ರಾಜ್ಯ

ಕೋವಿಡ್-19: ರಾಜ್ಯದಲ್ಲಿಂದು 803 ಹೊಸ ಪ್ರಕರಣ, 802 ಗುಣಮುಖ, 17 ಸಾವು ದಾಖಲು

Nagaraja AB

ಬೆಂಗಳೂರು: ಕಳೆದ 24 ಗಂಟೆಗಳಲ್ಲಿ ರಾಜ್ಯದಲ್ಲಿ ಹೊಸದಾಗಿ 803 ಕೋವಿಡ್-19 ಪ್ರಕರಣ ಪತ್ತೆಯಾಗಿದೆ. ಇದರೊಂದಿಗೆ ಸೋಂಕಿತರ ಒಟ್ಟು ಸಂಖ್ಯೆ 2,96,1735ಕ್ಕೆ ಏರಿಕೆಯಾಗಿದೆ.  802 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. 

ಸಾಂಕ್ರಾಮಿಕದಿಂದ ಗುಣಮುಖರಾದವರ ಒಟ್ಟು ಸಂಖ್ಯೆ 2,90,7548 ಆಗಿದೆ. ರಾಜ್ಯದಲ್ಲಿ ಸದ್ಯ 16,656 ಸಕ್ರಿಯ ಪ್ರಕರಣಗಳಿರುವುದಾಗಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.

ಸೋಂಕಿನಿಂದ  ಇಂದು 17 ಮಂದಿ ಸಾವನ್ನಪ್ಪಿದ್ದು, ಒಟ್ಟಾರೇ ಮೃತರ ಸಂಖ್ಯೆ 37504ಕ್ಕೆ ಏರಿಕೆಯಾಗಿದೆ. ಸೋಂಕಿನ ಶೇಕಡಾವಾರು ಪ್ರಮಾಣ ಶೇ. 0.80 ರಷ್ಟಿದ್ದು, ಮರಣ ಪ್ರಮಾಣ ಶೇ. 2.11 ರಷ್ಟಿದೆ.
 
ಬೆಂಗಳೂರಿನಲ್ಲಿ 255 ಹೊಸ ಪ್ರಕರಣ ಪತ್ತೆಯಾಗಿದ್ದು, 107 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.
6 ಮಂದಿ ಸೋಂಕಿನಿಂದ ಮೃತಪಟ್ಟಿದ್ದಾರೆ.

SCROLL FOR NEXT