ಸಿಎಂ ಬೊಮ್ಮಾಯಿ 
ರಾಜ್ಯ

'ನೋ ವ್ಯಾಕ್ಸಿನೇಷನ್‌, ನೋ ರೇಷನ್': ಅಧಿಕಾರಿಗಳ ಆದೇಶ ತಪ್ಪು ಎಂದ ಸಿಎಂ ಬೊಮ್ಮಾಯಿ

ಕೋವಿಡ್ ಲಸಿಕೆ ಪಡೆಯದವರಿಗೆ ಪಡಿತರ, ಪಿಂಚಣಿ ಸಿಗುವುದಿಲ್ಲ ಎಂಬ ಆದೇಶ ಹೊರಡಿಸಿದ್ದ ಚಾಮರಾಜನಗರ ಜಿಲ್ಲಾಧಿಕಾರಿ ಆದೇಶವನ್ನು ಸರಿಯಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಬುಧವಾರ ಹೇಳಿದ್ದಾರೆ. 

ಬೆಂಗಳೂರು: ಕೋವಿಡ್ ಲಸಿಕೆ ಪಡೆಯದವರಿಗೆ ಪಡಿತರ, ಪಿಂಚಣಿ ಸಿಗುವುದಿಲ್ಲ ಎಂಬ ಆದೇಶ ಹೊರಡಿಸಿದ್ದ ಚಾಮರಾಜನಗರ ಜಿಲ್ಲಾಧಿಕಾರಿ ಆದೇಶವನ್ನು ಸರಿಯಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಬುಧವಾರ ಹೇಳಿದ್ದಾರೆ. 

ಹಾವೇರಿ ಜಿಲ್ಲೆಯ ಶಿಗ್ಗಾಂವಿ ತಾಲೂಕಿನ ಬಾಡ ಗ್ರಾಮದಲ್ಲಿ ಮಾತನಾಡಿದ ಬೊಮ್ಮಾಯಿ ಅವರು, ಕೊವೀಡ್ ಲಸಿಕೆ ಪಡೆಯದಿದ್ದರೆ ಪಡಿತರ ನೀಡುವುದಿಲ್ಲ ಅನ್ನೋದು ತಪ್ಪು, ಜನರ ಮನವೊಲಿಸಿ ಕೋವಿಡ್ ಲಸಿಕೆ ಹಾಕಿಸಿಕೊಳ್ಳುವಂತೆ ಮಾಡಬೇಕೆಂದು ಹೇಳಿದ್ದಾರೆ. 

ಚಾಮರಾಜನಗರ ಜಿಲ್ಲೆಯಲ್ಲಿ ಕೊರೊನಾ ಲಸಿಕೆ ವೇಗ ಹೆಚ್ಚಿಸಲು ಚಾಮರಾಜನಗರ ಜಿಲ್ಲಾಡಳಿತ ವಿಭಿನ್ನ ಅಭಿಯಾನ ಆರಂಭಿಸಿದ್ದು, ವ್ಯಾಕ್ಸಿನೇಷನ್ ಪ್ರಮಾಣಪತ್ರ ತಂದ್ರೆ ಮಾತ್ರ ಪಡಿತರ ವಿತರಣೆ ಮಾಡುವಂತೆ ನ್ಯಾಯಬೆಲೆ ಅಂಗಡಿಗಳಿಗೆ ಅಧಿಕಾರಿಗಳು ಸೂಚನೆ ನೀಡಿದ್ದರು ಎಂದು ಹೇಳಲಾಗುತ್ತಿದೆ. ಈ ಆದೇಶ ಹಲವು ಟೀಕೆಗಳಿಗೆ ಎಡೆಮಾಡಿಕೊಟ್ಟಿದೆ. 

ಆದೇಶ ಕುರಿತು ಪ್ರತಿಕ್ರಿಯೆ ನೀಡಿರುವ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರು, ಚಾಮರಾಜನಗರದಲ್ಲಿ ಬಿಜೆಪಿ ಸರ್ಕಾರ ಹೇಳುತ್ತೆ ಕೋವಿಡ್‌ ಲಸಿಕೆ ಪಡೆಯದಿದ್ದರೆ ಪಡಿತರ, ಪಿಂಚಣಿ ಎರಡೂ ಇಲ್ಲ ಅಂತ. ಆದರೆ, ಲಸಿಕೆಗಳು ಜನಸಂಖ್ಯೆಗೆ ಸಾಕಾಗುವಷ್ಟು ಇವೆಯಾ? ಲಸಿಕೆ ಪಡೆಯುವಂತೆ ಜನರ ಮನವೊಲಿಸಿದ್ದಾರಾ? ಮೂಲ ಸೌಕರ್ಯಗಳಾದ ಆಹಾರ ಮತ್ತು ಪಿಂಚಣಿ ನೀಡುವುದಿಲ್ಲ ಅಂತ ಹೆದರಿಸುವುದು ಅಕ್ರಮ, ಅನೈತಿಕ ಹಾಗೂ ಅಸಾಂವಿಧಾನಿಕ. ಬಿಜೆಪಿ ಸರ್ಕಾರ ಹಾಗೂ ಚಾಮರಾಜನಗರ ಜಿಲ್ಲಾಡಳಿತಕ್ಕೆ ನಾಚಿಕೆಯಾಗಬೇಕು ಎಂದು ವಾಗ್ದಾಳಿ ನಡೆಸಿದ್ದಾರೆ.

ಆಕ್ಸಿಜನ್‌ ಪೂರೈಸಲು ಅಸಮರ್ಥರಾಗಿ 36 ಅಮಾಯಕರ ಜೀವ ತೆಗೆದಿದ್ದಾರೆ. ಲಸಿಕೆ ಪಡೆಯದವರಿಗೆ ಶಿಕ್ಷಿಸಲು ಮುಂದಾಗಿರುವವರು ಮೊದಲು ಆಕ್ಸಿಜನ್‌, ಲಸಿಕೆ, ಪರೀಕ್ಷೆ ಹಾಗೂ ಮೃತರಿಗೆ ಸೂಕ್ತ ಪರಿಹಾರ ನೀಡದಿದ್ದಕ್ಕೆ ಕ್ಷಮೆ ಕೇಳಲಿ ಎಂದು ಆಗ್ರಹಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT