ಸಂಗ್ರಹ ಚಿತ್ರ 
ರಾಜ್ಯ

ಕರ್ನಾಟಕದಲ್ಲಿ ಅಂತರ್ಜಾಲ ಸಂಪರ್ಕ ವ್ಯವಸ್ಥೆ ಸುಧಾರಣೆಗೆ ಕೇಂದ್ರ ಸರ್ಕಾರದಿಂದ ಕಾರ್ಯಪಡೆ ರಚನೆ

ಕರ್ನಾಟಕದಲ್ಲಿ ಅಂತರ್ಜಾಲ ಸಂಪರ್ಕ ವ್ಯವಸ್ಥೆ ಸುಧಾರಣೆಗೆ ಸಂಬಂಧಿಸಿದಂತೆ ಕಾರ್ಯಪಡೆಯೊಂದನ್ನು ಕೇಂದ್ರ ಸರ್ಕಾರ ರಚಿಸಿದೆ ಎಂದು ವಿದ್ಯುನ್ಮಾನ ಮತ್ತು ಮಾಹಿತಿ ತಂತ್ರಜ್ಞಾನ ಸಚಿವಾಲಯ ತಿಳಿಸಿದೆ.

ನವದೆಹಲಿ: ಕರ್ನಾಟಕದಲ್ಲಿ ಅಂತರ್ಜಾಲ ಸಂಪರ್ಕ ವ್ಯವಸ್ಥೆ ಸುಧಾರಣೆಗೆ ಸಂಬಂಧಿಸಿದಂತೆ ಕಾರ್ಯಪಡೆಯೊಂದನ್ನು ಕೇಂದ್ರ ಸರ್ಕಾರ ರಚಿಸಿದೆ ಎಂದು ವಿದ್ಯುನ್ಮಾನ ಮತ್ತು ಮಾಹಿತಿ ತಂತ್ರಜ್ಞಾನ ಸಚಿವಾಲಯ ತಿಳಿಸಿದೆ.

ಈ ಕುರಿತಂತೆ ಪ್ರಕಟಣೆ ನೀಡಿರುವ ಸಚಿವಾಲಯ, 'ಪ್ರಧಾನಮಂತ್ರಿ ನರೇಂದ್ರ ಮೋದಿಯವರ ನಿರ್ದೇಶನದಂತೆ ಎಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ ತಂತ್ರಜ್ಞಾನ ಸಚಿವಾಲಯದ ರಾಜ್ಯ ಸಚಿವರಾದ ರಾಜೀವ್ ಚಂದ್ರಶೇಖರ್ ಅವರು ಕರ್ನಾಟಕದಲ್ಲಿ ಇತ್ತೀಚೆಗೆ ನಡೆಸಿದ 6 ಜಿಲ್ಲೆಗಳ ಜನಾಶೀರ್ವಾದ ಯಾತ್ರೆಯಲ್ಲಿ, ಇಂಟರ್ನೆಟ್ ಸಂಪರ್ಕದ ವೇಗ ಮತ್ತು ಪ್ರವೇಶವನ್ನು ಸುಧಾರಿಸಲು ಹಲವಾರು ವಿನಂತಿಗಳು ಬಂದಿದ್ದವು. ಪ್ರತಿ ಜಿಲ್ಲೆಯ ಕೆಲವು ಭಾಗಗಳು. ಪ್ರತಿ ಜಿಲ್ಲೆಯಲ್ಲಿಯೂ ಇದನ್ನು ಅಧ್ಯಯನ ಮಾಡಲು ಮೈಟಿ ಟಾಸ್ಕ್ ಫೋರ್ಸ್ ಕಳುಹಿಸಲಾಗುವುದು ಎಂದು ಸಚಿವರು ಭರವಸೆ ನೀಡಿದ್ದರು.

