ವಿಶ್ವೇಶ್ವರ ಹೆಗಡೆ ಕಾಗೇರಿ 
ರಾಜ್ಯ

ಸಚಿವರು ಅಧಿವೇಶನಕ್ಕೆ ಗೈರು ಹಾಜರಾಗುವಂತಿಲ್ಲ: ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ

ಸೆ.13ರಿಂದ ನಡೆಯುವ ವಿಧಾನಸಭೆ ಅಧಿವೇಶನದ ಕಲಾಪಗಳಲ್ಲಿ ಎಲ್ಲಾ ಸಚಿವರು ಹಾಜರಿರುವಂತೆ ಸೂಚನೆ ನೀಡುವಂತೆ ಮುಖ್ಯಮಂತ್ರಿಗಳು ಮತ್ತು ಸಂಸದೀಯ ವ್ಯವಹಾರಗಳ ಸಚಿವರಿಗೆ ವಿಧಾನಸಭೆಯ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ತಿಳಿಸಿದ್ದಾರೆ.

ಬೆಂಗಳೂರು: ಸೆ.13ರಿಂದ ನಡೆಯುವ ವಿಧಾನಸಭೆ ಅಧಿವೇಶನದ ಕಲಾಪಗಳಲ್ಲಿ ಎಲ್ಲಾ ಸಚಿವರು ಹಾಜರಿರುವಂತೆ ಸೂಚನೆ ನೀಡುವಂತೆ ಮುಖ್ಯಮಂತ್ರಿಗಳು ಮತ್ತು ಸಂಸದೀಯ ವ್ಯವಹಾರಗಳ ಸಚಿವರಿಗೆ ವಿಧಾನಸಭೆಯ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ತಿಳಿಸಿದ್ದಾರೆ.

ಈ ಕುರಿತು ಮುಖ್ಯಮಂತ್ರಿ ಮತ್ತು ಸಂಸದೀಯ ವ್ಯವಹಾರಗಳ ಸಚಿವರಿಗೆ ಪ್ರತ್ಯೇಕ ಪತ್ರ ಬರೆದಿರುವ ಅವರು, ಈ ಸಂಬಂಧ ಎಲ್ಲಾ ಸಚಿವರಿಗೂ ಅಗತ್ಯ ಸೂಚನೆಗಳನ್ನು ನೀಡಬೇಕು. ತಾವು ಪ್ರತಿನಿಧಿಸುವ ವಿಧಾನಸಭಾ ಕ್ಷೇತ್ರಗಳಿಗೆ ಸಂಬಂಧಿಸಿದಂತೆ ಸಚಿವರು ಕಲಾಪದಲ್ಲಿ ಹಾಜರಾಗುವ ಸಂಬಂಧ ವಿನಾಯಿತಿ ಕೋರುವುದು ಸಾಮಾನ್ಯವಾಗಿದೆ’ ಎಂದು ತಿಳಿಸಿದ್ದಾರೆ.

ಸಾರ್ವಜನಿಕ ಮಹತ್ವದ ವಿಚಾರಗಳ ಬಗ್ಗೆ ಸದಸ್ಯರು ಕೇಳುವ ಪ್ರಶ್ನೆಗಳಿಗೆ ಸಂಬಂಧಿತ ಸಚಿವರು ಉತ್ತರ ನೀಡಬೇಕಾಗುತ್ತದೆ.  ಹೀಗಾಗಿ ಸಚಿವರು ಚರ್ಚೆಯ ವೇಳೆ ಸದನದಲ್ಲಿ ಗೈರಾಗುವುದು ಸರಿಯಲ್ಲ. ಸಚಿವರ ಅನುಪಸ್ಥಿತಿ, ಆಡಳಿತ ಪಕ್ಷದಿಂದ ಉತ್ತರ ಪಡೆಯುವ ಸದಸ್ಯರ ಅವಕಾಶವನ್ನು ವಂಚಿಸುತ್ತದೆ. ಈ ಹಿನ್ನೆಲೆಯಲ್ಲಿ ಸಚಿವರು ಸದನದಲ್ಲಿ ಹಾಜರಿರುವುದನ್ನು ಖಾತ್ರಿಪಡಿಸಿಕೊಳ್ಳಬೇಕು’ ಎಂದು ಹೇಳಿದ್ದಾರೆ.

ಇದೇ ಸ್ವರೂಪದ ಪತ್ರವನ್ನು ಎಲ್ಲ ಸಚಿವರಿಗೂ ವ್ಯಕ್ತಿಗತವಾಗಿ ಕಳುಹಿಸಿರುವ ಸಭಾಧ್ಯಕ್ಷರು, ಸದನದ ಕಾರ್ಯ ಕಲಾಪದಲ್ಲಿ ಪಾಲ್ಗೊಳ್ಳುವಂತೆ ಮತ್ತು ತಮ್ಮ ಕ್ಷೇತ್ರಗಳ ಅಧಿಕೃತ ಕಾರ್ಯಕ್ರಮಗಳನ್ನು ಉಲ್ಲೇಖಿಸಿ ಕಲಾಪದಿಂದ ವಿನಾಯಿತಿ ಕೋರದಂತೆಯೂ ಸೂಚಿಸಿದ್ದಾರೆಂದು ತಿಳಿದುಬಂದಿದೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ನಂದಿಗ್ರಾಮದಲ್ಲಿ 1.22 ಲಕ್ಷ ಮತ, ಅಸ್ಸಾಂನಲ್ಲಿ BJPಗೆ ಗೆಲುವು; 2 ಕ್ಷೇತ್ರ ಗೆದ್ದ TVK: ಕಾಂಗ್ರೆಸ್, ದೀದಿಗೆ ಮುಖಭಂಗ!

ಮತಗಳ್ಳತನವೇ ಆಗಿದ್ದರೆ ಕೇರಳ Congress CM, ತಮಿಳುನಾಡು CM ಕೂಡ ಮತಗಳ್ಳರೇ: ಚೇತನ್ ಅಹಿಂಸಾ

'ಅಸಹ್ಯ, ಅತಿರೇಕ'.. 'ನಿಮ್ಮನ್ನು ಈರೀತಿ ನೋಡಲು ಇಚ್ಛಿಸುವುದಿಲ್ಲ, BiggBoss ಶೋ ಬಿಟ್ಟು ಹೊರಬನ್ನಿ'; Kichcha Sudeepಗೆ ಪತ್ರ

'ಆಶ್ರಮಕ್ಕೆ ಬರಲು ಹಣ ಪಡೆದ ಕೊಹ್ಲಿ' ಆರೋಪ: ಉಲ್ಟಾ ಹೊಡೆದ Falahari Maharaj, ಕ್ಷಮೆಯಾಚನೆ! video

26 ಸೆಕೆಂಡ್ ನಲ್ಲೇ ಗ್ರೇಟ್ ಎಸ್ಕೇಪ್; ಮೃಗಾಲಯ ವೀಕ್ಷಣೆಗೆ ಬಂದ ಜೋಡಿ, ಗಂಡ ಬೈಕ್ ಪಾರ್ಕ್ ಮಾಡೋ ಗ್ಯಾಪಲ್ಲಿ 'ಲವರ್ ಜೊತೆ ಪತ್ನಿ ಪರಾರಿ'! Video ವೈರಲ್!