ಸಂಗ್ರಹ ಚಿತ್ರ 
ರಾಜ್ಯ

ಕೆಎಸ್‌ಪಿಸಿಬಿ ಅಧ್ಯಕ್ಷರ ನೇಮಕಕ್ಕೆ ಹೈಕೋರ್ಟ್ ಅನುಮತಿ

ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣಾ ಮಂಡಳಿ (ಕೆಎಸ್‌ಪಿಸಿಬಿ) ಅಧ್ಯಕ್ಷರ ನೇಮಕ ಮಾಡಲು  ರಾಜ್ಯ ಸರ್ಕಾರಕ್ಕೆ ಹೈಕೋರ್ಟ್‌ ಸೋಮವಾರ ಅನುಮತಿ ನೀಡಿದೆ.

ಬೆಂಗಳೂರು: ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣಾ ಮಂಡಳಿ (ಕೆಎಸ್‌ಪಿಸಿಬಿ) ಅಧ್ಯಕ್ಷರ ನೇಮಕ ಮಾಡಲು  ರಾಜ್ಯ ಸರ್ಕಾರಕ್ಕೆ ಹೈಕೋರ್ಟ್‌ ಸೋಮವಾರ ಅನುಮತಿ ನೀಡಿದೆ. 

ಅಧ್ಯಕ್ಷರ ನೇಮಕ ಪ್ರಕ್ರಿಯೆಯಲ್ಲಿ ಅವರ ವಿದ್ಯಾರ್ಹತೆ ಮತ್ತು ಅನುಭವದ ಅರ್ಹತೆಗೆ ಸಂಬಂಧಿಸಿದ ಮಾರ್ಗಸೂಚಿಗಳನ್ನು ಪರಿಗಣಿಸದೆ ನೇಮಕ ಪ್ರಕ್ರಿಯೆ ನಡೆಸಲಾಗಿದೆ ಎಂದು ಸಲ್ಲಿಕೆಯಾಗಿರುವ ಹಲವು ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳನ್ನು ಪೀಠ ವಿಚಾರಣೆ ನಡೆಸುತ್ತಿದೆ.

ವಿಚಾರಣೆ ವೇಳೆ ಅಧ್ಯಕ್ಷರ ಸ್ಥಾನಕ್ಕೆ ನೇಮಕ ಆಗಿರುವ ವ್ಯಕ್ತಿಯ ಹೆಸರನ್ನು ಸರ್ಕಾರ ಮುಚ್ಚಿದ ಲಕೋಟೆಯಲ್ಲಿ ಸಲ್ಲಿಸಿತು. 2020ರ ಜುಲೈನಲ್ಲಿ ಅರ್ಜಿ ಆಹ್ವಾನಿಸಲಾಗಿದ್ದು, ಸಾರ್ವಜನಿಕ ಪ್ರಕಟಣೆ ಹೊರಡಿಸುವ ಮೂಲಕ ಆಯ್ಕೆ ಪ್ರಕ್ರಿಯೆ ನಡೆಸಲಾಗಿದೆ ಎಂದು ವಿವರಿಸಿತು. 

ಈ ವೇಳೆ ಸರ್ಕಾರದ ಆಯ್ಕೆ ಪರಿಶೀಲಿಸಿದ ಪೀಠ, ನೇಮಕಾತಿ ಪ್ರಕ್ರಿಯೆ ಮುಂದುವರಿಸಬಹುದು ಎಂದು ತಿಳಿಸಿತು.

ಅಧ್ಯಕ್ಷರಾಗುವವರಿಗೆ ಪರಿಸರಕ್ಕೆ ಸಂಬಂಧಿಸಿದ ಯಾವುದಾದರೂ ಸಂಸ್ಥೆಯನ್ನು ನಿರ್ವಹಿಸಿದ ಅನುಭವ ಇರಬೇಕಾಗುತ್ತದೆ. ಎಲ್ಲಾ ಅರ್ಹತೆ ಇರುವಂತೆ ನೋಡಿಕೊಂಡು ನೇಮಕ ಪ್ರಕ್ರಿಯೆ ಹೊಸದಾಗಿ ಆರಂಭಿಸುವಂತೆ 2021ರ ಫೆಬ್ರುವರಿಯಲ್ಲಿ ಪೀಠ ತಿಳಿಸಿತ್ತು. ಆದರೂ, 2020ರ ಜುಲೈನ್‌ನಲ್ಲಿ ಹೊರಡಿಸಿರುವ ಪ್ರಕಟಣೆಯಂತೆ ಈಗಾಗಲೇ ಹುದ್ದೆಗೆ ಆಯ್ಕೆ ಮಾಡಿರುವ ವ್ಯಕ್ತಿ ಈ ಎಲ್ಲಾ ಅರ್ಹತೆಗಳನ್ನು ಹೊಂದಿದ್ದಾರೆ ಎಂದು ಸರ್ಕಾರ ಸಮರ್ಥಿಸಿಕೊಂಡಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಹೈಕಮಾಂಡ್ ಅದೇಶ ಪಾಲನೆ: ಗುರುವಾರ ಬೆಳಗ್ಗೆ 10.30ಕ್ಕೆ ರಾಜ್ಯಪಾಲರ ಭೇಟಿಗೆ ಸಮಯ ಕೇಳಿದ ಸಿಎಂ ಸಿದ್ದರಾಮಯ್ಯ; Video

SIR ಪ್ರಕ್ರಿಯೆಗೆ ಸುಪ್ರೀಂ ಕೋರ್ಟ್ ಗ್ರೀನ್ ಸಿಗ್ನಲ್; ಮುಕ್ತ ಹಾಗೂ ನ್ಯಾಯಸಮ್ಮತ ಚುನಾವಣೆಗೆ ಅಗತ್ಯ ಎಂದ ನ್ಯಾಯಪೀಠ..!

ರಾಜ್ಯದ ಮುಂದಿನ ಮುಖ್ಯಮಂತ್ರಿಯಾಗಿ ಡಿಕೆ ಶಿವಕುಮಾರ್ ಹೆಸರು ಬಹುತೇಕ ಫೈನಲ್? ಕಾಂಗ್ರೆಸ್‌ನಲ್ಲಿ ಗರಿಗೆದರಿದ ರಾಜಕೀಯ ಚಟುವಟಿಕೆ..!

ದೆಹಲಿ ಸಭೆ ಬಳಿಕ ಬೆಂಗಳೂರಿನಲ್ಲಿ ಶಕ್ತಿ ಪ್ರದರ್ಶನಕ್ಕೆ ಸಿದ್ದರಾಮಯ್ಯ ಸಜ್ಜು: ಬೆಂಬಲಿಗರ ಜೊತೆ ಮಹತ್ವದ ಸಭೆ, ಹೆಚ್ಚಿದ ಕುತೂಹಲ

ಹೈಕಮಾಂಡ್ ಸೂಚನೆಗೆ ಮಣಿದ ಸಿದ್ದರಾಮಯ್ಯ: ಮುಖ್ಯಮಂತ್ರಿ ಸ್ಥಾನ ತ್ಯಜಿಸಲು ಸಮ್ಮತಿ; ಕಾಂಗ್ರೆಸ್ ಪವರ್ ಶಿಫ್ಟ್‌ಗೆ ಕೌಂಟ್‌ಡೌನ್ ಶುರು, ಡಿಕೆಶಿಗೆ ಸಿಎಂ ಪಟ್ಟ..?

SCROLL FOR NEXT