ಜಂಬೂ ಸವಾರಿ(ಸಂಗ್ರಹ ಚಿತ್ರ) 
ರಾಜ್ಯ

ಮೈಸೂರು: ವಿಶ್ವವಿಖ್ಯಾತ ಜಂಬೂ ಸವಾರಿ ಅರಮನೆ ಆವರಣಕ್ಕೆ ಸೀಮಿತ

ವಿಶ್ವವಿಖ್ಯಾತ ಮೈಸೂರು ದಸರಾ ಆಚರಣೆ ಸಂಬಂಧ ಇದೇ 8 ರಂದು ದಸರಾ ಕಾರ್ಯಕಾರಿ ಸಮಿತಿ ಸಭೆ ಮೈಸೂರಿನಲ್ಲೇ ನಡೆಯಲಿದೆ ಎಂದು ಸಹಕಾರ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ಅವರು...

ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ ಆಚರಣೆ ಸಂಬಂಧ ಇದೇ 8 ರಂದು ದಸರಾ ಕಾರ್ಯಕಾರಿ ಸಮಿತಿ ಸಭೆ ಮೈಸೂರಿನಲ್ಲೇ ನಡೆಯಲಿದೆ ಎಂದು ಸಹಕಾರ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ಅವರು ಭಾನುವಾರ ಹೇಳಿದ್ದಾರೆ.

ಮೈಸೂರಿನಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ದಸರಾ ಉತ್ಸವಕ್ಕಾಗಿ ರಾಜ್ಯ ಸರ್ಕಾರ ೬ ಕೋಟಿ ರೂ ಮಂಜೂರು ಮಾಡಿದೆ. ಕೋವಿಡ್ ಹಿನ್ನೆಲೆಯಲ್ಲಿ ಪ್ರಧಾನ ಸಮಾರಂಭದಲ್ಲಿ ಎಷ್ಟು ಜನರಿಗೆ ಪ್ರವೇಶ ನೀಡಬೇಕು ಎಂಬುದನ್ನು ಮುಂದಿನ ದಿನಗಳಲ್ಲಿ ಪ್ರಕಟಿಸಲಾಗುವುದು.

ಈ ಬಾರಿಯೂ ಜಂಬೂ ಸವಾರಿ ಅರಮನೆ ಆವರಣಕ್ಕೆ ಸೀಮಿತವಾಗಿರುತ್ತದೆ. ದಸರಾ ಉದ್ಘಾಟಕರ ವಿಚಾರಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರೇ ಅಂತಿಮ ನಿರ್ಧಾರ ತೆಗೆದುಕೊಳ್ಳುತ್ತಾರೆ ಎಂದು ಸಚಿವ ಸೋಮವಶೇಖರ್ ಅವರು ತಿಳಿಸಿದ್ದಾರೆ.

ಕೊರೋನಾ ವೈರಸ್ ಹಿನ್ನೆಲೆಯಲ್ಲಿ ಈ ಬಾರಿಯೂ ಸರಳ ಮತ್ತು ಸಾಂಪ್ರದಾಯಿಕವಾಗಿ ಮೈಸೂರು ದಸರಾ ಆಚರಿಸಲು ರಾಜ್ಯ ಸರ್ಕಾರ ನಿರ್ಧಾರ ಮಾಡಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಸಿಇಸಿ ವಿರುದ್ಧದ ವಿಪಕ್ಷಗಳ ಪ್ರತಿಭಟನೆ: ವಶಕ್ಕೆ ಪಡೆದ ಬೆನ್ನಲ್ಲೇ ರಾಹುಲ್, ಪ್ರಿಯಾಂಕಾ ಗಾಂಧಿ ಬಿಡುಗಡೆ

ಅಧಿಕಾರಿಯಂತೆ ನಟಿಸಿ ಆಪ್ ನಾಯಕನಿಗೆ ಧೋಕಾ; ಮದುವೆಯಾಗಿ ಆಭರಣಗಳೊಂದಿಗೆ ಮಹಿಳೆ ಪರಾರಿ!

ಆಪರೇಷನ್ ಸಿಂಧೂರ್, ರಕ್ಷಕ್‌ನಲ್ಲಿ ಪ್ರಮುಖ ಪಾತ್ರವಹಿಸಿದ್ದ ಅಶುತೋಷ್ ದೀಕ್ಷಿತ್ ವಾಯುಪಡೆಯ ನೂತನ ಮುಖ್ಯಸ್ಥ!

ಮಚ್ಛಾರ್ ಆರೋಗ್ಯಯಲ್ಲಿ 'ಸ್ಥಿರ ಸುಧಾರಣೆ': ಭಾರತೀಯ ರಾಯಭಾರ ಕಚೇರಿ

KPSC ನೇಮಕಾತಿ ಹಗರಣ: EDಯಿಂದ ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್‌, ಸದಸ್ಯೆ ಗೀತಾ ಬಂಧನ!