ರಾಜ್ಯ

ಕೋವಿಡ್-19: ಕರ್ನಾಟಕದಲ್ಲೂ ಡೆಲ್ಟಾ ರೂಪಾಂತರಿ AY 4.2 ವೈರಸ್ ತಳಿ ಪತ್ತೆ, ಸರ್ಕಾರಕ್ಕೆ ಹೊಸ ತಲೆನೋವು! 

ಈ ಹಿಂದೆ ಬ್ರಿಟನ್ ನಲ್ಲಿ ಪತ್ತೆಯಾಗಿದ್ದ ಡೆಲ್ಟಾ ರೂಪಾಂತರಿಯ ಹೊಸ ತಳಿ AY 4.2 ಇದೀಗ ಕರ್ನಾಟಕದಲ್ಲೂ ಪತ್ತೆಯಾಗಿದೆ.

ಬೆಂಗಳೂರು: ಈ ಹಿಂದೆ ಬ್ರಿಟನ್ ನಲ್ಲಿ ಪತ್ತೆಯಾಗಿದ್ದ ಡೆಲ್ಟಾ ರೂಪಾಂತರಿಯ ಹೊಸ ತಳಿ AY 4.2 ಇದೀಗ ಕರ್ನಾಟಕದಲ್ಲೂ ಪತ್ತೆಯಾಗಿದೆ.

ಆರೋಗ್ಯ ಇಲಾಖೆ ನೀಡಿರುವ ಮಾಹಿತಿಯನ್ವಯ ಕರ್ನಾಟಕದಲ್ಲಿ ಎರಡು AY 4.2 ತಳಿ ಸೋಂಕು ಪ್ರಕರಣಗಳು ಪತ್ತೆಯಾಗಿದ್ದು, ಇದು ಡೆಲ್ಟಾ ರೂಪಾಂತರಕ್ಕಿಂತ ಹೆಚ್ಚಿನ ವೇಗದಲ್ಲಿ ಪ್ರಸರಣವಾಗುವ ಸಾಮರ್ಥ್ಯ ಹೊಂದಿದೆ ಎಂದು ಹೇಳಲಾಗಿದೆ.

'ಗ್ಲೋಬಲ್‌ ಇನಿಷಿಯೇಟಿವ್‌ ಆನ್‌ ಅಲ್‌ ಇನ್‌ಫ್ಲುಯೆಂಜಾ ಡಾಟಾ' ವರದಿ ಪ್ರಕಾರ ಈ AY 4.2 ತಳಿ ಸೋಂಕು ಪ್ರಕರಣಗಳು ಆಂಧ್ರಪ್ರದೇಶದಲ್ಲಿ 7, ಕೇರಳದಲ್ಲಿ 4, ಕರ್ನಾಟಕ ಮತ್ತು ತೆಲಂಗಾಣದಲ್ಲಿ ತಲಾ 2, ಮಹಾರಾಷ್ಟ್ರ, ಜಮ್ಮು ಮತ್ತು ಕಾಶ್ಮೀರದಲ್ಲಿ ತಲಾ 1 ಪತ್ತೆಯಾಗಿವೆ ಎಂದು ಹೇಳಲಾಗಿದೆ. ಇದಕ್ಕೂ ಮುನ್ನ ಈ ರೂಪಾಂತರಿ ಮಧ್ಯಪ್ರದೇಶದಲ್ಲಿ ಪತ್ತೆಯಾಗಿತ್ತು, ಆ ಮೂಲಕ ದೇಶದಲ್ಲಿ ಈ AY 4.2 ತಳಿ ಸೋಂಕು ಪ್ರಕರಣಗಳ ಸಂಖ್ಯೆ ಒಟ್ಟು 17ಕ್ಕೆ ಏರಿಕೆಯಾಗಿದೆ. ಇದಕ್ಕೆ ಮಧ್ಯಪ್ರದೇಶದ ಇಂದೋರ್‌ನಲ್ಲಿ ಇತ್ತೀಚೆಗೆ ಪತ್ತೆಯಾದ 7 ಪ್ರಕರಣಗಳನ್ನೂ ಸೇರಿಸಿದರೆ ಭಾರತದ 7 ರಾಜ್ಯಗಳಲ್ಲಿ ಒಟ್ಟು 24 ಕೇಸುಗಳು ಪತ್ತೆಯಾದಂತೆ ಆಗಲಿದೆ ಎಂದು ವರದಿಯಲ್ಲಿ ತಿಳಿಸಲಾಗಿದೆ. 

