ರಾಜ್ಯ

2 ವರ್ಷಗಳ ನಂತರ ಇಂದಿನಿಂದ ಭಕ್ತರಿಗೆ ಹಾಸನಾಂಬೆ ದರ್ಶನ ಭಾಗ್ಯ: ಕೋವಿಡ್ ಲಸಿಕೆ ಎರಡು ಡೋಸ್ ಹಾಕಿಸಿಕೊಂಡವರಿಗೆ ಪ್ರವೇಶ

Sumana Upadhyaya

ಹಾಸನ: ಎರಡು ವರ್ಷಗಳ ಬಳಿಕ ಅಧಿದೇವತೆ ಹಾಸನಾಂಬೆ ದೇವಾಲಯದ ದರ್ಶನ ಭಕ್ತರಿಗೆ ಸಿಗಲಿದೆ. ಹಾಸನಾಂಬೆ ದರ್ಶನಕ್ಕೆ ಕ್ಷಣಗಣನೆ ಆರಂಭವಾಗಿದ್ದು ಭಕ್ತರು ಕಾತರದಿಂದ ಕಾಯುತ್ತಿದ್ದಾರೆ. 

ಕೋವಿಡ್-19ನ ಎರಡೂ ಡೋಸ್ ಆದವರಿಗೆ ಮಾತ್ರ ದೇವಾಲಯದ ಒಳಗೆ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದೆ. ವಿಶೇಷ ದರ್ಶನಕ್ಕೆ ಟಿಕೆಟ್ ವ್ಯವಸ್ಥೆಯಿದೆ. ವಿಶೇಷ ಪಾಸ್ ವ್ಯವಸ್ಥೆ ಮಾಡಲಾಗಿದ್ದು 1000 ರೂಪಾಯಿ, 300 ರೂಪಾಯಿ ವಿಶೇಷ ದರ್ಶನ ಟಿಕೆಟ್ ಮೂಲಕ ಅವಕಾಶ ನೀಡಲಾಗಿದೆ. ಇಂದು ಮಾತ್ರ ಸಾರ್ವಜನಿಕರ ದರ್ಶನಕ್ಕೆ ಅವಕಾಶವಿಲ್ಲ. ನಾಳೆಯಿಂದ ಅವಕಾಶ ನೀಡಲಾಗುತ್ತದೆ.

ಆಶ್ವೀಜ ಮಾಸ ಪೌರ್ಣಮಿಯ ನಂತರ ಬರುವ ಗುರುವಾರದಂದು ಹಾಸನಾಂಬೆಯ ದೇವಾಲಯ ತೆರೆಯಲ್ಪಡುತ್ತದೆ. ಸಹಸ್ರ ಸಹಸ್ರ ಸಂಖ್ಯೆಯಲ್ಲಿ ಭಕ್ತಾದಿಗಳು ಅಂದು ದರ್ಶನಾಕಾಂಕ್ಷಿಗಳಾಗಿ ಬಂದು ದೇವಿಯ ದರ್ಶನ ಪಡೆಯುತ್ತಾರೆ. ಆದಿಶಕ್ತಿಸ್ವರೂಪಿಣಿ ಹಾಸನಾಂಬೆಗೆ ಹಿಂದಿನ ವರುಷ ಹಚ್ಚಿಟ್ಟಿದ್ದ ದೀಪವು ಆರದೇ, ಮುಡಿಸಿದ ಹೂ ಬಾಡದೇ ಹಾಗೂ ನೈವೇದ್ಯಕ್ಕಿಟ್ಟ ಅಕ್ಕಿಯು ಅನ್ನವಾಗಿರುವುದು ಈ ದೇವಿಯ ವಿಶೇಷ ಶಕ್ತಿಯಾಗಿದ್ದು ಇದರಿಂದಾಗಿಯೇ ಊರ-ಪರವೂರುಗಳಿಂದ ಭಕ್ತರು ಬರುತ್ತಾರೆ. 

ಈ ಬಾರಿ ಇಂದು ಮತ್ತು ನವೆಂಬರ್ 6ರಂದು ಹೊರತುಪಡಿಸಿ ಬೇರೆಲ್ಲಾ ದಿನ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದೆ. 

SCROLL FOR NEXT