ರಾಜ್ಯ

ಅಭಿಮಾನಿಗಳಿಗಾಗಿ ಇಂದಲ್ಲ, ಭಾನುವಾರ ಪುನೀತ್ ರಾಜಕುಮಾರ್ ಅಂತ್ಯಕ್ರಿಯೆ: ಸಿಎಂ ಬೊಮ್ಮಾಯಿ

Vishwanath S

ಬೆಂಗಳೂರು: ಕನ್ನಡ ಚಿತ್ರರಂಗದ ರಾಜಕುಮಾರ ಪುನೀತ್ ರಾಜಕುಮಾರ್ ಅವರ ಅಂತ್ಯಕ್ರಿಯೆ ಇಂದು ಕಂಠೀರವ ಸ್ಟುಡಿಯೋದಲ್ಲಿ ನಡೆಯಬೇಕಿತ್ತು. ಆದರೆ ಅಪಾರ ಸಂಖ್ಯೆಯಲ್ಲಿ ಅಭಿಮಾನಿಗಳು ಕ್ರೀಡಾಂಗಣಕ್ಕೆ ದೌಡಾಯಿಸುತ್ತಿರುವುದರಿಂದ ಇಂದು ಬದಲಾಗಿ ನಾಳೆ ಅಂತ್ಯಕ್ರಿಯೆ ನಡೆಯಲಿದೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. 

ಪುನೀತ್ ರಾಜಕುಮಾರ್ ಅವರ ಮೊದಲ ಪುತ್ರಿ ದ್ರಿತಿ ಇಂದು ಸಂಜೆ ರಾಜ್ಯಕ್ಕೆ ಆಗಮಿಸುವುದರಿಂದ ರಾತ್ರಿಯಲ್ಲಿ ಅಂತ್ಯಕ್ರಿಯೆ ನಡೆಸುವುದು ಕಷ್ಟಸಾಧ್ಯ. ಅಲ್ಲದೆ ಅಪಾರ ಸಂಖ್ಯೆಯಲ್ಲಿ ಅಭಿಮಾನಿಗಳು ಅಪ್ಪುವಿನ ದರ್ಶನ ಪಡೆಯಲು ಕ್ರೀಡಾಂಗಣಕ್ಕೆ ದೌಡಾಯಿಸುತ್ತಿರುವುದರಿಂದ ಇದೆಲ್ಲವನ್ನು ಗಮನದಲ್ಲಿಟ್ಟುಕೊಂಡು ನಾಳೆ ಅಂತ್ಯಕ್ರಿಯೆ ನಡೆಯಲಿದೆ ಎಂದು ಸಿಎಂ ಬೊಮ್ಮಾಯಿ ಹೇಳಿದ್ದಾರೆ. 

ಪುನೀತ್ ರಾಜಕುಮಾರ್ ಅವರ ಅಂತ್ಯಕ್ರಿಯೆ ನಾಳೆ ನಡೆಯುವುದರಿಂದ ಅಭಿಮಾನಿಗಳು ಶಾಂತಿಯುತವಾಗಿ ದರ್ಶನ ಪಡೆಯಬೇಕು ಎಂದು ಸಿಎಂ ಬೊಮ್ಮಾಯಿ ಮನವಿ ಮಾಡಿದ್ದಾರೆ. 

ನಿನ್ನೆ ಮಧ್ಯಾಹ್ನ ಹೃದಯ ಸ್ತಂಭನದಿಂದಾಗಿ ಪುನೀತ್ ರಾಜಕುಮಾರ್ ನಿಧನರಾಗಿದ್ದರು. ನಿನ್ನೆ ಸಂಜೆಯಿಂದ ಕಂಠೀರವ ಕ್ರೀಡಾಂಗಣದಲ್ಲಿ ಅಭಿಮಾನಿಗಳಿಗಾಗಿ ಅಂತಿಮ ದರ್ಶನಕ್ಕೆ ಅನುವು ಮಾಡಿಕೊಡಲಾಗಿತ್ತು. ನಿನ್ನೆ ಸಂಜೆಯಿಂದ ನಿರಂತರವಾಗಿ ಅಭಿಮಾನಿಗಳು ಕ್ರೀಡಾಂಗಣಕ್ಕೆ ಬರುತ್ತಿದ್ದಾರೆ. 

SCROLL FOR NEXT