ಬಸವರಾಜ ಹೊರಟ್ಟಿ 
ರಾಜ್ಯ

ಚಳಿಗಾಲದ ಅಧಿವೇಶನ ಬೆಳಗಾವಿಯಲ್ಲಿ ನಡೆಸಿ; ಹೊರಟ್ಟಿ ಪತ್ರ

ಮುಂಬರುವ ವಿಧಾನ ಮಂಡಲದ ಚಳಿಗಾಲದ ಅಧಿವೇಶನವನ್ನು ನವೆಂಬರ್ ಅಂತ್ಯದಲ್ಲಿ ಅಥವಾ ಡಿಸೆಂಬರ್ ಮೊದಲ ವಾರದಲ್ಲಿ ಬೆಳಗಾವಿಯಲ್ಲಿ ನಡೆಸುವಂತೆ ವಿಧಾನ ಪರಿಷತ್ತಿನ ಸಭಾಪತಿ ಬಸವರಾಜ ಹೊರಟ್ಟಿಯವರು ಆಗ್ರಹಿಸಿದ್ದಾರೆ.

ಬೆಂಗಳೂರು: ಮುಂಬರುವ ವಿಧಾನ ಮಂಡಲದ ಚಳಿಗಾಲದ ಅಧಿವೇಶನವನ್ನು ನವೆಂಬರ್ ಅಂತ್ಯದಲ್ಲಿ ಅಥವಾ ಡಿಸೆಂಬರ್ ಮೊದಲ ವಾರದಲ್ಲಿ ಬೆಳಗಾವಿಯಲ್ಲಿ ನಡೆಸುವಂತೆ ವಿಧಾನ ಪರಿಷತ್ತಿನ ಸಭಾಪತಿ ಬಸವರಾಜ ಹೊರಟ್ಟಿಯವರು ಆಗ್ರಹಿಸಿದ್ದಾರೆ.

ಈ ಸಂಬಂಧ ಮುಖ್ಯಮಂತ್ರಿ ಅವರಿಗೆ ಪತ್ರ ಬರೆದಿದ್ದಾರೆ. ಸ್ಥಳೀಯ ಸಂಸ್ಥೆಗಳ ಕ್ಷೇತ್ರದಿಂದ ವಿಧಾನ ಪರಿಷತ್ತಿಗೆ ಆಯ್ಕೆಯಾಗಿರುವ 25 ಸದಸ್ಯರುಗಳು 2022 ರ ಜನೆವರಿ 5 ರಂದು ನಿವೃತ್ತಿ ಹೊಂದಲಿದ್ದಾರೆ. ಈ ಬಾರಿಯ ವಿಧಾನ ಮಂಡಲದ ಚಳಿಗಾಲದ ಅಧಿವೇಶನವನ್ನು ಬೆಳಗಾವಿಯ ಸುವರ್ಣಸೌಧದಲ್ಲಿ ನಡೆಸುವ ಕುರಿತು ಈಗಾಗಲೇ ಮುಖ್ಯಮಂತ್ರಿ ಅವರೊಂದಿಗೆ ಚರ್ಚಿಸಲಾಗಿದೆ. ಅವರು ಸಹ ಅದಕ್ಕೆ ಒಪ್ಪಿಗೆ ಸೂಚಿಸಿದ್ದಾರೆ ಎಂದು ವಿವರಿಸಿದ್ದಾರೆ.

ಬೆಳಗಾವಿಯಲ್ಲಿ ಅಧಿವೇಶನ ನಡೆಸುವ ಕುರಿತು ಮಾಧ್ಯಮಗಳಲ್ಲಿ ಹೇಳಿಕೆಗಳು ಪ್ರಕಟಗೊಂಡಿವೆ. ಈ ಹಿನ್ನೆಲೆಯಲ್ಲಿ ಈ ಬಾರಿಯ ಚಳಿಗಾಲದ ಅಧಿವೇಶನವನ್ನು ನವ್ಹಂಬರ್ ತಿಂಗಳಾಂತ್ಯದಲ್ಲಿ ಅಥವಾ ಡಿಸೆಂಬರ್ ಮೊದಲ ವಾರದಲ್ಲಿ ಬೆಳಗಾವಿಯಲ್ಲಿ ನಡೆಸುವಂತೆ ಸಭಾಪತಿ ಬಸವರಾಜ ಹೊರಟ್ಟಿ ಒತ್ತಾಯಿಸಿದ್ದಾರೆ. 

