ಸಾಂದರ್ಭಿಕ ಚಿತ್ರ 
ರಾಜ್ಯ

ಚಾಮರಾಜನಗರ: ಪ್ರಕರಣದ ವಿಚಾರಣೆಗೆ ಬಂದಿದ್ದಾಗ ಕುಸಿದು ಬಿದ್ದು ನಗರಸಭಾ ಸದಸ್ಯ ಸಾವು

ಪ್ರಕರಣವೊಂದರ ವಿಚಾರಣೆಗಾಗಿ ಜಿಲ್ಲಾ ನ್ಯಾಯಾಲಯಕ್ಕೆ ಬಂದಿದ್ದ‌ ನಗರಸಭಾ ಸದಸ್ಯರೊಬ್ಬರು ಹೃದಯಾಘಾತದಿಂದ ಮೃತಪಟ್ಟಿರುವ ಘಟನೆ ಬುಧವಾರ ನಡೆದಿದೆ.

ಚಾಮರಾಜನಗರ: ಪ್ರಕರಣವೊಂದರ ವಿಚಾರಣೆಗಾಗಿ ಜಿಲ್ಲಾ ನ್ಯಾಯಾಲಯಕ್ಕೆ ಬಂದಿದ್ದ‌ ನಗರಸಭಾ ಸದಸ್ಯರೊಬ್ಬರು ಹೃದಯಾಘಾತದಿಂದ ಮೃತಪಟ್ಟಿರುವ ಘಟನೆ ಬುಧವಾರ ನಡೆದಿದೆ.

ಮೃತರನ್ನು ನಗರಸಭೆಯ 6ನೇ ವಾರ್ಡ್ ಸದಸ್ಯ 45 ವರ್ಷದ ಸಮೀವುಲ್ಲಾ ಖಾನ್ ಎಂದು ಗುರುತಿಸಲಾಗಿದೆ. ಗಾಳಿಪುರ ಬಡಾವಣೆಯ ಅಹಮದ್ ಮೊಹಲ್ಲಾ ನಿವಾಸಿಯಾಗಿದ್ದ ಸಮೀವುಲ್ಲಾ ಖಾನ್ ಎಸ್ ಡಿಪಿಐ ಜಿಲ್ಲಾ ಘಟಕದ ಉಪಾಧ್ಯಕ್ಷರೂ ಆಗಿದ್ದರು. 

ಕಲಾಪ ಆರಂಭಕ್ಕೂ ಮುನ್ನ ನ್ಯಾಯಾಲಯದ ಆವರಣದಲ್ಲಿ ನಿಂತಿದ್ದ ಸಮೀವುಲ್ಲಾ ಇದ್ದಕ್ಕಿದ್ದಂತೆ ತೀವ್ರ ಎದೆನೋವು ಎಂದು ಹೇಳಿ ಕುಸಿದು ಬಿದ್ದರು. ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲಿಸಲಾಯಿತು. ಆದರೆ ಆ ವೇಳೆಗೆ ಅವರು ಮೃತಪಟ್ಟಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ. 

ಸಮೀವುಲ್ಲಾ ಅವರು ನಾಲ್ಕು ವರ್ಷಗಳ ಹಿಂದೆ ಆಂಜಿಯೋಪ್ಲ್ಯಾಸ್ಟಿ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದರು ಎಂದು ಎಸ್ ಡಿಪಿಐ ಮುಖಂಡ ಆರೀಫ್ ತಿಳಿಸಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಹನಿಟ್ರ್ಯಾಪ್ ಭೀತಿಯಲ್ಲಿದ್ದ ಸಿದ್ದರಾಮಯ್ಯಗೆ ಬಿಗ್ ರಿಲೀಫ್: ಮಾಧ್ಯಮಗಳಿಗೆ ವಿಡಿಯೋ ಪ್ರಸಾರ ಮಾಡದಂತೆ ನಿರ್ಬಂಧ ವಿಧಿಸಿದ ಕೋರ್ಟ್

ಅವಧಿಗೂ ಮುನ್ನವೇ ಕೇಂದ್ರ ಸಚಿವ ಮತ್ತು ರಾಜ್ಯಸಭಾ ಸದಸ್ಯ ಸ್ಥಾನಕ್ಕೆ BJP ನಾಯಕ ಮುರುಗನ್ ರಾಜಿನಾಮೆ: PM ಮೋದಿಗೆ 5 ಪುಟಗಳ ಪತ್ರ!

'ಇಂಡಿಯಾ' ಮೈತ್ರಿಕೂಟದ ಒಗ್ಗಟ್ಟು ಮುರಿಯುತ್ತಿದೆಯೇ? ಜ್ಞಾನೇಶ್ ಕುಮಾರ್ ವಿರುದ್ಧ ಸುಪ್ರೀಂಗೆ ಅರ್ಜಿ, 4 ಪ್ರಮುಖ ಪಕ್ಷಗಳು "ದೂರ ದೂರ"

'ನೀನು ಭಯೋತ್ಪಾದಕ ಇಲ್ಲಿಂದ ಹೋಗು': ಅಮೆರಿಕದಲ್ಲಿ Nobel ಯೂನಸ್ ವಿರುದ್ಧ ಬಾಂಗ್ಲಾ ವಲಸಿಗರಿಂದ ಘೋಷಣೆ, Video

ಮುಖ್ಯ ಚುನಾವಣಾ ಆಯುಕ್ತರಿಗೆ ಪದ್ಮ ಪ್ರಶಸ್ತಿಗಳೇ ಲಂಚ: ಕೇಂದ್ರ ಸಚಿವ ಪಿಯೂಷ್ ಗೋಯಲ್ ಸ್ಫೋಟಕ ಹೇಳಿಕೆ