ಸಾಂದರ್ಭಿಕ ಚಿತ್ರ 
ರಾಜ್ಯ

ಬೆಂಗಳೂರು: ನಕಲಿ ಸಹಿ ಮಾಡಿದ ಖಾಸಗಿ ಆಸ್ಪತ್ರೆಯ ಅಧಿಕಾರಿ ವಿರುದ್ಧ ಕೇಸ್ ದಾಖಲು

ತಮ್ಮ ಸಹಿ ನಕಲಿ ಮಾಡಿದ್ದಾರೆ ಎಂದು ಆರೋಪಿಸಿ ಖಾಸಗಿ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕರ ವಿರುದ್ಧ ಆರ್‌ಟಿಐ ಕಾರ್ಯಕರ್ತರೊಬ್ಬರು ದೂರು ದಾಖಲಿಸಿದ್ದಾರೆ.

ಬೆಂಗಳೂರು: ತಮ್ಮ ಸಹಿ ನಕಲಿ ಮಾಡಿದ್ದಾರೆ ಎಂದು ಆರೋಪಿಸಿ ಖಾಸಗಿ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕರ ವಿರುದ್ಧ ಆರ್‌ಟಿಐ ಕಾರ್ಯಕರ್ತರೊಬ್ಬರು ದೂರು ದಾಖಲಿಸಿದ್ದಾರೆ.

ಆರ್‌ಟಿಐ ಕಾರ್ಯಕರ್ತ ಟಿ ನರಸಿಂಹ ಮೂರ್ತಿ ಅವರು ಶೇಷಾದ್ರಿಪುರಂ ಅಪೋಲೋ ಆಸ್ಪತ್ರೆಯ ವಿರುದ್ಧ ಹೈಗ್ರೌಂಡ್ಸ್‌ ಪೊಲೀಸರಿಗೆ ಮತ್ತು ಕರ್ನಾಟಕ ವೈದ್ಯಕೀಯ ಮಂಡಳಿಗೆ ದೂರು ನೀಡಿದ್ದು, ಕೋವಿಡ್ -19 ಚಿಕಿತ್ಸೆಗಾಗಿ ಆಸ್ಪತ್ರೆ ಮೋಸ ಮಾಡಿದೆ ಎಂದು ದೂರಿದ್ದಾರೆ.

ಆಗಸ್ಟ್ 14 ರಂದು ವಿಚಾರಣೆಗೆ ಕರೆದಾಗ ನನ್ನ ನಕಲಿ ಸಹಿ ಮಾಡಿದ ಒಂದು ಡಾಕ್ಯುಮೆಂಟ್ ಸಿಕ್ಕಿತು. ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕ ಡಾ.ಉಮೇಶ್ ಎನ್ ಅವರು ನಕಲಿ ದಾಖಲೆ ಸೃಷ್ಟಿಸಿ 10,001 ರೂಪಾಯಿ ಮರುಪಾವತಿ ಪಡೆದಿದ್ದಾರೆ ಎಂದು ಮೂರ್ತಿ ಆರೋಪಿಸಿದ್ದಾರೆ. 

ಡಾಕ್ಯುಮೆಂಟ್ ಅನ್ನು ಖಾಸಗಿ ವಿಧಿವಿಜ್ಞಾನ ಪರೀಕ್ಷೆಗೆ ಒಳಪಡಿಸಲಾಗಿದ್ದು, ಅವರು ವಂಚಿಸುವ ಉದ್ದೇಶದಿಂದ ಸಹಿ ನಕಲಿ ಮಾಡಿರುವುದು  ದೃಢಪಟ್ಟಿದೆ. ಹಾಗಾಗಿ ಮೂರ್ತಿ ಅವರು ಡಾ. ಉಮೇಶ್ ವಿರುದ್ಧ ದೂರು ದಾಖಲಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಅಮೆರಿಕಾ–ಇರಾನ್ ಶಾಂತಿ ಮಾತುಕತೆ ವಿಫಲ: ಷೇರು ಮಾರುಕಟ್ಟೆ ಮೇಲೆ ಪರಿಣಾಮ; ಸೆನ್ಸೆಕ್ಸ್ 1600 ಅಂಕ ಕುಸಿತ, ತೈಲ ಬೆಲೆ ಏರಿಕೆ..!

West-Asia war: ಅಮೆರಿಕಾ-ಇರಾನ್ ಸಂಘರ್ಷ ಮತ್ತಷ್ಟು ತೀವ್ರ; ಹಾರ್ಮುಜ್ ಜಲಸಂಧಿ ಮೇಲೆ ನೌಕಾ ದಿಗ್ಬಂಧನ, ಜಾಗತಿಕ ಮಾರುಕಟ್ಟೆಗಳಲ್ಲಿ ಹೆಚ್ಚಿದ ಆತಂಕ

ಆಗ VOLVO, ಈಗ BMW; ಹಾರುಬೂದಿ ಸಾಗಿಸುತ್ತಿದ್ದ ಲಾರಿ ಉರುಳಿ ಐಶಾರಾಮಿ ಕಾರು ಅಪ್ಪಚ್ಚಿ, Video

ನೀವು ಪೋಪ್ ಆಗಲು ನಾನು ಕಾರಣ, ರಾಜಕಾರಣ ಬಿಟ್ಟು ಧರ್ಮಗುರುವಿನ ಕೆಲಸ ಮಾಡಿ: ಪೋಪ್ ಲಿಯೋ XIV ವಿರುದ್ಧ ಟ್ರಂಪ್ ವಾಗ್ದಾಳಿ

ಕಾಂಗ್ರೆಸ್‌ನಲ್ಲಿ ಕುರ್ಚಿ ಕಸರತ್ತು: ದೆಹಲಿಗೆ 'ಕೈ' ಶಾಸಕರ ಪ್ರಯಾಣ, ಸಚಿವ ಸ್ಥಾನಕ್ಕಾಗಿ ಲಾಬಿ..!

SCROLL FOR NEXT