ಸಂಗ್ರಹ ಚಿತ್ರ 
ರಾಜ್ಯ

ರಾಜ್ಯದಲ್ಲಿ ಕೊರೋನಾ ಇಳಿಮುಖ: ಬೆಂಗಳೂರಿನಲ್ಲಿ 359 ಸೇರಿ ಇಂದು 1,159 ಪ್ರಕರಣ ಪತ್ತೆ; 21 ಸಾವು!

ಕೊರೋನಾ ಎರಡನೇ ಅಲೆ ಇಳಿಮುಖದತ್ತ ಸಾಗಿದೆ. ಕಳೆದ 24 ಗಂಟೆಯಲ್ಲಿ ರಾಜ್ಯದಲ್ಲಿ 1,159 ಕೊರೋನಾ ಪ್ರಕರಣಗಳು ವರದಿಯಾಗಿದ್ದು ಇದರೊಂದಿಗೆ ಸೋಂಕಿತರ ಸಂಖ್ಯೆ 29,48,228ಕ್ಕೆ ಏರಿಕೆಯಾಗಿದೆ.

ಬೆಂಗಳೂರು: ಕೊರೋನಾ ಎರಡನೇ ಅಲೆ ಇಳಿಮುಖದತ್ತ ಸಾಗಿದೆ. ಕಳೆದ 24 ಗಂಟೆಯಲ್ಲಿ ರಾಜ್ಯದಲ್ಲಿ 1,159 ಕೊರೋನಾ ಪ್ರಕರಣಗಳು ವರದಿಯಾಗಿದ್ದು ಇದರೊಂದಿಗೆ ಸೋಂಕಿತರ ಸಂಖ್ಯೆ 29,48,228ಕ್ಕೆ ಏರಿಕೆಯಾಗಿದೆ.

ಮಹಾಮಾರಿಗೆ ಇಂದು 21 ಮಂದಿ ಬಲಿಯಾಗಿದ್ದಾರೆ. ಇದರೊಂದಿಗೆ ಸಾವಿನ ಸಂಖ್ಯೆ 37,339ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಸಚಿವಾಲಯ ಪ್ರಕಟಿಸಿದೆ.   

ಬೆಂಗಳೂರಿನಲ್ಲಿ ಇಂದು 359 ಮಂದಿಗೆ ಸೋಂಕು ದೃಢಪಟ್ಟಿದ್ದು, ಇದರೊಂದಿಗೆ ನಗರದಲ್ಲಿ ಸೋಂಕಿತರ ಸಂಖ್ಯೆ 12,38,196ಕ್ಕೆ ಏರಿಕೆಯಾಗಿದೆ. ಇಂದು ನಗರದಲ್ಲಿ 7 ಮಂದಿ ಸಾವನ್ನಪ್ಪಿದ್ದಾರೆ.

ರಾಜ್ಯದಲ್ಲಿ ಇಂದು 1,112 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇದರೊಂದಿಗೆ ಸೋಂಕಿನಿಂದ ಚೇತರಿಸಿಕೊಂಡವರ ಸಂಖ್ಯೆ 28,94,827ಕ್ಕೆ ಏರಿಕೆಯಾಗಿದೆ. ಇನ್ನು 18,412 ಸಕ್ರೀಯ ಪ್ರಕರಣಗಳಿವೆ. 

ರಾಜ್ಯಾದ್ಯಂತ ಇಂದು 1,75,319 ಕೋವಿಡ್ ಟೆಸ್ಟ್ ನಡೆಸಲಾಗಿದ್ದು, 1,159 ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ಇದರೊಂದಿಗೆ ರಾಜ್ಯದಲ್ಲಿ ಪಾಸಿಟಿವಿಟಿ ದರ ಶೇ. 0.66ಕ್ಕೆ ಇಳಿದಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

5 ರಾಜ್ಯಗಳಿಗೆ ರಾಜ್ಯಪಾಲರ ನೇಮಕ; ಇವರೇ ಕರ್ನಾಟಕದ ನೂತನ ರಾಜ್ಯಪಾಲರು...

ವಿಡಿಯೋ ಪ್ರಸಾರ ಮಾಡದಂತೆ ತಡೆಯಾಜ್ಞೆ ಕೋರಿ ಕೋರ್ಟ್ ಮೆಟ್ಟಿಲೇರಿದ ಮಾಜಿ ಮುಖ್ಯಮಂತ್ರಿ!

ಸ್ಯಾಂಡಲ್‌ವುಡ್‌ನಲ್ಲಿ ಮತ್ತೊಂದು ವಿಚ್ಛೇದನ: 7 ವರ್ಷದ ದಾಂಪತ್ಯಕ್ಕೆ ಅಂತ್ಯವಾಡಿದ ಕನ್ನಡದ ಕಿರುತೆರೆ ನಟಿ!

CM ಡಿಕೆಶಿ​​ ಕುರ್ತಾ ಹಿಡಿದು ಹಿಂದೆ ತಳ್ಳಿದ ರಾಹುಲ್ ಗಾಂಧಿ: ವಿಡಿಯೋ ವೈರಲ್; ಬಂಡೆಗೆ ಸಿಕ್ಕ ಮರ್ಯಾದೆ! ಫುಲ್‌ ಅನ್‌ ರೆಸ್ಪೆಕ್ಟು!

ಕರ್ನಾಟಕ ಸೇರಿ 5 ರಾಜ್ಯಗಳಿಗೆ 2 ದಿನಗಳಲ್ಲಿ ಭಾರೀ ಮಳೆ: IMD ಎಚ್ಚರಿಕೆ