ರಾಜ್ಯ

ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಸೆ.5ವರೆಗೂ ಭಾರೀ ಮಳೆ: ಯೆಲ್ಲೋ ಅಲರ್ಟ್ ಘೋಷಣೆ!

Vishwanath S

ಬೆಂಗಳೂರು: ರಾಜ್ಯದಲ್ಲಿ ಮುಂಗಾರು ಮಳೆ ಚುರುಕಾಗಿರುವುದರಿಂದ ರಾಜ್ಯದ 9 ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಸೆಪ್ಟೆಂಬರ್ 5ವರೆಗೂ ರಾಜ್ಯದ ಕೆಲವಡೆ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಇನ್ನು ಬಂಗಾಳಕೊಲ್ಲಿಯಲ್ಲಿ ವಾಯುಬಾರ ಕುಸಿತದಿಂದಾಗಿ ರಾಜ್ಯದ ಕರಾವಳಿ ಮಲೆನಾಡು ದಕ್ಷಿಣ ಒಳನಾಡು ಹಾಗೂ ಉತ್ತರ ಒಳನಾಡಿನಲ್ಲಿ ಕೆಲವು  ದಿನಗಳಿಂದ ಮಳೆಯಾಗುತ್ತಿದ್ದು, ಇಂದೂ ಹಲವೆಡೆ ಮಳೆ ಮುಂದುವರೆಯಲಿದೆ.

ಬೆಂಗಳೂರು, ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಶಿವಮೊಗ್ಗ, ಚಿಕ್ಕಮಗಳೂರು, ಚಿಕ್ಕಬಳ್ಳಾಪುರ, ಹಾಸನ, ಮತ್ತು ಕೋಲಾರ ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗಲಿದ್ದು, ಹಳದಿ ಅಲರ್ಟ್ ಘೋಷಿಸಲಾಗಿದೆ ಎಂದು ಹವಾಮಾನ ಇಲಾಖೆ ನಿರ್ದೇಶಕ ಸಿ. ಎಸ್ ಪಾಟೀಲ್ ತಿಳಿಸಿದ್ದಾರೆ.

ಕರಾವಳಿ ತೀರ ಪ್ರದೇಶದಲ್ಲಿ ಗಾಳಿಯ ವೇಗವು ಪ್ರತಿ ಗಂಟೆಗೆ 40 ರಿಂದ 50 ಕಿಮೀ ಇರುವ ಸಾಧ್ಯತೆಯಿದ್ದು ಮೀನುಗಾರರು ಸಮುದ್ರಕ್ಕೆ ಇಳಿಯಬಾರದು ಎಂದು ಇಲಾಖೆ ಎಚ್ಚರಿಕೆ ನೀಡಿದೆ.

SCROLL FOR NEXT