ಉಡುಪಿ: ಎಂಜಿನಿಯರಿಂಗ್ ವಿದ್ಯಾರ್ಥಿ ಮೇಲೆ ಅತ್ಯಾಚಾರ
ಎಂಜಿನಿಯರಿಂಗ್ ವಿದ್ಯಾರ್ಥಿ ಮೇಲೆ ಅತ್ಯಾಚಾರವೆಸಗಿದ ಆರೋಪದ ಮೇರೆಗೆ ಮಣಿಪಾಲ್ ತಾಂತ್ರಿತ ಸಂಸ್ಥೆಯ ಮಾಜಿ ಎಂಜಿನಿಯರಿಂಗ್ ವಿದ್ಯಾರ್ಥಿಯೊಬ್ಬನನ್ನು ಉಡುಪಿ ಪೊಲೀಸರು ಬಂಧಿಸಿದ್ದಾರೆ.
ಉಡುಪಿ: ಎಂಜಿನಿಯರಿಂಗ್ ವಿದ್ಯಾರ್ಥಿ ಮೇಲೆ ಅತ್ಯಾಚಾರವೆಸಗಿದ ಆರೋಪದ ಮೇರೆಗೆ ಮಣಿಪಾಲ್ ತಾಂತ್ರಿತ ಸಂಸ್ಥೆಯ ಮಾಜಿ ಎಂಜಿನಿಯರಿಂಗ್ ವಿದ್ಯಾರ್ಥಿಯೊಬ್ಬನನ್ನು ಉಡುಪಿ ಪೊಲೀಸರು ಬಂಧಿಸಿದ್ದಾರೆ.
ಬಂಧಿತ ಆರೋಪಿಯನ್ನು ದೆಹಲಿ ಮೂಲದ ಆರ್ಯನ್ ಚಂದಾವನಿ (24) ಎಂದು ಗುರುತಿಸಲಾಗಿದೆ. ಅಕ್ಟೋಬರ್ 16 ರಂದು ಇಬ್ಬರು ಪಾರ್ಟಿ ಮಾಡಿದ್ದು, ಇಂದ್ರಾಳಿಯ ಫ್ಲಾಟ್ ವೊಂದರಲ್ಲಿ ಆರೋಪಿ ಎಂಜಿನಿಯರಿಂಗ್ ವಿದ್ಯಾರ್ಥಿನಿ ಮೇಲೆ ಅತ್ಯಾಚಾರವೆಸಗಿದ್ದಾನೆ.
ಈ ವಿಚಾರವನ್ನು ಉಡುಪಿ ಮಹಿಳಾ ಪೊಲೀಸ್ ಠಾಣೆಗೆ ತಿಳಿಸಿರುವ ಸಂತ್ರಸ್ತೆ, ಕೇಸ್ ದಾಖಲಿಸಿದ್ದರು. ತನಿಖೆ ಆರಂಭಿಸಿದ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ. ಸಂತ್ರಸ್ತೆ ಕೋಮಾ ಸ್ಥಿತಿಯಲ್ಲಿದ್ದು, ತೀವ್ರ ರಕ್ತಸ್ರಾವವಾಗಿರುವುದಾಗಿ ತಿಳಿದುಬಂದಿದೆ. ಪ್ರಸ್ತುತ ಆಕೆಗೆ ಮಣಿಪಾಲ್ ಆಸ್ಪತ್ರೆಯೊಂದರಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ಅತ್ಯಾಚಾರ ನಡೆದ ಮಾರನೇ ದಿನವೇ ಆರೋಪಿಯನ್ನು ಬಂಧಿಸಲಾಗಿದೆ. ಆತನನ್ನು ನ್ಯಾಯಾಲಯ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ ಎಂದು ಉಡುಪಿ ಎಸ್ ಪಿ ವಿಷ್ಣುವರ್ಧನ್ ದಿ ನ್ಯೂ ಇಂಡಿಯನ್ ಎಕ್ಸ್ ಪ್ರೆಸ್ ಗೆ ಖಚಿತಪಡಿಸಿದ್ದಾರೆ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.