ಬಸವರಾಜ ಬೊಮ್ಮಾಯಿ 
ರಾಜ್ಯ

ರಾಜ್ಯಗಳ ಆಡಳಿತ ಕಾರ್ಯಕ್ಷಮತೆ ಶ್ರೇಯಾಂಕ: 7ನೇ ಸ್ಥಾನಕ್ಕೆ ಕುಸಿದ ಕರ್ನಾಟಕ

ರಾಜ್ಯಗಳ ಆಡಳಿತದ ಕಾರ್ಯಕ್ಷಮತೆಯ 6ನೇ ವರ್ಷದ ಶ್ರೇಯಾಂಕವು ಬಿಡುಗಡೆಗೊಂಡಿದ್ದು, ದಕ್ಷಿಣದ ರಾಜ್ಯಗಳು ಪ್ರಾಬಲ್ಯ ಸಾಧಿಸಿವೆ.

ಬೆಂಗಳೂರು:  ರಾಜ್ಯಗಳ ಆಡಳಿತದ ಕಾರ್ಯಕ್ಷಮತೆಯ 6ನೇ ವರ್ಷದ ಶ್ರೇಯಾಂಕವು ಬಿಡುಗಡೆಗೊಂಡಿದ್ದು, ದಕ್ಷಿಣದ ರಾಜ್ಯಗಳು ಪ್ರಾಬಲ್ಯ ಸಾಧಿಸಿವೆ. ದೊಡ್ಡ ರಾಜ್ಯಗಳ ಪಟ್ಟಿಯಲ್ಲಿ ಕೇರಳ ಮೊದಲ ಸ್ಥಾನದಲ್ಲಿದ್ದು, ತಮಿಳುನಾಡು ಎರಡನೇ ಸ್ಥಾನ ಹಾಗೂ ತೆಲಂಗಾಣ ಮೂರನೇ ಸ್ಥಾನ ಪಡೆದಿದೆ.

ಈ ಮೂಲಕ ದಕ್ಷಿಣದ ರಾಜ್ಯಗಳು ಮೊದಲ ಮೂರು ಸ್ಥಾನವನ್ನು ಅಲಂಕರಿಸಿದಂತಾಗಿದೆ. ಛತ್ತೀಸ್​ಗಡ, ಗುಜರಾತ್ ಹಾಗೂ ಪಂಜಾಬ್ ಕ್ರಮವಾಗಿ ನಂತರದ ಸ್ಥಾನಗಳಲ್ಲಿವೆ. ಕರ್ನಾಟಕ ಸೂಚ್ಯಂಕದೊಂದಿಗೆ 7ನೇ ಸ್ಥಾನವನ್ನು ಪಡೆದಿದೆ. ಕಳೆದ ವರ್ಷ ಕರ್ನಾಟಕ ನಾಲ್ಕನೇ ಸ್ಥಾನದಲ್ಲಿತ್ತು. ಈ ಬಾರಿ ಮೂರು ಸ್ಥಾನ ಕುಸಿತಕಂಡಿದೆ.

ಅದಾಗ್ಯೂ ಸೂಚ್ಯಂಕವು ಧನಾತ್ಮಕವಾಗಿಯೇ ಇರುವುದು ಸಮಾಧಾನ ಮೂಡಿಸಿದೆ. ಕರ್ನಾಟಕದ ನಂತರದ ನಂತರದ ಸ್ಥಾನಗಳಲ್ಲಿ ಕ್ರಮವಾಗಿ ಆಂಧ್ರಪ್ರದೇಶ, ಜಾರ್ಖಂಡ್, , ಮಧ್ಯಪ್ರದೇಶ, ರಾಜಸ್ಥಾನ ಮತ್ತು ಮಹಾರಾಷ್ಟ್ರ ಇದೆ. ಬಿಹಾರವು ಹಾಗೂ ಉತ್ತರ ಪ್ರದೇಶ  ಈ ಪಟ್ಟಿಯಲ್ಲಿ ಕೊನೆಯ ಎರಡು ಸ್ಥಾನದಲ್ಲಿವೆ.

