ರಾಜ್ಯ

ವಾಯುಭಾರ ಕುಸಿತ, ಮುಂದುವರೆದ ಮಳೆ ಅಬ್ಬರ

Srinivasamurthy VN

ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿರುವುದರಿಂದ ರಾಜ್ಯದ ಹಲವೆಡೆ ಇದೇ 13 ರವರೆಗೂ ಮಳೆಯ ಅಬ್ಬರ ಮುಂದುವರೆಯಲಿದೆ.

ಶಿವಮೊಗ್ಗ, ಮಂಗಳೂರು, ಉಡುಪಿ, ಉತ್ತರ ಕನ್ನಡ, ಚಿಕ್ಕಮಗಳೂರು, ಕೊಡಗು ಜಿಲ್ಲೆಗಳಲ್ಲಿ ಕಳದೆ ಕೆಲ ದಿನಗಳಿಂದ ಮಳೆಯಾಗುತ್ತಿದೆ. ಉಡುಪಿ, ದಕ್ಷಿಣ ಕನ್ನಡ, ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಇದೆ 13ರವರೆಗೂ ಮಳೆ ಮುಂದುವರೆಯಲಿದೆ ಎಂದು ಭಾರತಿಯ ಹವಾಮಾನ  ಇಲಾಖೆ ಮುನ್ಸೂಚನೆ ನೀಡಿದೆ.

ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಕಲಬುರ್ಗಿ, ಕೊಪ್ಪಳ, ವಿಜಯಪುರ, ಯಾದಗಿರಿ, ಚಿಕ್ಕಮಗಳೂರು, ಹಾಸನ, ಕೊಡಗು, ಶಿವಮೊಗ್ಗ, ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಕೋಲಾರ, ರಾಮನಗರ, ತುಮಕೂರು, ಮಂಡ್ಯ, ಮೈಸೂರು, ಚಾಮರಾಜನಗರ, ಬಳ್ಳಾರಿ, ಚಿತ್ರದುರ್ಗ,  ದಾವಣಗೆರೆ, ಬೀದರ್, ಕಲಬುರಗಿ, ವಿಜಯಪುರ, ರಾಯಚೂರು, ಯಾದಗಿರಿ, ಬೆಳಗಾವಿ, ಕೊಪ್ಪಳ, ಗದಗ, ಧಾರವಾಡ ಮತ್ತು ಹಾವೇರಿ ಜಿಲ್ಲೆಗಳಲ್ಲಿ ಕಳದೆ ಎರಡು ದಿನಗಳಿಂದಲೂ ಮಳೆಯಾಗುತ್ತಿದೆ ಎಂದೂ ಇಲಾಖೆ ವರದಿ ಹೇಳಿದೆ. 

ಪ್ರಮುಖವಾಗಿ ಕರಾವಳಿ ಕರ್ನಾಟಕ ಭಾಗದ ಜಿಲ್ಲೆಗಳಲ್ಲಿ ವ್ಯಾಪಕವಾದ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಇತ್ತ ಮಲೆನಾಡು ಜಿಲ್ಲೆಗಳಲ್ಲಿ ಚದುರಿದ ಅತಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. NIK (ಉತ್ತರ ಒಳನಾಡು) ಮತ್ತು SIK (ದಕ್ಷಿಣ ಒಳನಾಡು) ಜಿಲ್ಲೆಗಳಲ್ಲಿ  ಚದುರಿದ ಅತಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.
 

SCROLL FOR NEXT