ಸಚಿವರು ನೀಡಿದ್ದ ಭರವಸೆಯಂತೆ ನ್ಯಾಷನಲ್ ಇಂಟರ್ನೆಟ್ ಎಕ್ಸ್‌ಚೇಂಜ್ ಆಫ್ ಇಂಡಿಯಾ (ಎನ್‌ಐಎಕ್ಸ್‌ಐ) ಮತ್ತು ಸಾಫ್ಟ್‌ವೇರ್ ಟೆಕ್ನಾಲಜಿ ಪಾರ್ಕ್ ಆಫ್ ಇಂಡಿಯಾ (ಎಸ್‌ಟಿಪಿಐ) ಪ್ರತಿನಿಧಿಗಳನ್ನು ಒಳಗೊಂಡ ಕಾರ್ಯಪಡೆಯನ್ನು ರಚನೆ ಮಾಡಲಾಗಿದೆ. ಕಾರ್ಯಪಡೆಯ ಸದಸ್ಯರು ಪ್ರತಿ ಜಿಲ್ಲೆಗೂ ಭೇಟಿ ನೀಡಿ  ಜನರ ಸಮಸ್ಯೆ ಆಲಿಸಲಿದ್ದಾರೆ. ಅವರು ರಾಜ್ಯ ಸರ್ಕಾರಿ ಅಧಿಕಾರಿಗಳನ್ನೂ ಭೇಟಿ ಮಾಡಿ ಸಮಾಲೋಚನೆ ನಡೆಸಲಿದ್ದಾರೆ ಮತ್ತು ಸಚಿವರಿಗೆ ವರದಿಯನ್ನು ಸಲ್ಲಿಸಲಿದ್ದಾರೆ ಎಂದು ಸಚಿವಾಲಯ ತಿಳಿಸಿದೆ. 

ಅಂತೆಯೇ ಈ ಬದ್ಧತೆಗೆ ಪ್ರತಿಕ್ರಿಯೆಯಾಗಿ, ನ್ಯಾಷನಲ್ ಇಂಟರ್‌ನೆಟ್ ಎಕ್ಸ್‌ಚೇಂಜ್ ಆಫ್ ಇಂಡಿಯಾ (NIXI) ಮತ್ತು ಸಾಫ್ಟ್‌ವೇರ್ ಟೆಕ್ನಾಲಜಿ ಪಾರ್ಕ್ಸ್ ಆಫ್ ಇಂಡಿಯಾ (STPI) ಅಧಿಕಾರಿಗಳನ್ನು ಒಳಗೊಂಡ MeitY ಕಾರ್ಯಪಡೆಯು ತಮ್ಮ ಭೇಟಿ ಮತ್ತು ಕೆಲಸವನ್ನು ತ್ವರಿತವಾಗಿ ಆರಂಭಿಸಿದೆ. ಅವರು ಪ್ರತಿ ಜಿಲ್ಲೆಗೆ ಭೇಟಿ ನೀಡಿ ಜನರನ್ನು ಭೇಟಿ ಮಾಡಿ ಚರ್ಚಿಸುತ್ತಾರೆ. ಬಳಿಕ ಅವರು ರಾಜ್ಯ ಸರ್ಕಾರದ ಅಧಿಕಾರಿಗಳನ್ನು ಭೇಟಿ ಮಾಡಿ ಸಚಿವರಿಗೆ ವರದಿ ಸಲ್ಲಿಸುತ್ತಾರೆ. ಪ್ರಧಾನಮಂತ್ರಿ ನರೇಂದ್ರ ಮೋದಿ ಸರ್ಕಾರದ ಒಂದು ನೀತಿ ಆದ್ಯತೆಯೆಂದರೆ ಎಲ್ಲ ಭಾರತೀಯರನ್ನು ಸಂಪರ್ಕಿಸುವುದು ಮತ್ತು ಡಿಜಿಟಲ್ ಇಂಡಿಯಾ ಕಾರ್ಯಕ್ರಮದ ಪ್ರಯೋಜನಗಳನ್ನು ಪ್ರತಿಯೊಬ್ಬ ಭಾರತೀಯರು ನೇರವಾಗಿ ತಲುಪುವಂತೆ ಮಾಡುವುದು ಸಚಿವಾಲಯ ಮಾಹಿತಿ ನೀಡಿದೆ.