ಸಣ್ಣ ರಾಜ್ಯಗಳ ಪಟ್ಟಿಯಲ್ಲಿ ಸಿಕ್ಕಿಂ ಮೊದಲ ಸ್ಥಾನ, ಗೋವಾ ಮಿಜೋರಾಂ ಕ್ರಮವಾಗಿ ಎರಡು ಹಾಗೂ ಮೂರನೇ ಸ್ಥಾನ ಪಡೆದಿದೆ. ಸಣ್ಣ ರಾಜ್ಯಗಳಲ್ಲಿ ಉತ್ತರಾಖಂಡ್ ಹಾಗೂ ಮಣಿಪುರ ಕೊನೆಯ ಸ್ಥಾನಗಳಲ್ಲಿವೆ. ಕೇಂದ್ರಾಡಳಿತ ಪ್ರದೇಶಗಳ ಪಟ್ಟಿಯಲ್ಲಿ ಪುದುಚೇರಿ ಮೊದಲ ಸ್ಥಾನ ಪಡೆದಿದೆ. ಜಮ್ಮು ಮತ್ತು ಕಾಶ್ಮೀರ ಎರಡನೇ ಸ್ಥಾನದಲ್ಲಿದೆ. ದಾದ್ರಾ ಮತ್ತು ನಗರ್ ಹಾವೇಲಿ ಹಾಗೂ ದಾಮನ್ ಮತ್ತು ದಿಯು ಐದು ಹಾಗೂ ಅಂಡಮಾನ್ ಮತ್ತು ನಿಕೋಬಾರ್ ಆರನೇ ಸ್ಥಾನ ಪಡೆದಿವೆ.

ಸಾರ್ವಜನಿಕ ವ್ಯವಹಾರಗಳ ಕೇಂದ್ರ (ಪಬ್ಲಿಕ್ ಅಫೇರ್ಸ್ ಸೆಂಟರ್- PAC) ಭಾರತದ ಸುಸ್ಥಿರ ಅಭಿವೃದ್ಧಿ ಗುರಿಗಳನ್ನು ಕೇಂದ್ರೀಕರಿಸುವ ಸಂಶೋಧನೆಯಲ್ಲಿ ತೊಡಗಿದೆ. ಇದನ್ನು ಭಾರತದಲ್ಲಿ ಆಡಳಿತದ ಗುಣಮಟ್ಟವನ್ನು ಸುಧಾರಿಸುವ ಆದೇಶದೊಂದಿಗೆ 1994ರಲ್ಲಿ ಸ್ಥಾಪಿಸಲಾಗಿದೆ. ಸಾರ್ವಜನಿಕ ವ್ಯವಹಾರಗಳ ಸೂಚ್ಯಂಕವು ಭಾರತದ ರಾಜ್ಯಗಳಲ್ಲಿ ಆಡಳಿತದ ಸಮರ್ಪಕತೆ ಮತ್ತು ಗುಣಮಟ್ಟದ ವಾರ್ಷಿಕ ಮೌಲ್ಯಮಾಪನವಾಗಿದೆ ಎಂದು ಪಿಎಸಿ ನಿರ್ದೇಶಕ ಗುರುಚರಣ್ ಹೇಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

'ಸದನದಲ್ಲಿ ಹುಲಿ, ಹೈಕಮಾಂಡ್‌ ಮುಂದೆ ಇಲಿ'.. 'ಅಧಿಕಾರದಲ್ಲಿ ಉಳಿಯಲು DK Shivakumar ಕ್ಷಮೆಯಾಚನೆ': BJP-JDS ಟೀಕಾ ಪ್ರಹಾರ!

ಸಂಭಾಲ್ ದೇವಸ್ಥಾನದಿಂದ ಸಾಯಿಬಾಬಾ ವಿಗ್ರಹಕ್ಕೆ ಗೇಟ್ ಪಾಸ್! ಗಂಗಾ ನದಿಯಲ್ಲಿ ವಿಸರ್ಜನೆ!

RSS ಅನ್ನು ಯಾರೂ "ಸಮರ್ಥಿಸಿಕೊಳ್ಳಬಾರದು": ಡಿಕೆಶಿ ಕ್ಷಮೆಯಾಚನೆ ಸ್ವಾಗತಿಸಿದ ಬಿ.ಕೆ ಹರಿಪ್ರಸಾದ್

SCROLL FOR NEXT