ಅಪಘಾತ ಸಂಭವಿಸಿದ ಸ್ಥಳ 
ರಾಜ್ಯ

ಕೋರಮಂಗಲ ಆಡಿ ಕಾರು ದುರಂತ: ಭೀಕರ ಅಪಘಾತಕ್ಕೆ ಕಾರಣ ಶೋಧಿಸುತ್ತಿರುವ ಆರ್ ಟಿಒ ಅಧಿಕಾರಿಗಳು

ಕೋರಮಂಗಲದಲ್ಲಿ ಸಂಭವಿಸಿದ ಐಷಾರಾಮಿ ಕಾರು ಅಪಘಾತ ಪ್ರಕರಣವನ್ನು ತನಿಖೆ ನಡೆಸುತ್ತಿರುವ  ಆಡುಗೋಡಿ ಸಂಚಾರಿ ಪೊಲೀಸರು, ಮುಂದಿನ ಕ್ರಮಗಳಿಗಾಗಿ ವೈದ್ಯಕೀಯ ಪರೀಕ್ಷಾ ವರದಿಗಳಿಗಾಗಿ ಕಾದು ಕುಳಿತಿದ್ದಾರೆಂದು ತಿಳಿದುಬಂದಿದೆ. 

ಬೆಂಗಳೂರು: ಕೋರಮಂಗಲದಲ್ಲಿ ಸಂಭವಿಸಿದ ಐಷಾರಾಮಿ ಕಾರು ಅಪಘಾತ ಪ್ರಕರಣವನ್ನು ತನಿಖೆ ನಡೆಸುತ್ತಿರುವ  ಆಡುಗೋಡಿ ಸಂಚಾರಿ ಪೊಲೀಸರು, ಮುಂದಿನ ಕ್ರಮಗಳಿಗಾಗಿ ವೈದ್ಯಕೀಯ ಪರೀಕ್ಷಾ ವರದಿಗಳಿಗಾಗಿ ಕಾದು ಕುಳಿತಿದ್ದಾರೆಂದು ತಿಳಿದುಬಂದಿದೆ. 

ಈ ನಡುವೆ ಘಟನಾ ಸ್ಥಳಕ್ಕೆ ಭೇಟಿ ನೀಡಿರುವ ಆರ್'ಟಿಒ ಅಧಿಕಾರಿಗಳು ಸ್ಥಳ ಪರಿಶೀಲನೆ ನಡೆಸಿದ್ದು, ಈ ವೇಳೆ ಅಪಘಾತಕ್ಕೀಡಾದ ಆಡಿ ಕ್ಯೂ3 ಎಸ್'ಯುವಿ ಕಾರನ್ನು ಪರಿಶೀಲನೆ ನಡೆಸಿದ್ದಾರೆಂದು ವರದಿಗಳು ತಿಳಿಸಿವೆ.

ತನಿಖೆ ಕೈಗೊಂಡಿರುವ ಪೊಲೀಸರು ಅಪಘಾತ ಸಂಭವಿಸಿದ ಸ್ಥಳದಲ್ಲಿದ್ದ ಸಿಸಿಟಿವಿ ಕ್ಯಾಮೆರಾಗಳನ್ನು ಪರಿಶೀಲನೆ ನಡೆಸಿದ್ದು, ದೃಶ್ಯಾವಳಿಗಳಲ್ಲಿ ಕಾರು ವೇಗವಾಗಿ ಸಾಗಿರುವುದು ಕಂಡು ಬಂದಿದೆ. ಚಾಲಕ ಅಜಾಗರೂಕತೆಯಿಂದ ಕಾರನ್ನು ಚಲಾಯಿಸಿದ್ದು, ಅಪಘಾತಕ್ಕೂ ಕೆಲವೇ ನಿಮಿಷಗಳ ಮುನ್ನ ಸೋನಿ ವರ್ಲ್ಡ್ ಜಂಕ್ಷನ್ ಬಳಿ ಫುಡ್ ಡೆಲಿವರಿ ಬಾಯ್ ಒಬ್ಬ ಕೂದಲೆಳೆ ಅಂತರದಿಂದ ಪ್ರಾಣಾಪಾಯದಿಂದ ಪಾರಾಗಿರುವುದು ಕಂಡು ಬಂದಿದೆ. 