ಇದನ್ನೂ ಓದಿ: ಜನಾಶೀರ್ವಾದ ಯಾತ್ರೆ: ಭತ್ತ ನಾಟಿ ಮಾಡಿದ ಶೋಭಾ, ರೋಡ್ ಶೋ ನಡೆಸಿದ ಖೂಬಾ; ಮಠಕ್ಕೆ ರಾಜೀವ್ ಚಂದ್ರಶೇಖರ್ ಭೇಟಿ!

ಈ ಹಿಂದೆ 6 ಜಿಲ್ಲೆಗಳ ಜನಾಶೀರ್ವಾದ ಯಾತ್ರೆಯಲ್ಲಿ ಪಾಲ್ಗೊಂಡಿದ್ದ ಎಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ ತಂತ್ರಜ್ಞಾನ ಸಚಿವಾಲಯದ ರಾಜ್ಯ ಸಚಿವರಾದ ರಾಜೀವ್ ಚಂದ್ರಶೇಖರ್ ಅವರು, ಭಾರತ ಮತ್ತು ವಿದೇಶದಲ್ಲಿ ಕಾರ್ಯನಿರ್ವಹಿಸುತ್ತಿರುವ ತಂತ್ರಜ್ಞಾನ ವಲಯದ ಬಹುತೇಕ ಕಂಪನಿಗಳು ‘ವರ್ಕ್‌ ಫ್ರಮ್‌ ಹೋಂ’ನತ್ತ ಒಲವು ತೋರುತ್ತಿವೆ. ಹೀಗಾಗಿ ಕರ್ನಾಟಕದ ಎರಡನೇ ಹಂತದ 2 ನಗರಗಳಲ್ಲಿ ಇಂಟರ್‌ನೆಟ್‌ ಸೇವೆ ಬಲಪಡಿಸಲು ಹೆಚ್ಚಿನ ಒತ್ತು ನೀಡಲಾಗುತ್ತದೆ ಎಂದು ಹೇಳಿದ್ದರು.

