ರಾಜ್ಯ

ವಾಯುಭಾರ ಕುಸಿತ: ರಾಜ್ಯದಲ್ಲಿ ಮಳೆ ಮುಂದುವರಿಕೆ

Manjula VN

ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ಕಾಣಿಸಿಕೊಂಡ ವಾಯುಭಾರ ಕುಸಿತದ ಕಾರಣ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂದಿನ 48 ಗಂಟೆಗಳ ಕಾಲ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಕಲಬುರ್ಗಿ, ಕೊಪ್ಪಳ, ವಿಜಯಪುರ, ಯಾದಗಿರಿ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ಆರೆಂಜ್ ಅಲರ್ಟ್ ಘೋಷಿಸಲಾಗಿದೆ.

ಬಳ್ಳಾರಿ, ಚಿತ್ರದುರ್ಗ, ದಾವಣಗೆರೆ, ಬೀದರ್, ಕಲಬುರಗಿ, ವಿಜಯಪುರ, ರಾಯಚೂರು, ಯಾದಗಿರಿ, ಬೆಳಗಾವಿ, ಕೊಪ್ಪಳ, ಗದಗ, ಧಾರವಾಡ, ಹಾವೇರಿ, ಚಿಕ್ಕಮಗಳೂರು, ಹಾಸನ, ಕೊಡಗು, ಶಿವಮೊಗ್ಗ, ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಕೋಲಾರ, ರಾಮನಗರ, ತುಮಕೂರು, ಮಂಡ್ಯ, ಮೈಸೂರು, ಚಾಮರಾಜನಗರ ಜಿಲ್ಲೆಗಳಲ್ಲಿ ಇಂದು ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ನಿರ್ದೇಶಕ ಸಿ.ಎಸ್. ಪಾಟೀಲ್ ಮಾಹಿತಿ ನೀಡಿದ್ದಾರೆ.

SCROLL FOR NEXT