ರಾಜ್ಯ

ರಾಜ್ಯದಲ್ಲಿ ಮತ್ತೆ ಮೊಳಗಿದ ಲಿಂಗಾಯತ ಪ್ರತ್ಯೇಕ ಧರ್ಮದ ಧ್ವನಿ

Lingaraj Badiger

ಬೆಂಗಳೂರು: ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರದಲ್ಲಿ ಪ್ರತ್ಯೇಕ ಲಿಂಗಾಯಿತ ಧರ್ಮ ಸದ್ದಾಗಿ ಕಳೆದ ಸಾರ್ವತ್ರಿಕ ಚುನಾವಣೆಯಲ್ಲಿ ಮಹತ್ವದ ಪಾತ್ರ ವಹಿಸಿದ್ದ ಈ ಪ್ರತ್ಯೇಕ ಧರ್ಮದ ಕೂಗು ಇದೀಗ ಮತ್ತೆ ಮೊಳಗಿದೆ.

ಅತ್ತ ಪಂಚಮಸಾಲಿ ಸಮುದಾಯವನ್ನು ಹಿಂದುಳಿದ ವರ್ಗ 2ಎಗೆ ಸೇರಿಸುವಂತೆ ಸ್ವಾಮೀಜಿಗಳು ಒಂದು ಕಡೆ ಹೋರಾಟ ಮಾಡುತ್ತಿದ್ದರೆ, ಇತ್ತ ವೀರಶೈವ ಲಿಂಗಾಯತ ಎರಡೂ ಒಂದೇ ನಮ್ಮದು ಬಸವ ಧರ್ಮ ಎಂದು ಮಾಜಿ ಸಚಿವ ಎಂ.ಬಿ.ಪಾಟೀಲ್ ಅವರು ಮತ್ತೆ ಪ್ರತ್ಯೇಕ ಲಿಂಗಾಯತ ಧರ್ಮದ ಧ್ವನಿ ಮೊಳಗಿಸಿದ್ದಾರೆ.

ಕುಮಾರಕೃಪಾ ಬಳಿ ಸುದ್ದಿಗಾರರೊಂದಿಗೆ ಮಾತನಾಡಿದ ಎಂ.ಬಿ.ಪಾಟೀಲ್, ಪಂಚಮಸಾಲಿ ಮೀಸಲಾತಿಗೆ ಹೋರಾಟ ಮಾಡುತ್ತಿದ್ದಾರೆ. ಪಂಚಪೀಠದವರು ಎಲ್ಲರೂ ಸೇರಿ ಬಸವ ಧರ್ಮ ಆಗಬೇಕು. ಪ್ರತ್ಯೇಕ ಲಿಂಗಾಯತ ಧರ್ಮವಾದಲ್ಲಿ ಪ್ರತ್ಯೇಕ ಲಿಂಗಾಯ ಧರ್ಮಕ್ಕೆ ಮುಸ್ಲಿಂ, ಜೈನ ಮಾದರಿಯಲ್ಲಿ ಅಲ್ಪಸಂಖ್ಯಾತ ಸ್ಥಾನಮಾನ ಸಿಗಲಿದೆ. ಲಿಂಗಾಯತ ಧರ್ಮದಲ್ಲಿ ವೀರಶೈವರನ್ನೂ ಸಹ ಸೇರಿಸಿಕೊಂಡು ಮುಂದುವರೆಯುತ್ತೇವೆ ಎಂದರು.

ಪ್ರತ್ಯೇಕ ಧರ್ಮ ಆದರೆ ಪಂಚಮಸಾಲಿ ಎಲ್ಲರಿಗೂ ಮೀಸಲಾತಿ ಸಿಗುತ್ತದೆ. ಅವರು ಸೇರಿ ಪ್ರತ್ಯೇಕ ಲಿಂಗಾಯತ ಧರ್ಮದ ಹೋರಾಟ ಮಾಡುತ್ತೇವೆ. ನನ್ನ ನೇತೃತ್ವದಲ್ಲಿ ಪ್ರತ್ಯೇಕ ಲಿಂಗಾಯತ ಧರ್ಮದ ಹೋರಾಟ ನಡೆಯಲ್ಲ. ಎಲ್ಲರೂ ಸೇರಿ ಪ್ರತ್ಯೇಕ ಧರ್ಮದ ಹೋರಾಟ ಮಾಡುತ್ತೇವೆ ಎನ್ನುವ ಮೂಲಕ ಮತ್ತೊಮ್ಮೆ ಲಿಂಗಾಯತ ಪ್ರತ್ಯೇಕ ಧರ್ಮದ ಹೋರಾಟದ ಕೂಗು‌ ಏಳಲಿದೆ ಎಂಬ ವಿಚಾರವನ್ನು ಎಂ.ಬಿ.ಪಾಟೀಲ್ ತಿಳಿಸಿದ್ದಾರೆ.

SCROLL FOR NEXT