ವಿಕೆ ಶಶಿಕಲಾ 
ರಾಜ್ಯ

ಜೈಲಿನಲ್ಲಿ ಶಶಿಕಲಾಗೆ ವಿಶೇಷ ಸೌಕರ್ಯ: ವರದಿ ಸಲ್ಲಿಸಲು ಅ.8ರ ಗಡುವು ನಿಗದಿಪಡಿಸಿದ ಹೈಕೋರ್ಟ್

ಮಾಜಿ ಸಿಎಂ ಜೆ ಜಯಲಲಿತಾರ ಸಹಾಯಕಿ ವಿಕೆ ಶಶಿಕಲಾಗೆ ಕೇಂದ್ರ ಕಾರಾಗೃಹದಲ್ಲಿ ವಿಶೇಷ ಸೌಕರ್ಯ ಬಗ್ಗೆ ದಾಖಲಾದ ಎಫ್‌ಐಆರ್ ತನಿಖೆಯ ವರದಿಯನ್ನು ಸಲ್ಲಿಸಲು ಭ್ರಷ್ಟಾಚಾರ ನಿಗ್ರಹ ದಳಕ್ಕೆ(ಎಸಿಬಿ) ಕರ್ನಾಟಕ ಹೈಕೋರ್ಟ್ ಒಂದು ತಿಂಗಳ ಕಾಲಾವಕಾಶ ನೀಡಲಾಗಿದೆ.

ಬೆಂಗಳೂರು: ಮಾಜಿ ಸಿಎಂ ಜೆ ಜಯಲಲಿತಾರ ಸಹಾಯಕಿ ವಿಕೆ ಶಶಿಕಲಾಗೆ ಕೇಂದ್ರ ಕಾರಾಗೃಹದಲ್ಲಿ ವಿಶೇಷ ಸೌಕರ್ಯ ಬಗ್ಗೆ ದಾಖಲಾದ ಎಫ್‌ಐಆರ್ ತನಿಖೆಯ ವರದಿಯನ್ನು ಸಲ್ಲಿಸಲು ಭ್ರಷ್ಟಾಚಾರ ನಿಗ್ರಹ ದಳಕ್ಕೆ(ಎಸಿಬಿ) ಕರ್ನಾಟಕ ಹೈಕೋರ್ಟ್ ಒಂದು ತಿಂಗಳ ಕಾಲಾವಕಾಶ ನೀಡಲಾಗಿದೆ. 

ಎಸಿಬಿ ನಿಗದಿತ ಗಡುವಿನಲ್ಲಿ ತನಿಖೆಯ ವರದಿ ಸಲ್ಲಿಸುವಲ್ಲಿ ವಿಫಲವಾದರೆ. ಮುಂದಿನ ವಿಚಾರಣೆಯ ನಡೆಯುವ ಅಕ್ಟೋಬರ್ 8ರಂದು ಗೃಹ ಇಲಾಖೆಯ ಕಾರ್ಯದರ್ಶಿ ನ್ಯಾಯಾಲಯದ ಮುಂದೆ ಹಾಜರಾಗಬೇಕು ಎಂದು ಹೈಕೋರ್ಟ್ ಹೇಳಿದೆ.

ಹಂಗಾಮಿ ಮುಖ್ಯ ನ್ಯಾಯಮೂರ್ತಿ ಸತೀಶ್ ಚಂದ್ರ ಶರ್ಮಾ ಮತ್ತು ನ್ಯಾಯಮೂರ್ತಿ ಸಚಿನ್ ಶಂಕರ್ ಮಗದುಮ್ ಅವರ ವಿಭಾಗೀಯ ಪೀಠವು ಚೆನ್ನೈನ ಅಲ್ವಾರ್‌ಪೇಟೆಯ ಸಾಮಾಜಿಕ ಕಾರ್ಯಕರ್ತೆ ಮತ್ತು ಶಿಕ್ಷಣ ತಜ್ಞೆ ಕೆಎಸ್ ಗೀತಾ ಸಲ್ಲಿಸಿದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ವಿಚಾರಣೆ ವೇಳೆ ಈ ಆದೇಶ ನೀಡಿದೆ.

2014ರ ಅಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ದಿವಗಂತ ಜೆ ಜಯಲಲಿತಾ ಜೊತೆಗೆ ಸಹ ಆರೋಪಿ ಎನಿಸಿ, ನಂತರ ಆರೋಪ ಸಾಬೀತಾಗಿದ್ದರಿಂದ ಅಪರಾಧಿಯಾಗಿ ಶಶಿಕಲಾ ಅವರು ಶಶಿಕಲಾ ಅವರು 2017ರ ಫೆಬ್ರುವರಿ 15ರಂದು ಪೊಲೀಸರಿಗೆ ಶರಣಾಗಿದ್ದರು. ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿ ನಾಲ್ಕು ವರ್ಷಗಳ ಕಾಲ ಶಿಕ್ಷೆ ಅನುಭವಿಸಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT