ರಾಜ್ಯ

ಜಿಲ್ಲಾ ನ್ಯಾಯಾಲಯ ನೇಮಕಾತಿ 2021: ಆಸಕ್ತರು ಕೂಡಲೇ ಅರ್ಜಿ ಸಲ್ಲಿಸಿ

Srinivasamurthy VN

ಉಡುಪಿ: ಉಡುಪಿ ಜಿಲ್ಲಾ ನ್ಯಾಯಾಲಯದಲ್ಲಿ 8 ಹುದ್ದೆಗಳು ಖಾಲಿ ಇದ್ದು, ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. 

ಹುದ್ದೆ ಹೆಸರು: ಶೀಘ್ರಲಿಪಿಗಾರರು 

ಒಟ್ಟು ಹುದ್ದೆಗಳು: 8

ಉದ್ಯೋಗ ಸ್ಥಳ ಉಡುಪಿ

ವಿದ್ಯಾರ್ಹತೆ: 
ಕರ್ನಾಟಕ ಪದವಿ ಪೂರ್ವ ಶಿಕ್ಷಣ ಇಲಾಖೆಯು ನಡೆಸುವ ದ್ವಿತೀಯ ವರ್ಷದ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು.
ಜೊತೆಗೆ ಹಿರಿಯ ದರ್ಜೆಯ ಕನ್ನಡ ಮತ್ತು ಆಂಗ್ಲ ಭಾಷೆಗಳ ಶೀಘ್ರಲಿಪಿ ಹಾಗೂ ಬೆರಳಚ್ಚು ಪರೀಕ್ಷೆಗಳಲ್ಲಿ ತೇರ್ಗಡೆ ಹೊಂದಿರಬೇಕು.

ವಯೋಮಿತಿ: ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕಕ್ಕೆ ಅಭ್ಯರ್ಥಿಗಳು ಕನಿಷ್ಠ 18 ವರ್ಷ ಪೂರೈಸಿರಬೇಕು.
ಎಸ್ಸಿ, ಎಸ್ಟಿ, ಪ್ರವರ್ಗ 1 ಅಭ್ಯರ್ಥಿಗಳಿಗೆ ಗರಿಷ್ಠ 40 ವರ್ಷ
ಪ್ರವರ್ಗ 2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳಿಗೆ ಗರಿಷ್ಠ 38 ವರ್ಷ
ಸಾಮಾನ್ಯ ಅಭ್ಯರ್ಥಿಗಳಿಗೆ ಗರಿಷ್ಠ 35 ವರ್ಷ

ವೇತನ: ಮಾಸಿಕ ರೂ. 27,650 ರಿಂದ ರೂ. 52,650 ರೂ

ಆಯ್ಕೆ ವಿಧಾನ
ಅಭ್ಯರ್ಥಿಯು ನಿಗದಿಪಡಿಸಿದ ಅರ್ಹತಾ ಪರೀಕ್ಷೆಗಳಲ್ಲಿ ಗಳಿಸಿರುವ ಒಟ್ಟು ಶೇಕಡಾವಾರು ಅಂಕಗಳು ಮತ್ತು ಪ್ರತಿ ನಿಮಿಷಕ್ಕೆ 120 ಪದಗಳ ವೇಗದಲ್ಲಿ 5 ನಿಮಿಷಗಳ ಉಕ್ತಲೇಖನವನ್ನು ಕನ್ನಡ ಮತ್ತು ಇಂಗ್ಲಿಷ್ ಭಾಷೆಯಲ್ಲಿ ತೆಗೆದುಕೊಂಡು, ಉಕ್ತಲೇಖನವನ್ನು 45 ನಿಮಿಷಗಳಲ್ಲಿ ಅನುಲಿಪಿ ಮಾಡುವ ಅರ್ಹತಾ ಪರೀಕ್ಷೆಯಲ್ಲಿ ಗಳಿಸುವ ಅಂಕಗಳು ಮತ್ತು ಸಂದರ್ಶನದಲ್ಲಿ ಗಳಿಸುವ ಅಂಕಗಳ ಆಧಾರದ ಮೇಲೆ ಆಯ್ಕೆ ಮಾಡಲಾಗುವುದು.