ತಜ್ಞರ ಜೊತೆ ಚರ್ಚಿಸಿದ್ದೇವೆ
ಈ ಬಗ್ಗೆ ಮಾಧ್ಯಮಗಳಿಗೆ ಮಾಹಿತಿ ನೀಡಿರುವ ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ ಕೆ.ಸುಧಾಕರ್‌ ಅವರು, 'ರಷ್ಯಾ, ಇಂಗ್ಲೆಂಡ್‌ಗಳಲ್ಲಿ ಮಾತ್ರವಲ್ಲದೆ ಮಧ್ಯಪ್ರದೇಶ, ಮಹಾರಾಷ್ಟ್ರದಲ್ಲೂ ಕೊರೋನಾದ ಹೊಸ ತಳಿ ಬಂದಿದೆ ಎಂದು ಹೇಳುತ್ತಿದ್ದಾರೆ. ಈ ಬಗ್ಗೆ ರಾಜ್ಯದ ಹಿರಿಯ ತಜ್ಞರು ಹಾಗೂ ತಾಂತ್ರಿಕ ಸಲಹಾ ಸಮಿತಿಯೊಂದಿಗೆ ಚರ್ಚೆ ನಡೆಸಿದ್ದೇವೆ. ಈ ತಳಿ ಕಂಡುಬಂದಲ್ಲಿ ಸರ್ಕಾರದ ಗಮನಕ್ಕೆ ತರಬೇಕೆಂದು ಸೂಚನೆ ನೀಡಿದ್ದೇವೆ ಎಂದು ಹೇಳಿದ್ದಾರೆ.

ವಿಶ್ವಾದ್ಯಂತ 18207 ಎವೈ 4.2 ಸೋಂಕು ಪ್ರಕರಣಗಳು ಪತ್ತೆ
ಇನ್ನು ಜಗತ್ತಿನಾದ್ಯಂತ ಈ ಎವೈ 4.2 ಸೋಂಕು ಪ್ರಕರಣಗಳ ಸಂಖ್ಯೆ 18,207ಕ್ಕೆ ಏರಿಕೆಯಾಗಿದ್ದು, ಈ ಪೈಕಿ ಬ್ರಿಟನ್‌ ಒಂದರಲ್ಲೇ 16,891 ಸೋಂಕು ಪ್ರಕರಣಗಳಿವೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭೀಕರ ಮಳೆಗೆ ಜಮ್ಮು-ಕಾಶ್ಮೀರ ತತ್ತರ: ಸಾವಿನ ಸಂಖ್ಯೆ 41ಕ್ಕೆ ಏರಿಕೆ; ಕೇಂದ್ರದಿಂದ ನೆರವಿನ ಭರವಸೆ; ಮುಂದುವರೆದ ರಕ್ಷಣಾ ಕಾರ್ಯಾಚರಣೆ

ಭಾರತದ ಮೇಲೆ ಅಮೆರಿಕಾ ಸುಂಕಾಸ್ತ್ರ: ದೇಶ ರಕ್ಷಿಸುವಲ್ಲಿ ಪ್ರಧಾನಿ ಮೋದಿ ವಿಫಲ; AICC ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ವಾಗ್ದಾಳಿ

ಜಮ್ಮು-ಕಾಶ್ಮೀರದ ಬಂಡಿಪೋರಾದಲ್ಲಿ ಗುಂಡಿನ ಚಕಮಕಿ: ಇಬ್ಬರು ಉಗ್ರರ ಹತ್ಯೆ

RSS Song Controversy: ಡಿಕೆಶಿ ಆರ್‌ಎಸ್‌ಎಸ್‌ ಗೀತೆ ಹಾಡಿದ್ದು ತಪ್ಪು, ಕ್ಷಮೆ ಕೇಳಿದ್ದರಿಂದ ಎಲ್ಲವೂ ಮುಗಿದಿದೆ; ಮಲ್ಲಿಕಾರ್ಜುನ ಖರ್ಗೆ

ವಾಲ್ಮೀಕಿ ನಿಗಮ ಹಗರಣ: ಜಾರಿ ನಿರ್ದೇಶನಾಲಯದಿಂದ 5 ಕೋಟಿ ಮೌಲ್ಯದ ಆಸ್ತಿ ಮುಟ್ಟುಗೋಲು !

SCROLL FOR NEXT