ಪತ್ರದಲ್ಲಿ ಏನಿದೆ?
ಸ್ಥಳೀಯ ಸಂಸ್ಥೆಗಳ ಕ್ಷೇತ್ರದಿಂದ ವಿಧಾನ ಪರಿಷತ್ತಿಗೆ ಆಯ್ಕೆಯಾಗಿರುವ 25 ಜನ ಸದಸ್ಯರುಗಳು 2022ರ ಜನವರಿ 5 ರಂದು ನಿವೃತ್ತಿ ಹೊಂದಲಿದ್ದಾರೆ. ಈ ಬಾರಿಯ ವಿಧಾನ ಮಂಡಲದ ಚಳಿಗಾಲದ ಅಧಿವೇಶನವನ್ನು ಬೆಳಗಾವಿಯ ಸುವರ್ಣಸೌಧದಲ್ಲಿ ನಡೆಸುವ ಕುರಿತು ಈಗಾಗಲೇ ತಮ್ಮೊಂದಿಗೆ ಚರ್ಚಿಸಲಾಗಿದ್ದು ನೀವು ಸಹ ಅದಕ್ಕೆ ಒಪ್ಪಿಗೆ ಸೂಚಿಸಿದ್ದೀರಿ ಅಲ್ಲದೇ ಬೆಳಗಾವಿಯಲ್ಲಿ ಅಧಿವೇಶನ ನಡೆಸುವ ಕುರಿತು ಮಾಧ್ಯಮಗಳಲ್ಲಿ ಹೇಳಿಕೆಗಳು ಪ್ರಕಟಗೊಂಡಿವೆ. ಈ ಹಿನ್ನೆಲೆಯಲ್ಲಿ ಈ ಬಾರಿಯ ಚಳಿಗಾಲದ ಅಧಿವೇಶನವನ್ನು ನವೆಂಬರ್ ತಿಂಗಳಾಂತ್ಯದಲ್ಲಿ ಅಥವಾ ಡಿಸೆಂಬರ್ ಮೊದಲ ವಾರದಲ್ಲಿ ಬೆಳಗಾವಿಯಲ್ಲಿ ನಡೆಸುವಂತೆ ಬಸವರಾಜ ಹೊರಟ್ಟಿ ಪತ್ರ ಮುಖೇನ ಒತ್ತಾಯಿಸಿದ್ದಾರೆ. 

ಜನವರಿ ಮೊದಲ ವಾರದಲ್ಲಿ ನಿವೃತ್ತಿಗೊಳ್ಳಲಿರುವ 25 ಜನ ವಿಧಾನ ಪರಿಷತ್ತಿನ ಸದಸ್ಯರಿಗೆ ಚಳಿಗಾಲದ ಅಧಿವೇಶನದಲ್ಲಿ ಪಾಲ್ಗೊಳ್ಳಲು ಅವಕಾಶ ದೊರೆಯಲಿದ್ದು, ಇದರಿಂದ ತಮ್ಮ ಕ್ಷೇತ್ರಗಳಿಗೆ ಸಂಬಂಧಿಸಿದ ಸಮಸ್ಯೆಗಳ ಕುರಿತು ಚರ್ಚೆ ನಡೆಸಿ ಪರಿಹಾರ ಕಂಡುಕೊಳ್ಳಲು ಅವರಿಗೆ ಅನುಕೂಲವಾಗುತ್ತದೆ. ಈ ನಿಟ್ಟಿನಲ್ಲಿ ವಿಧಾನ ಮಂಡಲದ ಚಳಿಗಾಲದ ಅಧಿವೇಶನ ನಡೆಯುವ ದಿನಾಂಕವನ್ನು ಮೊದಲೇ ಪ್ರಕಟಿಸುವಂತೆ ಹೊರಟ್ಟಿ, ಮುಖ್ಯಮಂತ್ರಿಗಳನ್ನು ಕೋರಿದ್ದಾರೆ.
 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಸಿಇಸಿ ವಿರುದ್ಧದ ವಿಪಕ್ಷಗಳ ಪ್ರತಿಭಟನೆ: ವಶಕ್ಕೆ ಪಡೆದ ಬೆನ್ನಲ್ಲೇ ರಾಹುಲ್, ಪ್ರಿಯಾಂಕಾ ಗಾಂಧಿ ಬಿಡುಗಡೆ

ಅಧಿಕಾರಿಯಂತೆ ನಟಿಸಿ ಆಪ್ ನಾಯಕನಿಗೆ ಧೋಕಾ; ಮದುವೆಯಾಗಿ ಆಭರಣಗಳೊಂದಿಗೆ ಮಹಿಳೆ ಪರಾರಿ!

ಆಪರೇಷನ್ ಸಿಂಧೂರ್, ರಕ್ಷಕ್‌ನಲ್ಲಿ ಪ್ರಮುಖ ಪಾತ್ರವಹಿಸಿದ್ದ ಅಶುತೋಷ್ ದೀಕ್ಷಿತ್ ವಾಯುಪಡೆಯ ನೂತನ ಮುಖ್ಯಸ್ಥ!

ಮಚ್ಛಾರ್ ಆರೋಗ್ಯಯಲ್ಲಿ 'ಸ್ಥಿರ ಸುಧಾರಣೆ': ಭಾರತೀಯ ರಾಯಭಾರ ಕಚೇರಿ

KPSC ನೇಮಕಾತಿ ಹಗರಣ: EDಯಿಂದ ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್‌, ಸದಸ್ಯೆ ಗೀತಾ ಬಂಧನ!