಬಹುದು" ಎಂದು ಅವರು ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ರಾಜ್ಯ ಸರ್ಕಾರಕ್ಕೆ 'ಸ್ಟಿಂಗ್ ಆಪರೇಷನ್' ಆತಂಕ: ಟ್ರ್ಯಾಪ್‌ಗೆ ಯತ್ನ ನಡೆಯುತ್ತಿದೆ, ಹುಷಾರಾಗಿರಿ ; 5 ಸಚಿವರಿಗೆ ಡಿಕೆಶಿ ಎಚ್ಚರಿಕೆ ಸಂದೇಶ

‘ವೈಯಕ್ತಿಕ ಮಹತ್ವಾಕಾಂಕ್ಷೆ ಅಲ್ಲ, ಧ್ಯೇಯಕ್ಕಾಗಿ ಬದುಕಿದ್ದೇನೆ, ದೇಶದ ಜನತೆಗೆ ತಲೆಬಾಗುತ್ತೇನೆ’: ಆಡಳಿತದಲ್ಲಿ 25 ವರ್ಷ ಪೂರೈಸಿದ ಪ್ರಧಾನಿ ಮೋದಿ ಮಾತು; Video

ರಷ್ಯಾ ಕರಾವಳಿಯಲ್ಲಿ ಡ್ರೋನ್ ದಾಳಿ: ಹೊತ್ತಿ ಉರಿದ ತೈಲ ಟ್ಯಾಂಕರ್‌, 23 ಭಾರತೀಯ ಸಿಬ್ಬಂದಿ ಪಾರು..!

Lionel Messi: 21 ವರ್ಷಗಳ ಬಳಿಕ ತವರಿನಲ್ಲೇ ಫುಟ್ಬಾಲ್​ ದಿಗ್ಗಜ ಲಿಯೋನೆಲ್ ಮೆಸ್ಸಿ ಭಾವುಕ ವಿದಾಯ; ಹೇಗಿತ್ತು ನೋಡಿ ಅಂತಿಮ ಪಂದ್ಯ; Video

‘ದಯವಿಟ್ಟು ಮಲಗಬೇಡಿ, ನಮಗೆ ನೀವು ಬೇಕು’: ಸಾವಿನ ದವಡೆಯಲ್ಲಿದ್ದ ಸ್ಮಿತ್ ಮಚ್ಚರ್'ಗೆ ಧೈರ್ಯ ತುಂಬಿದ ದಂತ ವೈದ್ಯ, Flydubai ವಿಮಾನದಲ್ಲಿ ಆ 45 ನಿಮಿಷಗಳಲ್ಲಿ ನಡೆದಿದ್ದೇನು..?