ಆತ್ಮಹತ್ಯೆ 
ರಾಜ್ಯ

ಬೆಂಗಳೂರು: ಮತ್ತೊಬ್ಬನೊಂದಿಗೆ ತನ್ನ ಪ್ರೇಯಸಿಯ ಲವ್ವಿಡವ್ವಿ, ಭಗ್ನ ಪ್ರೇಮಿ ಆತ್ಮಹತ್ಯೆಗೆ ಶರಣು!

ಮೂರು ವರ್ಷಗಳಿಂದ ಪ್ರೀತಿಸಿದ ಯುವತಿ ಕೊನೆಗೆ ಮದುವೆಯಾಗುವುದಕ್ಕೆ ನಿರಾಕರಿಸಿದ್ದಕ್ಕೆ ಮನನೊಂದ ಯುವಕನೋರ್ವ ಫ್ಯಾನ್​​​​ಗೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. 

ಬೆಂಗಳೂರು: ಮೂರು ವರ್ಷಗಳಿಂದ ಪ್ರೀತಿಸಿದ ಯುವತಿ ಕೊನೆಗೆ ಮದುವೆಯಾಗುವುದಕ್ಕೆ ನಿರಾಕರಿಸಿದ್ದಕ್ಕೆ ಮನನೊಂದ ಯುವಕನೋರ್ವ ಫ್ಯಾನ್​​​​ಗೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. 

ನಗರದ ಆರ್.ಆರ್ ನಗರ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದ್ದು ಮಂಡ್ಯ ಮೂಲದ 31 ವರ್ಷದ ಸಿದ್ದರಾಮ ಆತ್ಮಹತ್ಯೆಗೆ ಶರಣಾದ ಭಗ್ನ ಪ್ರೇಮಿ. ಮೃತನು ಬೆಂಗಳೂರಿನಲ್ಲಿ ಕಾರ್ಪೆಂಟರ್ ಆಗಿ ಕೆಲಸ ಮಾಡಿಕೊಂಡಿದ್ದನು.

ಕಳೆದ ಮೂರು ವರ್ಷಗಳಿಂದ ಸುಧಾ(ಹೆಸರು ಬದಲಾಯಿಸಲಾಗಿದೆ) ಹಾಗೂ ಸಿದ್ದರಾಮ ಪರಸ್ಪರ ಪ್ರೀತಿಸ್ತಿದ್ದರು. ಆದರೆ, ನಿನ್ನೆ ಇಬ್ಬರ ನಡುವೆ ಜಗಳವಾಗಿತ್ತು. 

ಈ ವೇಳೆ ಮದುವೆಯಾಗಲು ಯುವತಿ ಹಿಂದೇಟು ಹಾಕಿದ್ದಳಂತೆ. ಅಲ್ಲದೇ, ಆಕೆ ಇನ್ನೋರ್ವನನ್ನ ಪ್ರೀತಿಸಿದ್ದಳು ಎಂಬ ಮಾಹಿತಿ ಇದೆ. ಆದ್ದರಿಂದ ಸಿದ್ದರಾಮ ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಮೃತನ ಅಣ್ಣ ಸಂತೋಷ್​​ ಹೇಳಿಕೆ ನೀಡಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

"Bad News": ಅಮೆರಿಕದ ಷರತ್ತುಗಳನ್ನು ಇರಾನ್ ಒಪ್ಪುತ್ತಿಲ್ಲ- ಜೆಡಿ ವ್ಯಾನ್ಸ್!

ಅಂತಿಮಗೊಳ್ಳದ ಹಾರ್ಮುಜ್ ಜಲಸಂಧಿ ಬಿಕ್ಕಟ್ಟು: 2 ನೇ ದಿನವಾದ ಇಂದು ಕೂಡಾ ಯುಎಸ್- ಇರಾನ್ ಮಾತುಕತೆ ಮುಂದುವರಿಕೆ!

PM Modi- Rahul: ರಾಜಕೀಯ ಬದ್ಧ ವೈರಿಗಳ ಅಪರೂಪದ ಚುಟುಕು ಸಂಭಾಷಣೆ- ವಿಡಿಯೋ ವೈರಲ್!

30 ನಿಮಿಷಗಳಲ್ಲಿ ಹಿಂದಕ್ಕೆ ಹೋಗಿ: ಶಾಂತಿ ಮಾತುಕತೆ ಮಧ್ಯೆ ಹಾರ್ಮುಜ್'ಗೆ ನುಗ್ಗಿದ ಅಮೆರಿಕದ Destroyer ಯುದ್ಧನೌಕೆಗೆ ಇರಾನ್ ಎಚ್ಚರಿಕೆ!

"ಇರಾನ್ ದೊಡ್ಡ ಮಟ್ಟದಲ್ಲಿ ಸೋಲುತ್ತಿದೆ": ಮಾತುಕತೆ ಮುಕ್ತಾಯಕ್ಕೂ ಮುನ್ನ ಟ್ರಂಪ್ ಘೋಷಣೆ

SCROLL FOR NEXT