ಕಾರಿನಲ್ಲಿದ್ದವರು ಅಪಘಾತಕ್ಕೂ ಮುನ್ನ ಎಲ್ಲೆಲ್ಲಿ ಭೇಟಿ ನೀಡಿದ್ದರು ಎಂಬುದರ ಕುರಿತು ಮಾಹಿತಿ ಕಲೆ ಹಾಕುತ್ತಿದ್ದೇವೆ. ಅಪಘಾತಕ್ಕೂ ಮುನ್ನ ಕೋರಮಂಗಲದಲ್ಲಿ 1 ಗಂಟೆಗಳ ಕಾಲ ಕಾರು ಚಲಾಯಿಸಿರುವುದು ಕಂಡುಬಂದಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ. 

ಅದಷ್ಟೇ ಅಲ್ಲದೆ, ಅಪಘಾತಕ್ಕೆ ಕಾರಣವೇನು, ಕಾರಿನ ಬ್ರೇಕ್ ಫೇಲ್ ಆಗಿತ್ತೇ? ಅಥವಾ ಬೇಜವಾಬ್ದಾರಿತನದಿಂದ ಕಾರು ಚಲಾಯಿಸಿರುವುದು ಕಾರಣವಾಯಿತೇ ಎಂಬುದರ ಕುರಿತಂತೆಯೂ ತನಿಖೆ ನಡೆಸಲಾಗುತ್ತಿದೆ. ಕಾರು ತಯಾರಿಕಾ ಕಂಪನಿಯಿಂದಲೂ ಕೆಲ ಮಾಹಿತಿಗಳನ್ನು ಕೇಳಲಾಗಿದೆ ಎಂದು ತಿಳಿದುಬಂದಿದೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಸಿದ್ದರಾಮಯ್ಯ ಮೇಲೆ ತೂಗುಗತ್ತಿ: ಅಧಿಕಾರದಲ್ಲಿ ಉಳಿಯಲು ಸಂಪುಟ ಪುನಾರಚನೆ ಕಸರತ್ತು; ಬಿಹಾರ-ಕೇರಳ ಚುನಾವಣೆಯತ್ತ ಡಿಕೆಶಿ ಚಿತ್ತ!

ವೀರೇಂದ್ರ ಪಪ್ಪಿ ಕರ್ಮಕಾಂಡ ನೋಡುತ್ತಿದ್ದರೆ CM- DCM ಇನ್ಯಾವ ಪರಿ ಲೂಟಿ ಮಾಡಿ ಹೈಕಮಾಂಡ್ ಗೆ ಕಪ್ಪ ನೀಡುತ್ತಿರಬೇಡಾ?

ಈ ಬಾರಿ ನಾನು ಸಚಿವನಾಗುವ ಭರವಸೆ ಇದೆ: ಸಂಪುಟ ವಿಸ್ತರಣೆಯೇ ನವೆಂಬರ್ ಕ್ರಾಂತಿಯಿರಬಹುದು; ಸಲೀಂ ಅಹ್ಮದ್

BDA ಯೋಜನಾ ಪ್ರಾಧಿಕಾರದ ಜವಾಬ್ದಾರಿ ಹಸ್ತಾಂತರ: GBA ವಿರೋಧಿಸುವವರು ಪಾಲಿಕೆ ಚುನಾವಣೆ ಬಹಿಷ್ಕರಿಸಲಿ; ಡಿಕೆಶಿ ಸವಾಲು

ಮೈಸೂರು ಪೊಲೀಸರಿಗೆ CM ಪುತ್ರನ ಕಾಟ: ಯಾವುದೇ ವರ್ಗಾವಣೆಯಾಗಬೇಕಾದರೂ ಯತೀಂದ್ರಗೆ ಟ್ಯಾಕ್ಸ್ ಕಟ್ಟಬೇಕು; ಪ್ರತಾಪ್ ಸಿಂಹ

SCROLL FOR NEXT