ಪ್ರತಾಪ್ ಸಿಂಹ 
ರಾಜ್ಯ

ರಾಜೀವ್ ಗಾಂಧಿ ನ್ಯಾಷನಲ್ ಪಾರ್ಕ್'ಗೆ ಫೀಲ್ಡ್ ಮಾರ್ಷಲ್ ಕಾರ್ಯಪ್ಪ ಹೆಸರಿಡುವಂತೆ ಸಂಸದ ಪ್ರತಾಪ್ ಸಿಂಹ ಆಗ್ರಹ

ರಾಜೀವ್ ಗಾಂಧಿ ನ್ಯಾಷನಲ್ ಪಾರ್ಕ್ (ನಾಗರಹೊಳೆ ರಾಷ್ಟ್ರೀಯ ಉದ್ಯಾನವನ)ಗೆ ಫೀಲ್ಡ್ ಮಾರ್ಷಲ್ ಕಾರ್ಯಪ್ಪ ಎಂದು ಮರುನಾಮಕರಣ ಮಾಡುವಂತೆ ಸಂಸದ ಪ್ರತಾಪ್ ಸಿಂಹ ಅವರು ಆಗ್ರಹಿಸಿದ್ದಾರೆ. 

ಬೆಂಗಳೂರು: ರಾಜೀವ್ ಗಾಂಧಿ ನ್ಯಾಷನಲ್ ಪಾರ್ಕ್ (ನಾಗರಹೊಳೆ ರಾಷ್ಟ್ರೀಯ ಉದ್ಯಾನವನ)ಗೆ ಫೀಲ್ಡ್ ಮಾರ್ಷಲ್ ಕಾರ್ಯಪ್ಪ ಎಂದು ಮರುನಾಮಕರಣ ಮಾಡುವಂತೆ ಸಂಸದ ಪ್ರತಾಪ್ ಸಿಂಹ ಅವರು ಆಗ್ರಹಿಸಿದ್ದಾರೆ. 

ಈ ಕುರಿತು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರಿಗೆ ಪತ್ರ ಬರೆದಿರುವ ಪ್ರತಾಪ್ ಸಿಂಹ ಅವರು, ಪತ್ರವನ್ನು ಸಾಮಾಜಿಕ ಜಾಲತಾಣ ಟ್ವಿಟರ್ ನಲ್ಲೂ ಟ್ವೀಟ್ ಮಾಡಿದ್ದಾರೆ. 

ಎರಡು ದಿನಗಳ ಹಿಂದಷ್ಟೇ ಅಸ್ಸಾಂ ನ ಮುಖ್ಯಮಂತ್ರಿ ಹಿಮಂತ್ ಬಿಸ್ವಾ ಅವರ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಅಸ್ಸಾಂನಲ್ಲಿರುವ ರಾಜೀವ್ ಗಾಂಧಿ ರಾಷ್ಟ್ರೀಯ ಉದ್ಯಾನವನವನ್ನು ಒರಾಂಗ್ ರಾಷ್ಟ್ರೀಯ ಉದ್ಯಾನವನ ಮರು ನಾಮಕರಣ ಮಾಡಲು ಒಪ್ಪಿಗೆ ನೀಡಲಾಗಿತ್ತು.

ಇದರ ಬೆನ್ನಲ್ಲೇ ಕರ್ನಾಟಕದಲ್ಲೂ ನಾಗರಹೊಳೆ ಅಭಯಾರಣ್ಯದ ಹೆಸರು ಬದಲಿಸುವಂತೆ ಕೂಗು ಕೇಳಿ ಬರುತ್ತಿವೆ. 

ಈ ಹಿಂದೆ ಮಡಿಕೇರಿ ಶಾಸಕ ಅಪ್ಪಚ್ಚು ರಂಜನ್ ಅವರೂ ಕೂಡ ನಾಗರಹೊಳೆ ನ್ಯಾಷನಲ್ ಪಾರ್ಕ್ ಗೆ ರಾಜೀವ್ ಗಾಂಧಿ ಹೆಸರು ಬದಲಿಸಿ ಕಾರ್ಯಪ್ಪ ಅವರ ಹೆಸರನ್ನು ಮರು ನಾಮಕರಣ ಮಾಡಬೇಕು ಎಂದು ರಾಜ್ಯ ಸರ್ಕಾರಕ್ಕೆ ಮನವಿ ಮಾಡಿದ್ದರು

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?

ನಿರ್ಬಂಧದ ಹೊರತಾಗಿಯೂ ರಷ್ಯಾದಲ್ಲಿ ಇಳಿದ ಅಮೆರಿಕದ C-17 ಮಿಲಿಟರಿ ವಿಮಾನ: ಮಿಷನ್ ಮಾತ್ರ ನಿಗೂಢ!

ನೀಟ್ ಪ್ರತಿಭಟನಾಕಾರರ ಮೇಲೆ ಪೊಲೀಸ್ ದೌರ್ಜನ್ಯ ಆರೋಪ: ಚರ್ಚೆಗೆ ವಿಪಕ್ಷಗಳ ಪಟ್ಟು, ಸಂಸದೀಯ ಸಮಿತಿ ಸಭೆಯಲ್ಲಿ ತೀವ್ರ ವಾಗ್ವಾದ!

2nd Test: ‘ಶ್ರೀಲಂಕಾ ಆಟಗಾರರ ವರ್ತನೆ ವೃತ್ತಿಪರವಾಗಿರಲಿಲ್ಲ’: ಬ್ಯಾಡ್ ಲೈಟ್ ವಿವಾದಕ್ಕೆ Sanjay Manjrekar ಕಿಡಿ

‘ಪ್ರಸಿದ್ಧ್ ಕೃಷ್ಣ ವಿಶ್ವದರ್ಜೆಯ ಬೌಲರ್ ಆಗಿ ಮಾರ್ಪಟ್ಟಿದ್ದಾರೆ’: ಕನ್ನಡಿಗನ ಶ್ಲಾಘಿಸಿದ ದಕ್ಷಿಣ ಆಫ್ರಿಕಾ ಮಾಜಿ ವೇಗಿ Morne Morkel