ಬೆಂಗಳೂರು: ನಿಂತಿದ್ದ ಲಾರಿಗೆ ಆಟೋ ಡಿಕ್ಕಿ, ಮಹಿಳೆ ಸಾವು
ನಿಂತಿದ್ದ ಲಾರಿಗೆ ಆಟೋ ಡಿಕ್ಕಿ ಹೊಡೆದ ಪರಿಣಾಮ ಮಹಿಳೆಯೋರ್ವರು ಸಾವನ್ನಪ್ಪಿರುವ ಘಟನೆ ಬುಧವಾರ ರಾತ್ರಿ ಸದಾಶಿವನಗರದ ಸಿವಿ ರಾಮನ್ ರಸ್ತೆಯಲ್ಲಿ ನಡೆದಿದೆ.
ಬೆಂಗಳೂರು: ನಿಂತಿದ್ದ ಲಾರಿಗೆ ಆಟೋ ಡಿಕ್ಕಿ ಹೊಡೆದ ಪರಿಣಾಮ ಮಹಿಳೆಯೋರ್ವರು ಸಾವನ್ನಪ್ಪಿರುವ ಘಟನೆ ಬುಧವಾರ ರಾತ್ರಿ ಸದಾಶಿವನಗರದ ಸಿವಿ ರಾಮನ್ ರಸ್ತೆಯಲ್ಲಿ ನಡೆದಿದೆ.
43 ವರ್ಷದ ಮಹಿಳೆಯು ತನ್ನ ಪತಿ ಹಾಗೂ ಇಬ್ಬರು ಹೆಣ್ಣು ಮಕ್ಕಳು ಪ್ರಯಾಣಿಸುತ್ತಿದ್ದ ಆಟೋ ರಸ್ತೆ ಬದಿಯಲ್ಲಿ ನಿಂತಿದ್ದ ಸಿಮೆಂಟ್ ಮಿಕ್ಸರ್ ಗೆ ಡಿಕ್ಕಿ ಹೊಡೆದಿದೆ. ಟ್ರಕ್ ಚಾಲಕ ಇಂಡಿಕೇಟರ್ ಹಾಕಿರಲಿಲ್ಲ ಎಂದು ಆರೋಪಿಸಲಾಗಿದೆ.
ಯಾಸೀನ್ ಖಾನ್ ಅವರ ಪತ್ನಿ ಮುಬೀನಾ ಮೃತ ದುರ್ದೈವಿ, ನಂದಿನಿ ಲೇಔಟ್ ನಿವಾಸಿಗಳಾಗಿದ್ದಾರೆ, ಗಾಯಗೊಂಡವರನ್ನು ಬೌರಿಂಗ್ ಆಸ್ಪತ್ರೆಗೆ ದಾಖಲಿಸಿಕೊಳ್ಳಲಾಗಿದೆ. ರಾತ್ರಿ 11.30ರ ಸುಮಾರಿಗೆ ಈ ಘಟನೆ ನಡೆದಿದೆ. ಆಟೋ ಓಡಿಸುತ್ತಿದ್ದ ಯಾಸಿನ್ ಖಾನ್, ಶಿವಾಜಿನಗರದ ಹೊಸ ಮನೆಗೆ ಶಿಫ್ಟ್ ಆಗಿದ್ದರು.
ಆಟೋ ಮೇಖ್ರಿ ಸರ್ಕಲ್ ಕಡೆಗೆ ಹೋಗುತ್ತಿತ್ತು. ಇದೇ ವೇಳೆ ಸಿವಿಲ್ ಗುತ್ತಿಗೆದಾರರೊಬ್ಬರ ಲಾರಿ ಚಾಲಕ ರಸ್ತೆಯಲ್ಲೇ ವಾಹನ ನಿಲ್ಲಿಸಿದ್ದರು. ಕತ್ತಲೆಯಾದ ಕಾರಣ ಪಾರ್ಕಾ ಮಾಡಿದ ಟ್ರಕ್ ಅನ್ನು ಯಾಸೀನ್ ಖಾನ್ ಗಮನಿಸದೆ ಆಟೋಗೆ ಡಿಕ್ಕಿ ಹೊಡೆದಿದ್ದಾರೆ. ಪರಿಣಾಮ ಮುಬೀನಾ ಹೊರ ಹಾರಿದ್ದಾರೆ. ಟ್ರಕ್ ಚಾಲಕನನ್ನು ಬಂಧಿಸಲಾಗಿದೆ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.