ಸಾಂದರ್ಭಿಕ ಚಿತ್ರ 
ರಾಜ್ಯ

ರಾಜ್ಯದಲ್ಲಿ ಮುಂದುವರೆದ ಕೊರೋನಾ ಏರಿಳಿತ: ಬೆಂಗಳೂರಿನಲ್ಲಿ 142 ಸೇರಿ 282 ಪ್ರಕರಣ ಪತ್ತೆ; 13 ಸಾವು!

ರಾಜ್ಯದಲ್ಲಿ ಕೊರೋನಾ ಪ್ರಕರಣಗಳ ಸಂಖ್ಯೆಯಲ್ಲಿ ಏರಿಳಿತ ಮುಂದುವರೆದಿದೆ. ಕಳೆದ 24 ಗಂಟೆಯಲ್ಲಿ 282 ಕೊರೋನಾ ಪ್ರಕರಣಗಳು ವರದಿಯಾಗಿದೆ. ಇದರೊಂದಿಗೆ ಸೋಂಕಿತರ ಸಂಖ್ಯೆ 29,86,835ಕ್ಕೆ ಏರಿಕೆಯಾಗಿದೆ.

ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಪ್ರಕರಣಗಳ ಸಂಖ್ಯೆಯಲ್ಲಿ ಏರಿಳಿತ ಮುಂದುವರೆದಿದೆ. ಕಳೆದ 24 ಗಂಟೆಯಲ್ಲಿ 282 ಕೊರೋನಾ ಪ್ರಕರಣಗಳು ವರದಿಯಾಗಿದೆ. ಇದರೊಂದಿಗೆ ಸೋಂಕಿತರ ಸಂಖ್ಯೆ 29,86,835ಕ್ಕೆ ಏರಿಕೆಯಾಗಿದೆ.

ಮಹಾಮಾರಿಗೆ ಇಂದು 13 ಮಂದಿ ಬಲಿಯಾಗಿದ್ದಾರೆ. ಇದರೊಂದಿಗೆ ಸಾವಿನ ಸಂಖ್ಯೆ 38,037ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಸಚಿವಾಲಯ ಮಾಹಿತಿ ನೀಡಿದೆ. 

ಬೆಂಗಳೂರಿನಲ್ಲಿ ಇಂದು 142 ಮಂದಿಗೆ ಸೋಂಕು ದೃಢಪಟ್ಟಿದ್ದು, ಇದರೊಂದಿಗೆ ನಗರದಲ್ಲಿ ಸೋಂಕಿತರ ಸಂಖ್ಯೆ 12,51,155ಕ್ಕೆ ಏರಿಕೆಯಾಗಿದೆ. ಇಂದು ನಗರದಲ್ಲಿ 6 ಮಂದಿ ಸಾವನ್ನಪ್ಪಿದ್ದಾರೆ.

ರಾಜ್ಯದಲ್ಲಿ ಇಂದು 349 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇದರೊಂದಿಗೆ ಸೋಂಕಿನಿಂದ ಚೇತರಿಸಿಕೊಂಡವರ ಸಂಖ್ಯೆ 29,40,339ಕ್ಕೆ ಏರಿಕೆಯಾಗಿದೆ. ಇನ್ನು 8,430 ಸಕ್ರೀಯ ಪ್ರಕರಣಗಳಿವೆ. 

ರಾಜ್ಯಾದ್ಯಂತ ಇಂದು 1,17,351 ಕೋವಿಡ್ ಟೆಸ್ಟ್ ನಡೆಸಲಾಗಿದ್ದು, 282 ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ಇದರೊಂದಿಗೆ ರಾಜ್ಯದಲ್ಲಿ ಪಾಸಿಟಿವಿಟಿ ದರ ಶೇ. 0.24ಕ್ಕೆ ಇಳಿದಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ತೀವ್ರ ಕುತೂಹಲ ಘಟ್ಟಕ್ಕೆ ತಲುಪಿದ ಪಶ್ಚಿಮ ಏಷ್ಯಾ ಸಂಘರ್ಷ: ಇಂದು ಪಾಕಿಸ್ತಾನ ಮಧ್ಯಸ್ಥಿಕೆಯಲ್ಲಿ ಇರಾನ್-ಅಮೆರಿಕ ನಡುವೆ ಸಂಧಾನ ಮಾತುಕತೆ-Video

5 ದಶಕಗಳ ಬಳಿಕ ದಾಖಲೆ ನಿರ್ಮಿಸಿದ ಚಂದ್ರಯಾನ: ಯಶಸ್ವಿಯಾಗಿ ಭೂಮಿಗೆ ಮರಳಿದ Artemis II ಗಗನ ಯಾತ್ರಿಗಳು-Video

'ಹಸಿರು ಲ್ಯಾಂಬೊರ್ಗಿನಿ ಕಾರಲ್ಲಿ ಹೋಗಿ, ರಸ್ತೆ ಕಸ ಗುಡಿಸಿ ಬನ್ನಿ': ಸಂಚಾರ ನಿಯಮ ಉಲ್ಲಂಘಿಸಿ ದರ್ಪ ತೋರಿದ ಚಾಲಕನಿಗೆ ಹೈಕೋರ್ಟ್‌ ಶಿಕ್ಷೆ!

ಉಪಚುನಾವಣೆ ಗೆಲ್ಲುವ ಉಮೇದು: ಪ್ರಚಾರದಲ್ಲಿ ನಿರತರಾದ ಸಿಎಂ -ಡಿಸಿಎಂ; ನಿಯಂತ್ರಣ ಕಳೆದುಕೊಂಡ ಆಡಳಿತ ಯಂತ್ರ!

'ನನ್ನ ಹಣೆಬರಹ ಎಲ್ಲಿದೆಯೋ, ಜನ ಎಲ್ಲಿ ಗೆಲ್ಲಿಸ್ತಾರೋ ನೋಡೋಣ: ನಮ್ಮ ಸಂಖ್ಯೆ ನೋಡಿ ಅಪಹಾಸ್ಯ ಮಾಡಿದ್ದಾರೆ, 2028 ರಲ್ಲಿ ಸರ್ಕಾರ ರಚಿಸ್ತಿವಿ'

SCROLL FOR NEXT