ಸಿಎಂ ಬಸವರಾಜ ಬೊಮ್ಮಾಯಿ 
ರಾಜ್ಯ

ಕಳೆದ ವರ್ಷದ ನಿಯಮದಂತೆ ಈ ಬಾರಿ ಗಣೇಶಾಚರಣೆ: ಸಿಎಂ ಬೊಮ್ಮಾಯಿ

ಕಳೆದ ವರ್ಷ ನೀಡಲಾಗಿದ್ದ ನಿಯಮದಂತೆ ಈ ಬಾರಿಯೂ ಗಣೇಶ ಹಬ್ಬಾಚರಣೆಗೆ ಅನುಮತಿ ನೀಡಲಾಗುತ್ತದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಬುಧವಾರ ಹೇಳಿದ್ದಾರೆ.

ಬೆಂಗಳೂರು/ಹುಬ್ಬಳ್ಳಿ: ಕಳೆದ ವರ್ಷ ನೀಡಲಾಗಿದ್ದ ನಿಯಮದಂತೆ ಈ ಬಾರಿಯೂ ಗಣೇಶ ಹಬ್ಬಾಚರಣೆಗೆ ಅನುಮತಿ ನೀಡಲಾಗುತ್ತದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಬುಧವಾರ ಹೇಳಿದ್ದಾರೆ.

ಇಂದು ಹುಬ್ಬಳ್ಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಬೊಮ್ಮಾಯಿ, ಗಣೇಶೋತ್ಸವ ಆಚರಣೆ ಕುರಿತು ಈಗಾಗಲೇ ಹೇಳಿದಂತೆ ಸೆ. 5 ರಂದು ತಜ್ಞರು ವರದಿ ಸಲ್ಲಿಸುತ್ತಾರೆ. ರಾಜ್ಯದ ಬೇರೆ ಬೇರೆ ಜಿಲ್ಲೆಗಳಲ್ಲಿ ವಿಭಿನ್ನವಾಗಿ ಹಬ್ಬ ಆಚರಿಸಲಾಗುತ್ತದೆ. ತಜ್ಞರು ಸಹ ಆಯಾ ಜಿಲ್ಲೆಯಲ್ಲಿ ವರದಿ ಸಲ್ಲಿಸಲು ಕಾಲಾವಕಾಶ ಕೇಳಿದ್ದಾರೆ ಎಂದರು.

ಕಳೆದ ವರ್ಷ ಯಾವ ರೀತಿ ನಿಯಮನುಸಾರ ಗಣೇಶೋತ್ಸವ ಆಚರಿಸಲಾಗಿತ್ತು ಅದೇ ರೀತಿ ಈ ವರ್ಷವು ಕಟ್ಟುನಿಟ್ಟಿನ ಕ್ರಮಗಳ ಮೂಲಕ ಆಚರಿಸಲು ಅನುಮತಿ ನೀಡಲಾಗುತ್ತದೆ. ಈಗಾಗಲೇ ಗಡಿ ಜಿಲ್ಲೆಗಳಲ್ಲಿ ವಾರಾಂತ್ಯದ ಕರ್ಫ್ಯೂ ತೆಗೆಯಲಾಗಿದೆ. ಆರ್ಥಿಕ ಚಟುವಟಿಕೆಯಷ್ಟೇ ಕೋವಿಡ್ ನಿರ್ವಹಣೆ ಕೂಡ ಮುಖ್ಯವಾಗಿದೆ. ಹೀಗಾಗಿ ಎಲ್ಲಿ ಕೊರೋನಾ ಕಡಿಮೆಯಿರುತ್ತದೊ ಅಲ್ಲಿ ಸೂಕ್ತ ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದರು.

ಕೋವಿಡ್ ಪರಿಸ್ಥಿತಿ ಬಗ್ಗೆ ವರದಿ ನೀಡುವಂತೆ ಎಲ್ಲಾ ಜಿಲ್ಲಾಧಿಕಾರಿಗಳಿಗೆ ಸೂಚಿಸಲಾಗಿದೆ. ಅವರು ನೀಡುವ ವರದಿಯನ್ನು ತಜ್ಞರ ತಂಡ ಪರಿಶೀಲನೆ ನಡೆಸಿದ ಬಳಿಕ ಗಣೇಶೋತ್ಸವ ಆಚರಣೆ ಬಗ್ಗೆ ತೀರ್ಮಾನ ತೆಗೆದುಕೊಳ್ಳಲಾಗುವುದು ಎಂದು ಸಿಎಂ ತಿಳಿಸಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಆಯೋಗದ ವಿವಾದ: CEC Gyanesh Kumar ಭಾಗಿಯಾಗಬೇಕಿದ್ದ ಯುವಕರೊಂದಿಗಿನ ಕಾರ್ಯಕ್ರಮ ದಿಢೀರ್ ರದ್ದು!

'ಯಾರು ಚಿತ್ರೀಕರಿಸುತ್ತಿದ್ದರು?': ಜಮುಯಿ ದುರಂತಕ್ಕೆ ವಿಪಕ್ಷಗಳೇ ಕಾರಣ-ಬಿಜೆಪಿ ಸಚಿವ

ವಿಶ್ವಸಂಸ್ಥೆ ಸುಧಾರಣೆ ವಿರೋಧಿಸುವವರಿಗೆ ಜಾಗತಿಕ ವೇದಿಕೆ ಬಗ್ಗೆ ಕಾಳಜಿಯಿಲ್ಲ, ಕೇವಲ ಸ್ವಾರ್ಥಕ್ಕೆ ಬಳಕೆ: ಎಸ್. ಜೈಶಂಕರ್ ವಾಗ್ದಾಳಿ

ಬಿಹಾರದಲ್ಲಿ ಹದಗೆಟ್ಟ ಕಾನೂನು ಸುವ್ಯವಸ್ಥೆ? ಮಂದಾರ್ ಬೆಟ್ಟದಲ್ಲಿ ಯುವತಿಗೆ ಕಾಮುಕರಿಂದ ಕಿರುಕುಳ; ಒಂದೇ ವಾರದಲ್ಲಿ 3ನೇ ಪ್ರಕರಣ..!

ಸಿಕ್ಕಿಂನಲ್ಲಿ ವರುಣನ ಆರ್ಭಟ: Rimbi ಗ್ರಾಮದಲ್ಲಿ ಭೀಕರ ಭೂಕುಸಿತ; ಹಲವು ಮನೆಗಳು, ಸರ್ಕಾರಿ ವಸತಿ ಗೃಹಗಳು ಧ್ವಂಸ..!