ಅರ್ಜಿ ಸಲ್ಲಿಕೆಯ ವಿಧಾನ:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಆನ್‌ಲೈನ್‌ ಮೂಲಕವೇ ಅರ್ಜಿಯನ್ನು ಸಲ್ಲಿಸಬೇಕು.
ಅಭ್ಯರ್ಥಿಗಳು ಉಡುಪಿ ಜಿಲ್ಲಾ ನ್ಯಾಯಾಲಯದ ಅಧಿಕೃತ ವೆಬ್‌ಸೈಟ್ ವಿಳಾಸಕ್ಕೆ ಭೇಟಿ ನೀಡಿ, ಆನ್‌ಲೈನ್‌ ಅರ್ಜಿಯಲ್ಲಿ ಹುದ್ದೆಗೆ ಅಗತ್ಯವಿರುವ ಎಲ್ಲಾ ಮಾಹಿತಿಯನ್ನು ಭರ್ತಿ ಮಾಡಿ.
ನಂತರ ನಿಗದಿತ ಅರ್ಜಿ ಶುಲ್ಕ ಪಾವತಿಸಿ ಅರ್ಜಿಯನ್ನು ಸಲ್ಲಿಸಬೇಕು.

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 
ಅರ್ಜಿ ಸಲ್ಲಿಸಲು, ಆನ್‌ಲೈನ್‌ ಶುಲ್ಕ ಪಾವತಿಸಲು ಕೊನೆಯ ದಿನಾಂಕ: ಸೆಪ್ಟೆಂಬರ್ 30, 2021
ಚಲನ್ ಮೂಲಕ ಶುಲ್ಕ ಪಾವತಿಸಲು ಕೊನೆಯ ದಿನಾಂಕ: ಅಕ್ಟೋಬರ್ 04, 2021

ಶುಲ್ಕ ಪಾವತಿಸುವ ವಿಧಾನ:
ಅಭ್ಯರ್ಥಿಗಳು ಆನ್‌ಲೈನ್‌ನಲ್ಲಿ ಡೆಬಿಟ್ ಕಾರ್ಡ್, ಕ್ರೆಡಿಟ್ ಕಾರ್ಡ್, ನೆಟ್ ಬ್ಯಾಂಕಿಂಗ್ ಮೂಲಕ ಶುಲ್ಕ ಪಾವತಿಸಬಹುದು ಅಥವಾ ಜಿಲ್ಲಾ ನ್ಯಾಯಾಲಯದ ವೆಬ್‌ಸೈಟ್ ನಿಂದ ಚಲನ್ ಪ್ರಿಂಟ್ ತೆಗೆದು ಎಸ್.ಬಿ.ಐ ಬ್ಯಾಂಕಿನ ಯಾವುದೇ ಶಾಖೆಗಳಲ್ಲಿ ಶುಲ್ಕ ಪಾವತಿಸಬಹುದು.

ಅರ್ಜಿ ಶುಲ್ಕದ ವಿವರ:
ಪ್ರವರ್ಗ 2ಎ,2ಬಿ,3ಎ,3ಬಿ, ಪ್ರವರ್ಗ 1, ಸಾಮಾನ್ಯ ಅಭ್ಯರ್ಥಿಗಳು ರೂ. 200
ಎಸ್ಸಿ, ಎಸ್ಟಿ, ಅಂಗವಿಕಲ ಅಭ್ಯರ್ಥಿಗಳು ರೂ. 100

ಅರ್ಜಿ ಸಲ್ಲಿಕೆಗೆ ಇಲ್ಲಿ ಕ್ಲಿಕ್ ಮಾಡಿ
https://recruitmenthck.kar.nic.in/district/udu/stg/home.php
 

SCROLL FOR NEXT