ರಾಜ್ಯ

ಹಾನಗಲ್, ಸಿಂದಗಿ ಉಪಚುನಾವಣೆ: ಎರಡು ಕ್ಷೇತ್ರಗಳ ಮೇಲೆ ಚುನಾವಣಾ ಆಯೋಗದ ಕಣ್ಗಾವಲು

Manjula VN

ಬೆಂಗಳೂರು: ಅಕ್ಟೋಬರ್ 30 ರಂದು ನಡೆಯಲಿರುವ ಉಪಚುನಾವಣೆ ಹಿನ್ನೆಲೆಯಲ್ಲಿ ಸಿಂದಗಿ ಮತ್ತು ಹಾನಗಲ್‌ನಲ್ಲಿ ಮತದಾರರ ಓಲೈಕೆಗೆ ಹಣದ ಹಂಚಿಕೆ ಸೇರಿದಂತೆ ಅಕ್ರಮ ಚಟುವಟಿಕೆಗಳನ್ನು ತಡೆಯಲು ರಾಜ್ಯ ಚುನಾವಣಾ ಆಯೋಗ ಕಟ್ಟೆಚ್ಚರ ವಹಿಸಿದೆ.

"ಆಯಾ ಜಿಲ್ಲಾ ಚುನಾವಣಾ ಅಧಿಕಾರಿಗಳು, ವೀಡಿಯೊಗ್ರಾಫರ್‌ಗಳು ಸೇರಿದಂತೆ ಹೆಚ್ಚಿನ ಸಿಬ್ಬಂದಿಯನ್ನು ಎರಡು ಕ್ಷೇತ್ರಗಳಲ್ಲಿ ನಿಯೋಜಿಸಲಿದ್ದು, ಚೆಕ್‌ಪೋಸ್ಟ್‌ಗಳ ಸಂಖ್ಯೆಯನ್ನು ಹೆಚ್ಚಿಸಲಾಗುತ್ತದೆ ಎಂದು ಕರ್ನಾಟಕ ಮುಖ್ಯ ಚುನಾವಣಾ ಅಧಿಕಾರಿ ಮನೋಜ್ ಕುಮಾರ್ ಮೀನಾ ಹೇಳಿದರು.

ಬುಧವಾರದವರೆಗೆ 4 ಲಕ್ಷ ರೂಪಾಯಿ ಮೌಲ್ಯದ ಮದ್ಯ ವಶಪಡಿಸಿಕೊಂಡಿದ್ದು, ಬಿಟ್ಟರೆ ಹಣ ಹಂಚಿಕೆಯಾಗಿರುವ ಘಟನೆ ವರದಿಯಾಗಿಲ್ಲ ಎಂದರು.

ಉಪಚುನಾವಣೆ ವೇಳೆ ಹಣದ ಹೊಳೆ ಹರಿಯಲಿದೆ ಎಂಬ ಮಾಜಿ ಪ್ರಧಾನಿ ದೇವೇಗೌಡ ಅವರ ಹೇಳಿಕೆ ಕುರಿತು ಪ್ರತಿಕ್ರಿಯೆ ನೀಡಿ, ಘಟನೆಗಳ ಕುರಿತು ಬರವಣಿಗೆ ಮೂಲಕ ದೂರುಗಳು ದಾಖಲಾಗಿದ್ದೇ ಆದರೆ, ಕ್ರಮ ಕೈಗೊಳ್ಳಲಾಗುತ್ತದೆ ಎಂದು ತಿಳಿಸಿದ್ದಾರೆ.

SCROLL FOR NEXT