ಕೇರಳದ ಗಡಿಯಲ್ಲಿ ತಪಾಸಣೆ ನಡೆಸುತ್ತಿರುವ ಪೊಲೀಸರು 
ರಾಜ್ಯ

ನಿಫಾ ವೈರಸ್ ಭೀತಿ: ಅಕ್ಟೋಬರ್ ಅಂತ್ಯದವರೆಗೂ ಕೇರಳ ಪ್ರಯಾಣ ಮುಂದೂಡುವಂತೆ ಸಾರ್ವಜನಿಕರಿಗೆ ಸರ್ಕಾರ ಸಲಹೆ

ನೆರೆ ರಾಜ್ಯ ಕೇರಳದಲ್ಲಿ ನಿಫ್ರಾ ವೈರಸ್‌ (ಎನ್‌ಐವಿ) ಸೋಂಕು ಕಾಣಿಸಿಕೊಂಡಿರುವ ಹಿನ್ನೆಲೆಯಲ್ಲಿ  ರಾಜ್ಯದ ಎಲ್ಲ ಶಿಕ್ಷಣ ಸಂಸ್ಥೆಗಳು, ಹೋಟೆಲ್, ಆಸ್ಪತ್ರೆ, ನರ್ಸಿಂಗ್ ಹೋಮ್, ಕಾರ್ಖಾನೆ ಮುಂತಾದ ಸಂಸ್ಥೆಗಳ ಆಡಳಿತ ವರ್ಗ/ಮಾಲೀಕರಿಗೆ ಕೇರಳದಿಂದ ಆಗಮಿಸುವ ತಮ್ಮ ವಿದ್ಯಾರ್ಥಿಗಳು/ಉದ್ಯೋಗಿಗಳಿಗೆ ಅಕ್ಟೋಬರ್ ಅಂತ್ಯದವರೆಗೆ ತಮ್ಮ ಪ್ರಯಾಣವನ್ನು ಮುಂದೂಡಲು ತಿಳಿಸಲಾಗಿದೆ

ಬೆಂಗಳೂರು: ನೆರೆ ರಾಜ್ಯ ಕೇರಳದಲ್ಲಿ ನಿಫ್ರಾ ವೈರಸ್‌ (ಎನ್‌ಐವಿ) ಸೋಂಕು ಕಾಣಿಸಿಕೊಂಡಿರುವ ಹಿನ್ನೆಲೆಯಲ್ಲಿ  ರಾಜ್ಯದ ಎಲ್ಲ ಶಿಕ್ಷಣ ಸಂಸ್ಥೆಗಳು, ಹೋಟೆಲ್, ಆಸ್ಪತ್ರೆ, ನರ್ಸಿಂಗ್ ಹೋಮ್, ಕಾರ್ಖಾನೆ ಮುಂತಾದ ಸಂಸ್ಥೆಗಳ ಆಡಳಿತ ವರ್ಗ/ಮಾಲೀಕರಿಗೆ ಕೇರಳದಿಂದ ಆಗಮಿಸುವ ತಮ್ಮ ವಿದ್ಯಾರ್ಥಿಗಳು/ಉದ್ಯೋಗಿಗಳಿಗೆ ಅಕ್ಟೋಬರ್ ಅಂತ್ಯದವರೆಗೆ ತಮ್ಮ ಪ್ರಯಾಣವನ್ನು ಮುಂದೂಡಲು ತಿಳಿಸಲಾಗಿದೆ.

ಕೇರಳದಿಂದ ರಾಜ್ಯಕ್ಕೆ ಆಗಮಿಸುವವರಿಗೆ ಕೋವಿಡ್-19 ಪರೀಕ್ಷೆ ಪುನರಾವರ್ತನೆ, ಆರ್ ಟಿ- ಪಿಸಿಆರ್ ನೆಗೆಟಿವ್ ವರದಿ ಕ್ರಮಗಳ ಹೊರತಾಗಿಯೂ, ದಕ್ಷಿಣ ಕನ್ನಡ ಹಾಗೂ ಉಡುಪಿಯಲ್ಲಿ ಹೆಚ್ಚಿನ ಸಂಖ್ಯೆಯ ಪ್ರಕರಣಗಳ ವರದಿಯನ್ನು ಪರಿಗಣಿಸಿ ಈ ಮಾರ್ಗಸೂಚಿ ಹೊರಡಿಸಲಾಗಿದೆ. 

ಕೇರಳ ಉದ್ಯೋಗಿಗಳು ಅಕ್ಟೋಬರ್ ಅಂತ್ಯದವರೆಗೂ ಕರ್ನಾಟಕಕ್ಕೆ  ಬಾರದಂತೆ ಅಥವಾ ಮುಂದೂಡುವಂತೆ ಎಲ್ಲಾ ಆಡಳಿತ ಮಂಡಳಿ, ಶಿಕ್ಷಣ ಸಂಸ್ಥೆಗಳ ಪ್ರಿನ್ಸಿಪಾಲರು, ನರ್ಸಿಂಗ್, ಪ್ಯಾರಾ ಮೆಡಿಕಲ್ ಸಂಸ್ಥೆಗಳು, ಆಸ್ಪತ್ರೆಗಳ ಮಾಲೀಕರು, ನರ್ಸಿಂಗ್ ಹೋಮ್ ಗಳು, ಕಚೇರಿಗಳು, ಹೋಟೆಲ್ ಗಳು, ಕಾರ್ಖಾನೆಗಳು, ಕೈಗಾರಿಕೆಗಳು ಮತ್ತಿತರಿಗೆ ರಾಜ್ಯ ಸರ್ಕಾರ ಸೂಚನೆ ನೀಡಿದೆ.