ಅಲ್ಲದೆ ಮುಂದಿನ ದಿನಗಳಲ್ಲಿ ಎರಡನೇ ಹಂತದ 2 ನಗರಗಳಲ್ಲಿ ವರ್ಚುವಲ್‌ ಐಟಿ ಪಾರ್ಕ್‌ಗಳನ್ನು ಸ್ಥಾಪಿಸಿದರೆ ಹೆಚ್ಚು ಅನುಕೂಲ ಎಂಬುದು ನನ್ನ ವೈಯಕ್ತಿಕ ಅಭಿಪ್ರಾಯ. ಇದನ್ನು ಗಮನದಲ್ಲಿಟ್ಟುಕೊಂಡು ಎಲ್ಲ ನಗರಗಳಲ್ಲಿ ಇಂಟರ್‌ನೆಟ್‌ ಸಂಪರ್ಕ ಬಲಪಡಿಸುವುದು ಹಾಗೂ ಇಂಟರ್‌ನೆಟ್‌ ಸ್ಟೋರೇಜ್‌ (ಕ್ಲೌಡ್‌ ಸ್ಟೋರೇಜ್‌) ಸಾಮರ್ಥ್ಯ ಹೆಚ್ಚಿಸುವುದಕ್ಕೆ ಒತ್ತು ನೀಡಲಾಗುತ್ತದೆ. ದೇಶದ ಎಲ್ಲ ಗ್ರಾಮ ಪಂಚಾಯಿತಿಗಳಿಗೆ ಬ್ರಾಡ್‌ಬ್ಯಾಂಡ್‌ ಸಂಪ‍ರ್ಕ ಕಲ್ಪಿಸಿ, ಆ ಮೂಲಕ 6 ಲಕ್ಷಕ್ಕೂ ಅಧಿಕ ಹಳ್ಳಿಗಳಿಗೆ ವೈಫೈ ಸೇವೆ ಒದಗಿಸಬೇಕೆಂಬ ಕನಸಿನೊಂದಿಗೆ ಪ್ರಧಾನಿ ನರೇಂದ್ರ ಮೋದಿ ಅವರು ಕೋವಿಡ್‌ ಪೂರ್ವದಲ್ಲೇ ‘ಭಾರತ್‌ನೆಟ್‌’ಗೆ ಚಾಲನೆ ನೀಡಿದ್ದರು. ಇದು ದೂರದೃಷ್ಟಿಯ ಯೋಜನೆ. ಕೋವಿಡ್‌ ನಂತರದ ಕಾಲದಲ್ಲಿ ಇಂಟರ್‌ನೆಟ್‌ ಸೌಕರ್ಯ ತೀರಾ ಅಗತ್ಯ. ಹೀಗಾಗಿಯೇ ನಮ್ಮ ಸಚಿವಾಲಯವು ಪ್ರತಿ ಜಿಲ್ಲೆಯ ಒಂದು ಹಳ್ಳಿಯಂತೆ ಒಟ್ಟು 5 ಸಾವಿರ ಹಳ್ಳಿಗಳಿಗೆ ಇಂಟರ್‌ನೆಟ್‌ ಸೌಕರ್ಯ ಒದಗಿಸಲು ಮುಂದಾಗಿದೆ. ಕಳೆದ ಐದು ವರ್ಷಗಳಲ್ಲಿ ಕೌಶಲ ಭಾರತ ಮಿಷನ್‌ ಅಡಿಯಲ್ಲಿ ಪ್ರತಿ ಜಿಲ್ಲೆಗೆ ಒಂದರಂತೆ 800ಕ್ಕೂ ಅಧಿಕ ಪ್ರಧಾನಮಂತ್ರಿ ಕೌಶಲ ಕೇಂದ್ರಗಳನ್ನು ಆರಂಭಿಸಲಾಗಿದೆ. 20 ಸಾವಿರಕ್ಕೂ ಹೆಚ್ಚು ತರಬೇತಿ ಕೇಂದ್ರಗಳನ್ನು ತೆರೆಯಲಾಗಿದೆ. 14 ಸಾವಿರ ಐಟಿಐ, ಸುಮಾರು 2 ಸಾವಿರ ಜನಶಿಕ್ಷಣ ಸಂಸ್ಥಾನಗಳನ್ನು ಸ್ಥಾಪಿಸಿ 2 ಕೋಟಿಗೂ ಅಧಿಕ ಜನರಿಗೆ ಕೌಶಲ ತರಬೇತಿ ನೀಡಲಾಗಿದೆ ಎಂದು ಹೇಳಿದ್ದರು.
 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಯುಕ್ರೇನ್-ರಷ್ಯಾ ಶಾಂತಿ ಒಪ್ಪಂದ ಸನಿಹ: ಸುಳಿವು ನೀಡಿದ ಯುಕ್ರೇನ್

2026 T20 ವಿಶ್ವಕಪ್: ಕೊಲಂಬೋದಲ್ಲಿ ಫೆ.15 ರಂದು ಭಾರತ- ಪಾಕ್ ಪಂದ್ಯ

ಕಾರು ಅಪಘಾತದಲ್ಲಿ ಐಎಎಸ್ ಅಧಿಕಾರಿ ಮಹಾಂತೇಶ್ ಬೀಳಗಿ ಸೇರಿ ಮೂವರು ಸಾವು: ಸಿಎಂ, ಡಿಸಿಎಂ ಸಂತಾಪ

CM ಬದಲಾವಣೆ ನಾಲ್ಕರಿಂದ ಐದು ಜನರ ನಡುವೆ ನಡೆದ "ರಹಸ್ಯ ಒಪ್ಪಂದ": ಡಿಕೆಶಿ​ ಸ್ಫೋಟಕ ಹೇಳಿಕೆ

ರಾಸಾಯನಿಕಗಳು, ಎಲೆಕ್ಟ್ರಾನಿಕ್ ಘಟಕಗಳ ಸುಲಭ ಲಭ್ಯತೆಯಿಂದ ಐಇಡಿ ಅಪಾಯ ಹೆಚ್ಚು: NSG

SCROLL FOR NEXT