ಸಾಂದರ್ಭಿಕ ಚಿತ್ರ 
ರಾಜ್ಯ

ಮೈಸೂರು ಸಾಮೂಹಿಕ ಅತ್ಯಾಚಾರ ಪ್ರಕರಣ: 7ನೇ ಆರೋಪಿ ಬಂಧನ

ಕೆಲ ದಿನಗಳ ಹಿಂದೆ ಮೈಸೂರಿನಲ್ಲಿ ವಿದ್ಯಾರ್ಥಿನಿ ಮೇಲೆ ನಡೆದಿದ್ದ ಸಾಮೂಹಿಕ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೋರ್ವ ಆರೋಪಿಯನ್ನು ಪೊಲೀಸರು ಮಂಗಳವಾರ...

ಬೆಂಗಳೂರು: ಕೆಲ ದಿನಗಳ ಹಿಂದೆ ಮೈಸೂರಿನಲ್ಲಿ ವಿದ್ಯಾರ್ಥಿನಿ ಮೇಲೆ ನಡೆದಿದ್ದ ಸಾಮೂಹಿಕ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೋರ್ವ ಆರೋಪಿಯನ್ನು ಪೊಲೀಸರು ಮಂಗಳವಾರ ಬಂಧಿಸಿದ್ದು, ಈ ಮೂಲಕ ಬಂಧಿತ ಆರೋಪಿಗಳ ಸಂಖ್ಯೆ 7‌ಕ್ಕೆ ಏರಿಕೆ ಆಗಿದೆ.

ತಮಿಳುನಾಡಿನಲ್ಲಿ ತಲೆಮರೆಸಿಕೊಂಡಿದ್ದ 7ನೇ ಆರೋಪಿಯನ್ನು ಮೈಸೂರು ಪೊಲೀಸರು ತಮಿಳುನಾಡು ಪೊಲೀಸರ ಸಹಾಯದಿಂದ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಆರೋಪಿಯನ್ನು ತಮಿಳುನಾಡಿನಿಂದ ಮೈಸೂರಿಗೆ ಇಂದು ರಾತ್ರಿ ಕರೆತರಲಾಗುವುದು ಎಂದು ಪೊಲೀಸ್ ಮೂಲಗಳು ಮಾಹಿತಿ ನೀಡಿವೆ.

ಘಟನೆ ನಡೆದ 4 ದಿನಗಳ ನಂತರ 5 ಜನ ಆರೋಪಿಗಳನ್ನು ಪೊಲೀಸರು ಬಂಧಿಸಿದರು. ವಿಚಾರಣೆ ವೇಳೆ 7 ಜನ ಸೇರಿ ಈ ಕೃತ್ಯ ಎಸಗಿರುವುದಾಗಿ ಆರೋಪಿಗಳು ತಪ್ಪೊಪ್ಪಿಕೊಂಡಿದ್ದರು. ಬಳಿಕ ಕಾರ್ಯಾಚರಣೆ  ನಡೆಸಿ 6ನೇ ಆರೋಪಿಯನ್ನು ಪೊಲೀಸರು ಬಂಧಿಸಿದ್ದರು. ಆದರೆ, 7ನೇ ಆರೋಪಿ ಬಹುದಿನಗಳಿಂದ ಪೊಲೀಸರ ಕೈಗೆ ಸಿಗದೇ ತಲೆಮರಿಸಿಕೊಂಡಿದ್ದ. ಇದೀಗ ಪೊಲೀಸರು ಕಾರ್ಯಾಚರಣೆ ನಡೆಸಿ, ಪ್ರಕರಣದ 7 ಆರೋಪಿಗಳನ್ನು ಬಂಧಿಸಿದ್ದಾರೆ.

ಇನ್ನು ಪೊಲೀಸ್ ಕಸ್ಟಡಿಯಲ್ಲಿದ್ದ ಆರೋಪಿಗಳನ್ನು ಮಂಗಳವಾರ ಮೈಸೂರಿನ ಮೂರನೇ ಜೆಎಂಎಫ್‍ಸಿ ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದು ನ್ಯಾಯಾಧೀಶರು ಐವರು ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ. ಮತ್ತೊಬ್ಬ ಬಾಲಪರಾಧಿಯಾಗಿರುವುದರಿಂದ ಆತನನ್ನು ಬಾಲ ಮಂದಿರಕ್ಕೆ ಕಳುಹಿಸಲಾಗಿದೆ ಎಂದು ತಿಳಿದು ಬಂದಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?

ನಿರ್ಬಂಧದ ಹೊರತಾಗಿಯೂ ರಷ್ಯಾದಲ್ಲಿ ಇಳಿದ ಅಮೆರಿಕದ C-17 ಮಿಲಿಟರಿ ವಿಮಾನ: ಮಿಷನ್ ಮಾತ್ರ ನಿಗೂಢ!

ನೀಟ್ ಪ್ರತಿಭಟನಾಕಾರರ ಮೇಲೆ ಪೊಲೀಸ್ ದೌರ್ಜನ್ಯ ಆರೋಪ: ಚರ್ಚೆಗೆ ವಿಪಕ್ಷಗಳ ಪಟ್ಟು, ಸಂಸದೀಯ ಸಮಿತಿ ಸಭೆಯಲ್ಲಿ ತೀವ್ರ ವಾಗ್ವಾದ!

2nd Test: ‘ಶ್ರೀಲಂಕಾ ಆಟಗಾರರ ವರ್ತನೆ ವೃತ್ತಿಪರವಾಗಿರಲಿಲ್ಲ’: ಬ್ಯಾಡ್ ಲೈಟ್ ವಿವಾದಕ್ಕೆ Sanjay Manjrekar ಕಿಡಿ

‘ಪ್ರಸಿದ್ಧ್ ಕೃಷ್ಣ ವಿಶ್ವದರ್ಜೆಯ ಬೌಲರ್ ಆಗಿ ಮಾರ್ಪಟ್ಟಿದ್ದಾರೆ’: ಕನ್ನಡಿಗನ ಶ್ಲಾಘಿಸಿದ ದಕ್ಷಿಣ ಆಫ್ರಿಕಾ ಮಾಜಿ ವೇಗಿ Morne Morkel