ಸಾರ್ವಜನಿಕರು ಅಕ್ಟೋಬರ್ ಅಂತ್ಯದವರೆಗೂ ಕೇರಳಕ್ಕೆ ಪ್ರಯಾಣಿಸದಂತೆ  ರಾಜ್ಯ ಸರ್ಕಾರ ಹೇಳಿದೆ. ತುರ್ತು ಅಗತ್ಯವಿಲ್ಲದಿದ್ದಲ್ಲಿ ಕೇರಳ ಪ್ರಯಾಣವನ್ನು ಮುಂದೂಡುವಂತೆ ಸರ್ಕಾರ ಸಲಹೆ ನೀಡಿದೆ.  ಸಾರ್ವಜನಿಕರ ಹಿತರಕ್ಷಣೆ ನಿಟ್ಟಿನಲ್ಲಿ ಕೋವಿಡ್-19 ಮೂರನೇ ಅಲೆ ತಡೆಯುವ ನಿಟ್ಟಿನಲ್ಲಿ ಈ ಆದೇಶ ಹೊರಡಿಸಿರುವುದಾಗಿ ಮಾರ್ಗಸೂಚಿಯಲ್ಲಿ ತಿಳಿಸಲಾಗಿದೆ. 

ಗಡಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ, ಮೈಸೂರು, ಕೊಡಗು ಮತ್ತು ಚಾಮರಾಜನಗರದಲ್ಲಿ ಬಿಗಿ ಕಣ್ಗಾವಲು ನಿಯೋಜಿಸಲಾಗುತ್ತಿದೆ.ಈ ಕುರಿತು ಮಾರ್ಗಸೂಚಿ ಬಿಡುಗಡೆಗೊಳಿಸಿರುವ ರಾಜ್ಯ ಆರೋಗ್ಯ ಇಲಾಖೆ, ಕೇರಳದಿಂದ ಅಗಮಿಸುವವರನ್ನು ತಪಾಸಣೆಗೊಳಪಡಿಸುವವರನ್ನು ಜ್ವರ, ಮಾನಸಿಕ ಸ್ಥಿತಿಗತಿ, ದುರ್ಬಲತೆ, ತಲೆನೋವು, ಶ್ವಾಸಕೋಶದ ತೊಂದರೆ, ಕೆಮ್ಮು, ವಾಂತಿ, ಸ್ನಾಯುಸೆಳೆತದಂತಹ ಲಕ್ಷಣಗಳಿವೆಯೇ ಎಂದು ಪರಿಶೀಲಿಸಬೇಕು ಎಂದು ಸೂಚಿಸಿದೆ.

ಸೋಂಕಿನ ಯಾವುದೇ ಲಕ್ಷಣಗಳು ಕಂಡುಬಂದಲ್ಲಿ ಅವರ ಮಾದರಿಗಳನ್ನು ಪಡೆದು ಪುಣೆಯ ಎನ್‌ಐವಿ ಪ್ರಯೋಗಾಲಯಕ್ಕೆ ಕಳುಹಿಸಬೇಕು. ಈ ನಿಟ್ಟಿನಲ್ಲಿ ಸಾರ್ವಜನಿಕರಿಗೆ ಅರಿವು ಮೂಡಿಸಬೇಕು ಎಂದು ಇಲಾಖೆ ತಿಳಿಸಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಉಪ ಚುನಾವಣೆ ಫಲಿತಾಂಶ| ಅಸ್ಸಾಂ, ಪ.ಬಂಗಾಳ, ತಮಿಳುನಾಡು, ಪುದುಚೇರಿಯ ಆರು ಕ್ಷೇತ್ರಗಳಲ್ಲಿ ಮತ ಎಣಿಕೆ ಪ್ರಗತಿಯಲ್ಲಿ

ಬಾಲಿವುಡ್ ನಟ ನಾನಾ ಪಾಟೇಕರ್ ನಿಧನಕ್ಕೆ ಬಿಗ್ ಟ್ವಿಸ್ಟ್: ಅಸಹಜ ಸಾವು ಕೇಸ್ ದಾಖಲಿಸಿದ ಗೋವಾ ಪೊಲೀಸರು!

Sting operation ಮೂಲಕ ನಿಮ್ಮನ್ನು ಸಿಲುಕಿಸಲು ಯತ್ನಿಸಿರುವುದು ನಿಜವೇ ಆಗಿದ್ದರೆ ತನಿಖೆಗೆ ಆದೇಶಿಸಿ: ಸಿಎಂ ಡಿಕೆ.ಶಿವಕುಮಾರ್'ಗೆ HDK ಸವಾಲು

ಮತ ಕಳ್ಳತನದಿಂದಲೇ ಮೋದಿ ಪ್ರಧಾನಿಯಾಗಿದ್ದು, ಗೆಲ್ಲಲಾಗದ ರಾಜ್ಯಗಳಲ್ಲೂ BJP ಗೆಲುವು: ಅಭಿಜೀತ್ ದೀಪ್ಕೆ

ರಾಜ್ಯದ ಬಾಕಿ ಹಣದ ಬಗ್ಗೆ ನಿರ್ಮಲಾ ಸೀತಾರಾಮನ್ ಜೊತೆ ಚರ್ಚೆ: GST ಮಂಡಳಿ ಸಭೆ ಬಳಿಕ CM ಡಿಕೆ.ಶಿವಕುಮಾರ್ ಹರ್ಷ